ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜೈರಾಮ್ ರಮೇಶ್ ಸುಪ್ರೀಂ ಕೋರ್ಟ್‌ಗೆ

ಹೊಸದಿಲ್ಲಿ, ಡಿ. 16: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಮನವಿಯ ವಿಚಾರಣೆ ಬುಧವಾರ ನಡೆಯಲಿದೆ.
ನೂತನ ಕಾಯ್ದೆ ವಿರುದ್ಧ ಜೈರಾಮ್ ರಮೇಶ್ ಅವರು ವೈಯುಕ್ತಿಕ ನೆಲೆಯಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಮನವಿಯ ವಿಚಾರಣೆ ಡಿಸೆಂಬರ್ 13ರಂದು ನಡೆಯಲಿದೆ. ಅವಸರದ ಹಾಗೂ ಕಪಟ ಪೌರತ್ವ ತಿದ್ದುಪಡಿ ಸುತ್ತ ಬೆಳೆದ ಉದ್ವಿಗ್ನ ಪರಿಸ್ಥಿತಿ ಗಮನದಲ್ಲಿರಿಸಿಕೊಂಡು, ಮನವಿಯ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ನ ಮೊರೆ ಹೋದೆ ಎಂದು ಅವರು ಹೇಳಿದ್ದಾರೆ. ತನ್ನ ಮನವಿಯ ವಿಚಾರಣೆಯನ್ನು ಬುಧವಾರ ನಡೆಸಲು ನ್ಯಾಯಮೂರ್ತಿ ಒಪ್ಪಿಕೊಂಡಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
Next Story





