Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದ...

ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದ ವ್ಯಾಜ್ಯದ ಡಿಸಿ ವರದಿ ಸಂಶಯಾಸ್ಪದ: ಹೈಕೋರ್ಟ್‌ಗೆ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ15 Dec 2019 8:27 PM IST
share
ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದ ವ್ಯಾಜ್ಯದ ಡಿಸಿ ವರದಿ ಸಂಶಯಾಸ್ಪದ: ಹೈಕೋರ್ಟ್‌ಗೆ ಹೇಳಿಕೆ

ಬೆಂಗಳೂರು, ಡಿ.15: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳಿಗೆ ಸಂಬಂಧಿಸಿದ ದೂರುಗಳನ್ನು ಆಧರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜ್ಯ ಮುಜರಾಯಿ ಇಲಾಖೆ ಆಯುಕ್ತರಿಗೆ ನೀಡಿರುವ ವರದಿ ಬಗ್ಗೆ ವ್ಯಾಜ್ಯದಲ್ಲಿ ಅರ್ಜಿದಾರರೂ ಆಗಿರುವ ದೇವಸ್ಥಾನದ ಪಾರಂಪರಿಕ ಮುಕ್ತೇಸರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ವರದಿ ಆಧರಿಸಿ ರಾಜ್ಯ ಮುಜರಾಯಿ ಇಲಾಖೆ ಆಯುಕ್ತರು ಯಕ್ಷಗಾನ ಮೇಳದ ಹರಾಜು ಪ್ರಕ್ರಿಯೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠವು ಮುಂದುವರಿಸಿತು.

ಈ ವೇಳೆ ಅರ್ಜಿದಾರರೂ ಆಗಿರುವ ದೇವಸ್ಥಾನದ ಪಾರಂಪರಿಕ ಮುಕ್ತೇಸರರ ಪರ ಹಿರಿಯ ವಕೀಲ ಪಿ.ಎಸ್. ರಾಜಗೋಪಾಲ ಅವರು ವಾದ ಮಂಡಿಸಿ, ಸಂಬಂಧಪಡದವರು ಕೊಟ್ಟ ದೂರನ್ನು ಆಧರಿಸಿ ಜಿಲ್ಲಾಧಿಕಾರಿ ತಮ್ಮ ಅಧಿಕಾರ ವ್ಯಾಪ್ತಿ ಮೀರಿ ವಿಚಾರಣೆ ನಡೆಸಿ ಮುಜರಾಯಿ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ. ವರದಿಯು ಅನೇಕ ದೋಷಗಳಿಂದ ಕೂಡಿದೆ. ಎಲ್ಲದಕ್ಕೂ ಮುಖ್ಯವಾಗಿ ಈ ವರದಿ ಸಂಶಯಾಸ್ಪದ, ದುರುದ್ದೇಶಪೂರ್ವಕ ಹಾಗೂ ಪೂರ್ವಗ್ರಹ ಪೀಡಿತ ಭಾವನೆಗಳಿಂದ ಕೂಡಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ದೇವಾಲಯದ ಸಂಪ್ರದಾಯಕ್ಕೆ ಅನುಗುಣವಾಗಿ ಶತಮಾನಗಳಿಂದ ಯೋಗ್ಯರು ಮೇಳಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ, ಯಾರೋ ಭ್ರಷ್ಟರು ನೀಡಿದ ದೂರಿನ ಅನುಸಾರ, ದೇವಾಲಯಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಗಳು ಮಾಡಿದ ಆಪಾದನೆಗಳನ್ನು ಜಿಲ್ಲಾಧಿಕಾರಿ ಪರಿಗಣಿಸಿದ್ದಾರೆ. ಹಾಗಾಗಿ ಅವರು ನೀಡಿರುವ ವರದಿ ದೇವಾಲಯದ ಅನೂಚಾನ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯುಂಟು ಮಾಡಿದೆ’ ಎಂದರು.

ಸಕ್ಷಮ ಪ್ರಾಧಿಕಾರದ ಹೆಸರಿನಲ್ಲಿ ವರದಿ ನೀಡಿರುವ ಜಿಲ್ಲಾಧಿಕಾರಿಗೆ ಅರ್ಜಿದಾರರು ವಿವರವಾದ ಆಕ್ಷೇಪಣೆ ಸಲ್ಲಿಸಿದ್ದಾರೆ. ಆದರೆ, ಅದನ್ನು ಕಡೆಗಣಿಸಲಾಗಿದೆ. ವರದಿಯಲ್ಲಿನ ಅಂಶಗಳೆಲ್ಲಾ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತಹ ವಿಷಯಗಳು. ಮುಜರಾಯಿ ಇಲಾಖೆ ಸಕ್ಷಮ ಪ್ರಾಧಿಕಾರವೇ ಅಲ್ಲ’ ಎಂದು ಪ್ರತಿಪಾದಿಸಿದರು.

ಇದೇ ವೇಳೆ ಪ್ರಕರಣದಲ್ಲಿ ಮಧ್ಯಂತರ ಅರ್ಜಿದಾರರಾದ ಭಾಗವತ ಸತೀಶ್ ಶೆಟ್ಟಿ ಪಟ್ಲ ಪರ ವಕೀಲ ಡಿ.ಆರ್. ರವಿಶಂಕರ್‌ವಾದ ಮಂಡಿಸಿ, ಯಕ್ಷಗಾನ ಮೇಳಗಳನ್ನು ಹರಾಜು ಮೂಲಕ ಆಯೋಜಿಸಬೇಕು ಎಂದು ರಾಜ್ಯ ಸರಕಾರ 2012ರಲ್ಲಿಯೇ ಹೇಳಿದೆ. ಆದರೆ, ಈ ನಿಯಮ ಕೇವಲ ಒಂದು ದೇವಸ್ಥಾನದಲ್ಲಿ ಮಾತ್ರ ಜಾರಿಗೆ ಬಂದಿದೆ. ಇನ್ನುಳಿದ ದೇವಾಲಯಗಳಲ್ಲಿ ಅಳವಡಿಕೆ ಆಗಿಲ್ಲ’.

ಯಕ್ಷಗಾನ ಮೇಳಗಳು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಹಿಂದೂ ದೇವಾಲಯಗಳಲ್ಲಿ ನಡೆಯುತ್ತದೆ. ಈ ಮೇಳಗಳನ್ನು ದೇವಾಲಯದ ಟ್ರಸ್ಟಿಗಳು ನಡೆಸಬೇಕೊ ಅಥವಾ ಹರಾಜು ಪ್ರಕ್ರಿಯೆ ಮೂಲ ನಡೆಸಬೇಕೊ ಎಂಬುದಕ್ಕೆ ಸಂಬಂಧಿಸಿದಂತೆ 2011ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿದೆ’ ಎಂದು ವಿವರಿಸಿದರು. ವಿಚಾರಣೆ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾಣೆಯನ್ನು ಡಿ.16ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X