Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಾಲಕ್ಷ್ಮೀ ಉಚ್ಚಿಲ ತಂಡಕ್ಕೆ ಪಡುಬಿದ್ರಿ...

ಮಹಾಲಕ್ಷ್ಮೀ ಉಚ್ಚಿಲ ತಂಡಕ್ಕೆ ಪಡುಬಿದ್ರಿ ಕರಾವಳಿ ಕಬಡ್ಡಿ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ16 Dec 2019 10:44 PM IST
share
ಮಹಾಲಕ್ಷ್ಮೀ ಉಚ್ಚಿಲ ತಂಡಕ್ಕೆ ಪಡುಬಿದ್ರಿ ಕರಾವಳಿ ಕಬಡ್ಡಿ ಪ್ರಶಸ್ತಿ

ಪಡುಬಿದ್ರಿ: ಪಡುಬಿದ್ರಿ ಕರಾವಳಿ ಮೊಗವೀರ ಯುವ ಸಂಘಟನೆಯ ಆಶ್ರಯದಲ್ಲಿ ಪಡುಬಿದ್ರಿ ಬೀಚ್‍ನಲ್ಲಿ ರವಿವಾರ ರಾತ್ರಿ ನಡೆದ ಅವಿಭಜಿತ ದಕ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಮಹಾಲಕ್ಷ್ಮೀ ಉಚ್ಚಿಲ ತಂಡವು ಪ್ರಶಸ್ತಿ ಪಡೆಯಿತು.

ಫೈನಲ್‍ನಲ್ಲಿ ಪಡುಬಿದ್ರಿಯ 7 ರಾಕರ್ಸ್ ಆಪತ್ಬಾಂಧವ ತಂಡವನ್ನು ರೋಮಾಂಚಕಾರಿಯಾಗಿ ಸೋಲಿಸಿ ಮಹಾಲಕ್ಷ್ಮೀ ತಂಡವು ಪ್ರಶಸ್ತಿ ಜತೆಗೆ ನಗದು ರೂ 30,000 ಪಡೆಯಿತು.

ಪಡುಬಿದ್ರಿಯ 7 ರಾಕರ್ಸ್ ಆಪತ್ಬಾಂಧವ ತಂಡವು ದ್ವಿತೀಯ ಪ್ರಶಸ್ತಿ ಸಹಿತ ನಗದು ರೂ.20,000 ಪಡೆಯಿತು. ಬಗಂಬಿಲ ತತ್ವಮಸಿ ತಂಡವು ತೃತೀಯ ಪ್ರಶಸ್ತಿಯೊಂದಿಗೆ ನಗದು ರೂ.10,000, ಹಾಗೂ ಬಂಟ್ವಾಳ ಭದ್ರ ಚಾಲೆಂಜರ್ಸ್ ತಂಡವು ಚತುರ್ಥ ಪ್ರಶಸ್ತಿಯೊಂದಿಗೆ ನಗದು ರೂ.5,000 ಪಡೆಯಿತು. ಮಹಾಲಕ್ಷ್ಮೀ ತಂಡದ ವಿಶ್ವರಾಜ್ ಉತ್ತಮ ಸವ್ಯಸಾಚಿ, ಅದೇ ತಂಡದ ಕಲಂದರ್ ಉತ್ತಮ ಹಿಡಿತಗಾರ ಮತ್ತು 7 ರಾಕರ್ಸ್ ತಂಡದ ಪ್ರತಾಪ್ ಉತ್ತಮ ದಾಳಿಗಾರ ವೈಯಕ್ತಿಕ ಪ್ರಶಸ್ತಿ ಪಡೆದರು.

ಅವಿಭಜಿತ ದ.ಕ. ಜಿಲ್ಲೆಯ ಬಲಿಷ್ಠ 22 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದು, ಉಡುಪಿ ಸಾಯಿರಾಧಾ ಗ್ರೂಪ್ಸ್ ನ ಸಿಎಮ್‍ಡಿ ಮನೋಹರ ಶೆಟ್ಟಿ ಮತ್ತು ಪಡುಬಿದ್ರಿ ಬೀಡು ಅರಸರಾದ ರತ್ನಾಕರರಾಜ್ ಅರಸು ಕಿನ್ಯಕ್ಕ ಬಲ್ಲಾಳರು ಪಂದ್ಯಾಟವನ್ನು ಉದ್ಘಾಟಿಸಿದ್ದರು.

ಸಾಧು ಸಾಲ್ಯಾನ್ ಮಲ್ಪೆ, ಬೆಂಗಳೂರು ಉದ್ಯಮಿ ತಿಲಕ್ ಸಾಲ್ಯಾನ್ ಕಾಡಿಪಟ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀತಾ ಗುರುರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ  ದಮಯಂತಿ ವಿ. ಅಮೀನ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನವೀನ್‍ಚಂದ್ರ ಜೆ.ಶೆಟ್ಟಿ, ಸುಕುಮಾರ್ ಶ್ರೀಯಾನ್, ಲೀಲಾಧರ್ ಸಾಲ್ಯಾನ್, ವಿಶ್ವನಾಥ ಕರ್ಕೇರ, ಅಶೋಕ್ ಸಾಲ್ಯಾನ್, ಸೇವಂತಿ ಸದಾಶಿವ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಪ್ರಶಸ್ತಿ ವಿತರಣೆ: ಸೋಮವಾರ ಮುಂಜಾನೆ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪಡುಬಿದ್ರಿ ಕರಾವಳಿ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿಜೇತ್ ಸಾಲ್ಯಾನ್, ಉದ್ಯಮಿ ಶೇಖರ್ ಸಾಲ್ಯಾನ್ ನಡಿಪಟ್ಣ,  ವಿಶ್ವಾಸ್ ವಿ.ಅಮೀನ್, ಕೃಷ್ಣ ಕಾಂಚನ್, ಸಾಗರ್ ಕರ್ಕೇರ, ವಿಜೇಶ್ ಕೋಟ್ಯಾನ್, ಹರೀಶ್ ಪುತ್ರನ್ ಮತ್ತಿತರ ಗಣ್ಯರು ವಿಜೇತರಿಗೆ ಪ್ರಶಸ್ತಿ ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X