Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುತ್ಲೂರು ಶಾಲೆಗೆ ಜಾಗತಿಕ ಬಂಟರ ಸಂಘದಿಂದ...

ಕುತ್ಲೂರು ಶಾಲೆಗೆ ಜಾಗತಿಕ ಬಂಟರ ಸಂಘದಿಂದ ನೆರವು

ವಾರ್ತಾಭಾರತಿವಾರ್ತಾಭಾರತಿ14 Dec 2019 9:33 PM IST
share
ಕುತ್ಲೂರು ಶಾಲೆಗೆ ಜಾಗತಿಕ ಬಂಟರ ಸಂಘದಿಂದ ನೆರವು

ಮಂಗಳೂರು: ಡಿ.14: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಶಿಕ್ಷಣ ಸಂಸ್ಥೆಗಳು, ದೇವಸ್ಥಾನಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಈಗಾಗಲೇ ನೆರವು ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲೂ ಅದನ್ನು ಮುಂದುವರಿಸಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಕರ್ತರ ಸಂಘದ ಪ್ರಥಮ ಗ್ರಾಮ ವಾಸ್ತವ್ಯ ನಡೆದ ಕುತ್ಲೂರು ಸರಕಾರಿ ಶಾಲೆಗೆ ಪೀಠೋಪಕರಣ ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನ ವಿತರಿಸಿ ಅವರು ಮಾತನಾಡಿದರು.

ಉತ್ತಮ ಶಿಕ್ಷಣದಿಂದ ಮಾತ್ರ ಸುದೃಢ ಸಮಾಜ ನಿರ್ಮಾಣ ಸಾಧ್ಯವಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಮುಂಬಯಿಯ ಉದ್ಯಮಿಗಳು, ದಾನಿಗಳ ಸಹಾಯದಿಂದ ಸಾಮಾಜಿಕ ಸೇವೆಯನ್ನು ಮಾಡುತ್ತಿವೆ. ಎರಡು ವರ್ಷಗಳಿಂದ ಸಂಘದಿಂದ ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ವಿಶೇಷ ನೆರವನ್ನು ನೀಡುತ್ತಾ ಬರಲಾಗಿದೆ. ಸಹಕಾರ ಕೇಳಿ ಬಂದ ಯಾವುದೇ ಮನವಿಯನ್ನು ಈವರೆಗೆ ತಿರಸ್ಕಾರ ಮಾಡಿಲ್ಲ. ಜಾಗತಿಕ ಬಂಟರ ಸಂಘದಿಂದ ಕುತ್ಲೂರು ಶಾಲೆಯ ಪೀಠೋಪಕರಣಕ್ಕೆ ಮತ್ತು ಆ ಶಾಲೆಯ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಚೆಕ್ ಹಸ್ತಾಂತರ ಮಾಡಲಾಗಿದೆ. ಕುತ್ಲೂರು ಶಾಲೆಯನ್ನು  ಸಂಘ ದತ್ತು ತೆಗೆದುಕೊಳ್ಳುವ ಬೇಡಿಕೆ ಬಂದಿದ್ದು ಸಂಘದ ಸಭೆಯಲ್ಲಿ ಪ್ರಸ್ತಾಪ ಮಾಡಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕುತ್ಲೂರು ಸರಕಾರಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ರಾಮಚಂದ್ರ ಭಟ್ ಮಾತನಾಡಿ, ಜಾಗತಿಕ ಬಂಟರ ಸಂಘದಿಂದ ಶಾಲೆಗೆ ನೀಡಿದ ಸಹಕಾರ ನಿಜಕ್ಕೂ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಿದೆ. ದ.ಕ. ಜಿಲ್ಲಾ ಪತ್ರಕರ್ತರ ಸಂಘ ಶಾಲೆಯಲ್ಲಿ ಗ್ರಾಮವಾಸ್ತವ್ಯ ಮಾಡಿದ ಬಳಿಕ ಶಾಲೆಯ ಚಿತ್ರಣವೇ ಬದಲಾಗಿದ್ದು, ಶಾಲೆಗೆ ತುಂಬಾ ಅನುಕೂಲವಾಗಿದೆ ಎಂದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮವಾಸ್ತವ್ಯ, ಬ್ರ್ಯಾಂಡ್‌ಮಂಗಳೂರು, ಪತ್ರಕರ್ತರಿಗೆ ಕಾರ್ಯಾಗಾರ, ಪತ್ರಕರ್ತರ ಆರೋಗ್ಯ ಶಿಬಿರದಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಗ್ರಾಮವಾಸ್ತವ್ಯದಲ್ಲಿ ಪತ್ರಕರ್ತರ ಸಂಘ ನೀಡಿದ ಬಹುತೇಕ ಬೇಡಿಕೆಗಳನ್ನು ದಾನಿಗಳು, ಅಧಿಕಾರಿಗಳ ಸಹಕಾರಿಂದ ಈಡೇರಿಸಲಾಗಿದೆ ಎಂದರು.

ದಾನಿಗಳಾದ ಜಾಗತಿಕ ಬಂಟರ ಸಂಘದಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಭವನ ಟ್ರಸ್‌ನ ಅಧ್ಯಕ್ಷ ಆನಂದ್ ಶೆಟ್ಟಿ, ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕಾರಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ,ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್ ಉಪಸ್ಥಿತರಿದ್ದರು.

ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಕೋಟ್ಯಾನ್ ಪಡು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X