ಬೆಳ್ತಂಗಡಿ: ಯುವತಿ ನಾಪತ್ತೆ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಪೇರಲ್ದಪಲ್ಕೆ ನಿವಾಸಿ ಯುವತಿ ನಾಪತ್ತೆಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ನಿವಾಸಿ ವಿದ್ಯಾ (19) ಎಂಬಾಕೆ ಡಿ. 12 ರಂದು ಬೆಳಗ್ಗೆ ಇಂದಬೆಟ್ಟು ಶಾಂತಿನಗರದಲ್ಲಿರುವ ತನ್ನ ಅಜ್ಜಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾಳೆ.
ಈಕೆ ಬೆಳ್ತಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸವನ್ನು ಬಿಟ್ಟು ಮನೆಯಲ್ಲೇ ಇದ್ದಳು. ಡಿ. 12 ರಂದು ನಾಪತ್ತೆಯಾಗಿದ್ದು, ಡಿ. 17 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಈಕೆಯ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
Next Story





