ಮಂಗಳೂರು: ರಸ್ತೆ ತಡೆ ನಡೆಸಿದ ಸಿಎಫ್ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್
ಜಾಮಿಯಾ ವಿವಿಯಲ್ಲಿ ಪೊಲೀಸ್ ದೌರ್ಜನ್ಯಕ್ಕೆ ಖಂಡನೆ
![ಮಂಗಳೂರು: ರಸ್ತೆ ತಡೆ ನಡೆಸಿದ ಸಿಎಫ್ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಂಗಳೂರು: ರಸ್ತೆ ತಡೆ ನಡೆಸಿದ ಸಿಎಫ್ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್](https://www.varthabharati.in/sites/default/files/images/articles/2019/12/19/223903-1576745359.jpg)
ಮಂಗಳೂರು, ಡಿ.16: ಜಾಮಿಮಾ ಮಿಲ್ಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಎಸಗಿದ ದೌರ್ಜನ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಸೋಮವಾರ ಸಂಜೆ ನಗರದ ಬಲ್ಮಠದಲ್ಲಿರುವ ಕಲೆಕ್ಟರ್ ಗೇಟ್ ಬಳಿ ರಸ್ತೆ ತಡೆ ನಡೆಸಿದರು. ಈ ಸಂದರ್ಭ ಪೊಲೀಸರು ಸುಮಾರು 50ಕ್ಕೂ ಅಧಿಕ ಸಿಎಫ್ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ ವಶಕ್ಕೆ ತೆಗೆದುಕೊಂಡರು.
ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲೆ ನಡೆಸಿದ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಸಲು ಸಿಎಫ್ಐ ಕಾರ್ಯಕರ್ತರಿಗೆ ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ರಸ್ತೆ ನಡೆಸಲು ನಿರ್ಧರಿಸಿದರು. ಅದರಂತೆ ಖಾಸಗಿ ಬಸ್ಸೊಂದರಲ್ಲಿ ಆಗಮಿಸಿದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು. ಅಷ್ಟರಲ್ಲಿ ಪೊಲೀಸರು ಸಿಎಫ್ಐ ಕಾರ್ಯಕರ್ತರ ಮೇಲೆ ಲಾಠಿ ಜಾರ್ಜ್ ನಡೆಸಿದರಲ್ಲದೆ, ಪೊಲೀಸ್ ಬಸ್ಸಿನಲ್ಲಿ ಕರೆದೊಯ್ದರು.