ಬೈಕ್ ಢಿಕ್ಕಿ : ಪಾದಚಾರಿ ಮೃತ್ಯು
ಉಡುಪಿ: ನಿಟ್ಟೆ ಗ್ರಾಮದ ದೂಪದಕಟ್ಟೆ ಬಸ್ ನಿಲ್ದಾಣದ ಬಳಿ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಸೋಮವಾರ ವರದಿಯಾಗಿದೆ.
ಮೃತರನ್ನು ದೂಪದಕಟ್ಟೆಯ ದಾಸು ಶೆಟ್ಟಿ (80) ಎಂದು ಗುರುತಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆ ದಾಟುತ್ತಿದ್ದ ದಾಸು ಶೆಟ್ಟಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ತೀವ್ರ ಸ್ವರೂಪದ ಗಾಯಗೊಂಡ ಇವರು ಚಿಕಿತ್ಸೆ ಫಲಕಾರಿಯಾಗದೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ರಾತ್ರಿ 7:40ರ ಸುಮಾರಿಗೆ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story