Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನ್ನಾವೊ ಅತ್ಯಾಚಾರ ಪ್ರಕರಣ: ಇಂದು...

ಉನ್ನಾವೊ ಅತ್ಯಾಚಾರ ಪ್ರಕರಣ: ಇಂದು ತೀರ್ಪು ಸಾಧ್ಯತೆ

►ವಿಚಾರಣೆ ಪೂರ್ಣಗೊಳಿಸಿದ ದಿಲ್ಲಿ ಕೋರ್ಟ್ ► ಉಚ್ಛಾಟಿತ ಬಿಜೆಪಿ ಶಾಸಕ ಸೆಂಗಾರ್ ಪ್ರಮುಖ ಆರೋಪಿ

ವಾರ್ತಾಭಾರತಿವಾರ್ತಾಭಾರತಿ15 Dec 2019 10:58 PM IST
share
ಉನ್ನಾವೊ ಅತ್ಯಾಚಾರ ಪ್ರಕರಣ: ಇಂದು ತೀರ್ಪು ಸಾಧ್ಯತೆ

ಹೊಸದಿಲ್ಲಿ, ಡಿ.15: ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಆರೋಪಿಯಾಗಿರುವ 2017ರಲ್ಲಿ ಮಹಿಳೆಯೊಬ್ಬರ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ಕುರಿತ ತೀರ್ಪನ್ನು ದಿಲ್ಲಿಯ ನ್ಯಾಯಾಲಯವು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ.

ಸಾರ್ವಜನಿಕರು ಹಾಗೂ ಮಾಧ್ಯಮಗಳ ಅನುಪಸ್ಥಿತಿಯಲ್ಲಿ ಸಿಬಿಐ ಹಾಗೂ ಆರೋಪಿ ಪರ ವಕೀಲರುಗಳ ಅಂತಿಮ ವಾದಗಳನ್ನು ಆಲಿಸಿದ ಬಳಿಕ ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ಅವರು ಸೋಮವಾರ ತಾನು ತೀರ್ಪು ಪ್ರಕಟಿಸುವ ಸಾಧ್ಯತೆಯಿರುವುದಾಗಿ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ಉನ್ನಾವೊ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಲಕ್ನೋದ ನ್ಯಾಯಾಲಯದಿಂದ ದಿಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಆನಂತರ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 5ರಿಂದ ದಿನಂಪ್ರತಿ ನಡೆಸಿದ್ದರು.

ಯುವತಿಯು 2017ರಲ್ಲಿ ಅಪ್ರಾಪ್ತ ವಯಸ್ಕಳಾಗಿದ್ದಾಗ ಆಕೆಯನ್ನು ಸೆಂಗಾರ್, ಅಪಹರಿಸಿ ಅತ್ಯಾಚಾರವೆಸಗಿದ್ದಾನೆಂದು ಆಪಾದಿಸಲಾಗಿದೆ. ಪ್ರಕರಣದ ಇನ್ನೋರ್ವ ಆರೋಪಿ ಶಶಿಸಿಂಗ್ ವಿರುದ್ಧವೂ ನ್ಯಾಯಾಲಯವು ದೋಷಾರೋಪ ಹೊರಿಸಿತ್ತು.

ಉತ್ತರಪ್ರದೇಶದ ಬಂಗೆಮಾವು ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಶಾಸಕನಾಗಿ ಆಯ್ಕೆಯಾಗಿದ್ದ ಸೆಂಗಾರ್‌ನನ್ನು 2019ರಲ್ಲಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ನ್ಯಾಯಾಲಯವು ಆಗಸ್ಟ್ 9ರಂದು ಸೆಂಗಾರ್ ಹಾಗೂ ಶಶಿ ಸಿಂಗ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್‌ಗಳಾದ 120 ಬಿ ( ಕ್ರಿಮಿನಲ್ ಸಂಚು), 363 (ಅಪಹರಣ), 366 ( ಅಪಹರಣ ಅಥವಾ ವಿವಾಹಕ್ಕೆ ಮಹಿಳೆಯನ್ನು ಬಲವಂತಪಡಿಸಿದ್ದುದು), 376 (ಅತ್ಯಾಚಾರ) ಹಾಗೂ ಪೋಸ್ಕೊ ಕಾಯ್ದೆಯ ಇತರ ಕೆಲವು ಸೆಕ್ಷನ್‌ಗಳಡಿ ಮೊಕದ್ದಮೆ ದಾಖಲಿಸಿತ್ತು.

ಈ ವರ್ಷದ ಜುಲೈ 28ರಂದು ಯುವತಿಯು ಪ್ರಯಾಣಿಸುತ್ತಿದ್ದ ಕಾರಿಗೆ, ಟ್ರಕ್ಕೊಂದು ಡಿಕ್ಕಿ ಹೊಡೆದು ಆಕೆ ಗಂಭೀರವಾಗಿ ಗಾಯಗೊಂಡಿದ್ದಳು. ಈ ಅವಘಡದಲ್ಲಿ ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನ್ನಪ್ಪಿದ್ದರು. ಈ ಘಟನೆಯ ಹಿಂದೆ ಸೆಂಗಾರ್‌ನ ಕೈವಾಡವಿದೆಯೆಂದು ಯುವತಿಯ ಕುಟುಂಬ ಆಪಾದಿಇಸಿದೆ.

2018ರ ಎಪ್ರಿಲ್ 3ರಂದು ಮಹಿಳೆಯ ತಂದೆಯನ್ನು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧಿಸಲಾಗಿತ್ತು. ಕೆಲವು ದಿನಗಳ ನಂತರ , ಜುಲೈ 9ರಂದು ಆತ ನ್ಯಾಯಾಂಗ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು.

ಈ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯವು ಶಾಸಕ, ಆತನ ಸಹೋದರ ಅತುಲ್ ಹಾಗೂ ಇತರ 9 ಮಂದಿಯ ವಿರುದ್ಧ ಕೊಲೆ ಹಾಗೂ ಇತರ ಆರೋಪಗಳನ್ನು ಹೊರಿಸಿತ್ತು.

 ಅತ್ಯಾಚಾರ ಪ್ರಕರಣದ ವಿಚಾರಣೆಯಲ್ಲಿ 13 ಮಂದಿ ಪ್ರಾಸಿಕ್ಯೂಶನ್ ಸಾಕ್ಷಿಗಳು ಹಾಗೂ 9 ಮಂದಿ ಕಕ್ಷಿದಾರರ ಪರ ಸಾಕ್ಷಿಗಳ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿತ್ತು. ಅತ್ಯಾಚಾರ ಸಂತ್ರಸ್ತೆಯ ತಾಯಿ ಹಾಗೂ ಚಿಕ್ಕಪ್ಪ ಪ್ರಕರಣದ ಮುಖ್ಯ ಸಾಕ್ಷಿಗಳಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X