Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ...

ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಶಾಲಾ ವಾರ್ಷಿಕೋತ್ಸವ, ಮೀಲಾದ್ ಮೀಟ್

ವಾರ್ತಾಭಾರತಿವಾರ್ತಾಭಾರತಿ16 Dec 2019 2:07 PM IST
share
ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಶಾಲಾ ವಾರ್ಷಿಕೋತ್ಸವ, ಮೀಲಾದ್ ಮೀಟ್

ಬಂಟ್ವಾಳ, ಡಿ. 15: ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 15ನೇ ವಾರ್ಷಿಕೋತ್ಸವ ಹಾಗೂ ತೌಹೀದ್ ಅರೆಬಿಕ್ ಮದ್ರಸ ಮಕ್ಕಳ ಮೀಲಾದ್ ಮೀಟ್ ಕಾರ್ಯಕ್ರಮ ತೌಹೀದ್ ಶಾಲಾ ವಠಾರದಲ್ಲಿ ರವಿವಾರ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಗೀಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮೌಲ್ಯಾಧರಿತ ಶಿಕ್ಷಣವು ಪ್ರತೀ ಶಿಕ್ಷಣ ಸಂಸ್ಥೆಯ ಉದ್ದೇಶವಾಗಬೇಕು. ಈ ನಿಟ್ಟಿನಲ್ಲಿ ತೌಹೀದ್ ಶಿಕ್ಷಣ ಸಂಸ್ಥೆಯು ಧಾರ್ಮಿಕ, ಲೌಖಿಕ ಶಿಕ್ಷಣ ನೀಡುವ ಮೂಲಕ ಬೆಳೆದು ನಿಂತಿದೆ ಎಂದು ಹೇಳಿದರು.

ಪಣಂಬೂರು ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಗೆ ಒಗ್ಗಿಕೊಳ್ಳುವುದರ ಮೂಲಕ ಪ್ರಯೋಗಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕಾಗಿದೆ ಎಂದರು. ಇದೇ ವೇಳೆ ಪಣಂಬೂರು ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರನ್ನು ಸನ್ಮಾನಿಸಲಾಯಿತು.

ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್ ಅಧ್ಯಕ್ಷತೆ ವಹಿಸಿದ್ದರು. ತೌಹೀದ್ ಶಿಕ್ಷಣ ಸಂಸ್ಥೆಯ ಮುಹಮ್ಮದ್ ಸಗೀರ್ ಪ್ರಸ್ತಾವಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮೆಟಿಲ್ಡಾ ಡಿಕೊಸ್ತಾ ವಾರ್ಷಿಕ ವರದಿ ವಾಚಿಸಿದರು. ಪ್ರತಿಭಾ ಪುಸರಸ್ಕಾರ, ಬಹುಮಾನಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಐಬಿ ಗ್ರೂಪ್‍ನ ಇಕ್ಬಾಲ್ ದುಬೈ, ಶಿಕ್ಷಣ ಸಂಯೋಜಕಿ ಸುಶೀಲ, ಪುರಸಭಾ ಸದಸ್ಯ ಮುನಿಶ್ ಅಲಿ, ಪ್ರಮುಖರಾದ ಪಿ. ಇಬ್ರಾಹಿಂ, ಬಿ.ಮುಹಮ್ಮದ್, ರಿಯಾಝ್ ಹುಸೈನ್, ಹನೀಫ್, ಸಂಶುದ್ದೀನ್, ಅಬೂಬಕರ್ ಸಿದ್ದೀಕ್ ರಹ್ಮಾನಿ, ರೈಫಾನ್ ಅಹ್ಮದ್, ವೆಂಕಪ್ಪ ಪೂಜಾರಿ ಹಾಜರಿದ್ದರು.

ಕಾರ್ಯದರ್ಶಿ ಬಿ.ಅಬ್ದುಕ್ ಖಾದರ್ ಮಾಸ್ಟರ್ ಸ್ವಾಗತಿಸಿ, ಶಿಕ್ಷಕಿಯರಾದ ರಚನಾ ವಂದಿಸಿ, ಸೈನಾಝ್, ಶಾಕಿರ, ವೀಣಾ ನಿರೂಪಿಸಿದರು.

ಮೀಲಾದ್ ಮೀಟ್ 

ಎಸ್‍ಎಂಎಫ್ ಅಧ್ಯಕ್ಷ ಇರ್ಷಾದ್ ದಾರಿಮಿ ಮೀಲಾದ್ ಮೀಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟ್ವಾಳ ಮಸೀದಿ ಮುದರ್ರಿಸ್ ಉಸ್ಮಾನ್ ದಾರಿಮಿ ದುಆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜುಮಾ ಮಸೀದಿ ಅಧ್ಯಕ್ಷ ಹೈದರ್ ಅಲಿ, ಬಂದರ್ ಮಸೀದಿ ಖತೀಬ್ ಸದಕತ್ತುಲ್ಲಾ ಫೈಝಿ, ಬಿ.ಎಚ್.ಅಬ್ದುಲ್ ಖಾದರ್, ಅಬ್ದುಲ್ ಹಮೀದ್ ದಾರಿಮಿ, ಅಯ್ಯುಬ್ ಮುಸ್ಲಿಯಾರ್, ಮುನೀಶ್ ಅಲಿ, ಅಕ್ಬರ್ ಅಡ್ಡೂರು ಹಾಜರಿದ್ದರು. ಈ ಸಂದರ್ಭ ಅಲ್ ಬಿರ್ರ್ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X