Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರೋಳಿ ವಾರ್ಡ್ ಅಭಿವೃದ್ಧಿಗೆ 2.19...

ಮರೋಳಿ ವಾರ್ಡ್ ಅಭಿವೃದ್ಧಿಗೆ 2.19 ಕೋ.ರೂ. ಅನುದಾನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Dec 2019 8:34 PM IST
share
ಮರೋಳಿ ವಾರ್ಡ್ ಅಭಿವೃದ್ಧಿಗೆ 2.19 ಕೋ.ರೂ. ಅನುದಾನ ಬಿಡುಗಡೆ

ಮಂಗಳೂರು, ಡಿ.16: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ 2.19 ಕೋ.ರೂ.ಅನುದಾನ ಬಿಡುಗಡೆಗೊಳಿಸಿರುವುದಾಗಿ ಶಾಸಕ ಡಿ. ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯಿಂದ 58 ಲಕ್ಷ ರೂ.ಬಿಡುಗಡೆಯಾಗಿದ್ದು, ಕರ್ಣಾಟಕ ಬ್ಯಾಂಕ್‌ನ ಪ್ರಧಾನ ಕಚೇರಿಯ ಎದುರಿನ ರಸ್ತೆಗೆ ಡಾಮರೀಕರಣಕ್ಕೆ 50 ಲಕ್ಷ ರೂ., ಉಜ್ಜೋಡಿ ಪ್ರೇಮ್ ನಗರದಲ್ಲಿ ಕಾಲು ಸಂಕ ಪುನರ್ನಿರ್ಮಾಣಕ್ಕೆ 8 ಲಕ್ಷ ರೂ.ಮೀಸಲಿಡಲಾಗಿದೆ. ಮಳೆಹಾನಿ ಪರಿಹಾರ ನಿಧಿಯಲ್ಲಿ 27 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಜಯನಗರ ಮುಖ್ಯ ರಸ್ತೆಯ ಬಳಿ ಮುಚ್ಚುಗುಂಡಿ ರಚನೆ ಕಾಮಗಾರಿಗೆ 2.50 ಲಕ್ಷ ರೂ., ಬಜ್ಜೋಡಿ ಬಿಕರ್ನಕಟ್ಟೆ ಬಳಿ ತಡೆಗೋಡೆ ದುರಸ್ತಿಗೆ 5 ಲಕ್ಷ ರೂ., ಬಜ್ಜೋಡಿ ಬಳಿ ತೋಡಿಗೆ ತಡೆಗೋಡೆ ನಿರ್ಮಾಣ ಹಾಗೂ ರಸ್ತೆ ದುರಸ್ತಿ ಕಾಮಗಾರಿಗೆ 5 ಲಕ್ಷ ರೂ., ಮರೋಳಿ ಕನಪತಗ್ಗು ಚಾಮುಂಡೇಶ್ವರಿ ಮಂದಿರದ ಬಳಿ ತಡೆಗೋಡೆ ದುರಸ್ತಿ ಕಾಮಗಾರಿಗೆ 5 ಲಕ್ಷ ರೂ,, ಬಿಕರ್ನಕಟ್ಟೆ ಬಜ್ಜೋಡಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ 5 ಲಕ್ಷ ರೂ., ಮರೋಳಿ ಬಳಿ ತೋಡು ದುರಸ್ತಿ ಕಾಮಗಾರಿಗೆ 5 ಲಕ್ಷ ರೂ.ಅನುದಾನ ಒದಗಿಸಲಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 74.5 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಮರೋಳಿ ಜೋಡುಕಟ್ಟೆ ಬಯಲು ರಂಗಮಂದಿರ ನಿರ್ಮಾಣದ ಮುಂದುವರೆದ ಕಾಮಗಾರಿಗೆ 25 ಲಕ್ಷ ರೂ., ಬಜ್ಜೋಡಿ ಮುಖ್ಯ ರಸ್ತೆಯಲ್ಲಿ ಚರಂಡಿ ಹಾಗೂ ಮೋರಿ ರಚನೆಗೆ 5 ಲಕ್ಷ ರೂ., ಬಜ್ಜೋಡಿ ಮುಖ್ಯ ರಸ್ತೆಯಲ್ಲಿ ಒಳಚರಂಡಿ ರಚನೆ ಕಾಮಗಾರಿಗೆ 5 ಲಕ್ಷ ರೂ., ಬಜ್ಜೋಡಿ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ 15 ಲಕ್ಷ ರೂ., ಅಡು ಮರೋಳಿ ಮಾರಿಕಾಂಬಾ ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 5 ಲಕ್ಷ ರೂ., ಸೂರ್ಯನಾರಾಯಣ ದೇವಸ್ಥಾನದ ಮುಂಭಾಗದ ಮನೆಯ ಎದುರು ಚರಂಡಿ ಹಾಗೂ ಮೋರಿ ರಚನೆ ಕಾಮಗಾರಿಗೆ 5 ಲಕ್ಷ ರೂ., ಮರೋಳಿ ಭಾರತ್ ಪ್ರಿಂಟರ್ಸ್ ಎದುರು ರೇಗೋ ಭಾಗ್ ಅಡ್ಡ ರಸ್ತೆಯ ಕಾಂಕ್ರಿಟೀಕರಣ ಹಾಗೂ ಚರಂಡಿ ರಚನೆಗೆ 5 ಲಕ್ಷ ರೂ., ಜಯನಗರ 4 ನೇ ಅಡ್ಡ ರಸ್ತೆಯ ಬಳಿ ಒಳ ಚರಂಡಿ ಅಭಿವೃದ್ಧಿ ಕಾಮಗಾರಿ 4.38 ಲಕ್ಷ, ಜಯನಗರ 4ನೇ ಅಡ್ಡರಸ್ತೆಯ ಕಾಮಗಾರಿಗೆ 4.67 ಲಕ್ಷ ರೂ. ಅನುದಾನ ನೀಡಲಾಗಿದೆ.

ಮನಪಾ ಸಾಮಾನ್ಯ ನಿಧಿಯಿಂದ 14.80 ಲಕ್ಷ ರೂ.ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ ಬಜ್ಜೋಡಿ ಬಳಿ ರಸ್ತೆ ಕಾಂಕ್ರಿಟೀಕರಣಕ್ಕೆ 5 ಲಕ್ಷ ರೂ., ಕನಪತಗ್ಗು ರಸ್ತೆಯ ಚಾಮುಂಡೇಶ್ವರಿ ದೇವಸ್ಥಾನದ ಬಳಿ ತಡೆಗೋಡೆ ರಚನೆ ಹಾಗೂ ಅಭಿವೃದ್ಧಿ ಕಾಮಗಾರಿಗೆ 5 ಲಕ್ಷ ರೂ., ಬಜ್ಜೋಡಿ, ತಾತವ್ ರಸ್ತೆ, ಜಯನಗರ ಅಡ್ಡರಸ್ತೆಗಳಲ್ಲಿ ಕುಡಿಯುವ ನೀರಿನ ಪೂರೈಕೆ ಅಭಿವೃದ್ಧಿಗೆ ಹೊಸ ಎಚ್‌ಡಿಪಿಇ ಕೊಳವೆ ಅಳವಡಿಕೆ ಕಾಮಗಾರಿಗೆ 4.80 ಲಕ್ಷ ರೂ.ಮೀಸಲಿಡಲಾಗಿದೆ.

ಕೇಂದ್ರ ಸರಕಾರದ 14ನೇ ಹಣಕಾಸು ಅನುದಾನದಡಿ 20 ಲಕ್ಷ ರೂ.ಬಿಡುಗಡೆಯಾಗಿದ್ದು ಮರೋಳಿ ಜಯನಗರ 4ನೇ ಅಡ್ಡರಸ್ತೆಯ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರದಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಅಡುಮರೋಳಿ ದೈವಸ್ಥಾನದ ಹತ್ತಿರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅದನ್ನು ವಿನಿಯೋಗಿಸಲಾಗುವುದು ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ 15 ಲಕ್ಷ ರೂ.ಬಿಡುಗಡೆಯಾಗಿದ್ದು ಮರೋಳಿ ಗ್ರಾಮದ ಆಡು ಎಂಬಲ್ಲಿ ತೋಡು ಅಭಿವೃದ್ಧಿ ಕಾಮಗಾರಿಗೆ ಮೀಸಲಿಡಲಾಗಿದೆ ಎಂದು ಕಾಮತ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X