Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಂಡ್ಲುಪೇಟೆ: ನೀರಿನಲ್ಲಿ ಮುಳುಗಿ ಜೀವ...

ಗುಂಡ್ಲುಪೇಟೆ: ನೀರಿನಲ್ಲಿ ಮುಳುಗಿ ಜೀವ ಕಳೆದುಕೊಳ್ಳುವವರ ಸಂಖ್ಯೆಯಲ್ಲಿ ಹೆಚ್ಚಳ

ಯುವಕರು, ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕಾದ ಅಗತ್ಯ

ಅಶ್ವತ್ ಕುಮಾರ್ಅಶ್ವತ್ ಕುಮಾರ್17 Dec 2019 11:29 PM IST
share
ಗುಂಡ್ಲುಪೇಟೆ: ನೀರಿನಲ್ಲಿ ಮುಳುಗಿ ಜೀವ ಕಳೆದುಕೊಳ್ಳುವವರ ಸಂಖ್ಯೆಯಲ್ಲಿ ಹೆಚ್ಚಳ

ಗುಂಡ್ಲುಪೇಟೆ, ಡಿ.17: ಈಜಲು ಬಾರದಿದ್ದರೂ ವಿದ್ಯಾರ್ಥಿಗಳು ನೀರಿಗಿಳಿದು ಸಾವಿಗೀಡಾಗುತ್ತಿರುವ ಆತಂಕಕಾರಿ ಪ್ರಕರಣಗಳ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಬೇಕಾದ ಅಗತ್ಯ ಹೆಚ್ಚಾಗಿದೆ.

ಕಳೆದ ಹತ್ತಾರು ವರ್ಷಗಳಿಂದ ಮಳೆಯ ಕೊರತೆಯಿಂದ ಬರಡಾಗಿದ್ದ ತಾಲೂಕಿನ ಬಹುತೇಕ ಕೆರೆಗಳಲ್ಲಿ ರಸ್ತೆ ಕಾಮಗಾರಿ ನಡೆಸಲು ಮಣ್ಣು ಹಾಗೂ ಮರಳು ತೆಗೆಯಲಾಗಿದ್ದು, ಭಾರೀ ಪ್ರಮಾಣದ ಗುಂಡಿಗಳಾಗಿವೆ. ಕೆರೆಗಳಿಗೆ ಇತ್ತೀಚಿನ ದಿನಗಳಲ್ಲಿ ನದಿ ಮೂಲದಿಂದ ನೀರು ತುಂಬಿಸಲಾಗುತ್ತಿದ್ದು, ಕೆರೆಗಳು ತುಂಬಿರುವುದನ್ನು ನೋಡಲು ಹೆಚ್ಚಿನ ಜನರು ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಈಜಲು ಬಾರದ ವಿದ್ಯಾರ್ಥಿಗಳು ಹಾಗೂ ಯುವಕರು ನೀರಿಗಿಳಿಯಲು ಮುಂದಾಗುತ್ತಿರುವ ಪರಿಣಾಮ ಕೆರೆಯಲ್ಲಿ ಮುಳುಗಿ ಸಾವಿಗೀಡಾಗುತ್ತಿದ್ದಾರೆ. 

ನೀರು ತುಂಬಿದ ಕೆರೆಯ ಏರಿಗಳು ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಸಂಬಂಧ ಪಟ್ಟ ಇಲಾಖೆಗಳು ಮುನ್ನೆಚ್ಚರಿಕೆ ಇಲ್ಲವೇ ಸೂಚನಾ ಫಲಕ ಅಳವಡಿಸದಿರುವುದು ದುರಂತ ಹೆಚ್ಚಲು ಕಾರಣವಾಗಿವೆ. ತಮ್ಮಡಹಳ್ಳಿ ಹಾಗೂ ಹುತ್ತೂರು ಕೆರೆಗಳಲ್ಲಿ ಬೇರೆ ಕೆರೆಗಳಿಗೆ ನೀರು ತುಂಬಿಸುವ ಸಲುವಾಗಿ ಸದಾ ತುಂಬಿಸಲಾಗುತ್ತಿದೆ. ಕೆಸರಿನಿಂದ ಕೂಡಿದ ಆಳವಾದ ಗುಂಡಿಗಳ ಅರಿವಿಲ್ಲದೆ ನೀರಿಗಿಳಿದವರು ಹೆಚ್ಚಾಗಿ ಸಾವಿಗೀಡಾಗುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ನೀರು ತುಂಬಿದ ಕೆರೆಗೆ ಕಾವಲುಗಾರರ ನೇಮಕ, ಸೂಚನಾ ಫಲಕ ಅಳವಡಿಕೆ, ಶಾಲಾ ಕಾಲೇಜುಗಳಲ್ಲಿ ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸುವ ಮೂಲಕ ಸರಣಿ ದುರಂತಗಳನ್ನು ತಪ್ಪಿಸಬೇಕು ಎಂಬುದು ಸಾರ್ವಜನಿಕರ ಆಶಯ.

ಪ್ರಕರಣಗಳು: ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018ರ ಜನವರಿಯಲ್ಲಿ ಕುರುಬರಹುಂಡಿ ಗ್ರಾಮದ ಭರತ್, ಫೆಬ್ರವರಿಯಲ್ಲಿ ಯರಿಯೂರಿನ ಗುರುಸ್ವಾಮಿ, 2019ರ ಫೆಬ್ರವರಿಯಲ್ಲಿ ದೇಪಾಪುರ ಗ್ರಾಮದ ರವಿ, ಮಾರ್ಚ್ ನಲ್ಲಿ ಉಡೀಗಾಲ ಕಿರಣ್, ಎಪ್ರಿಲ್‍ನಲ್ಲಿ ತೆರಕಣಾಂಬಿಯ ನಂದೀಶ್ವರ್, ಭಾವ ತಮಿಳ್ ಸೆಲ್ವನ್, ಗುಂಡ್ಲುಪೇಟೆ ಠಾಣೆ ವ್ಯಾಪ್ತಿಯಲ್ಲಿ ಮೂವರು ಅಪರಿಚಿತರು, ಮದ್ದೂರು ಕೆರೆಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಕೀಳಲು ಹೋಗಿದ್ದ ಹಸಗೂಲಿಯ ನಾಗಶೆಟ್ಟಿ, ಗುಂಡ್ಲುಪೇಟೆಯ ಕುಮಾರ, ನಂದೀಶ, ತಮಿಳುನಾಡಿನ ರಾಜೇಂದ್ರ, ಬೇಗೂರು ಠಾಣೆ ವ್ಯಾಪ್ತಿಯಲ್ಲಿ ಹಿರೀಕಾಟಿಯ ಮಹದೇವಸ್ವಾಮಿ, ಬೆಳಚಲವಾಡಿಯ ಚಂದನ್ ಹಾಗೂ ಪ್ರವೀಣ್, ನಿನ್ನೆ( ಭಾನುವಾರ) ಚನ್ನವಡೆಯನಪುರದ ಲಿಖಿತ್ ಸಾವಿಗೀಡಾಗಿದ್ದಾರೆ.

ಕಳೆದ 2018ರಲ್ಲಿ 6, 2019ರಲ್ಲಿ 6 ಪ್ರಕರಣಗಳು ದಾಖಲಾಗಿದ್ದು ಒಟ್ಟು 18 ಜನರು ಮೃತಪಟ್ಟಿದ್ದಾರೆ. ಕಳೆದ ಐದು ವರ್ಷಗಳಿಂದ ಹುತ್ತೂರು ಕೆರೆಯೊಂದರಲ್ಲಿಯೇ ಸುಮಾರು 12ಕ್ಕೂ ಹೆಚ್ಚಿನ ಜನರು ಮುಳುಗಿ ಸಾವಿಗೀಡಾಗಿದ್ದಾರೆ. ಆದರೆ ಕೆರೆಯಲ್ಲಿ ಮುಳುಗಿದ ಒಬ್ಬರನ್ನೂ ಜೀವಂತವಾಗಿ ಉಳಿಸಲು ಸಾಧ್ಯವಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ವಿಷಾದಿಸುತ್ತಾರೆ.

ಸರಿಯಾಗಿ ಈಜು ಬಾರದಿದ್ದರೂ ಕೆರೆಗಿಳಿದವರು, ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದವರು, ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ಕೆರೆಗೆ ಬಿದ್ದವರು ಇದ್ದಾರೆ. ಕೆರೆಗಳಂತೆ ಕೃಷಿ ಹೊಂಡಗಳಿಗೂ ಸುತ್ತಲೂ ಬೇಲಿ ಹಾಗೂ ಸೂಚನಾ ಫಲಕ ಅಳವಡಿಸಬೇಕಾಗಿದೆ. ಅಲ್ಲದೆ ಪಾಲಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. 
-ಕಡಬೂರು ಮಂಜುನಾಥ್, ರೈತ ಮುಖಂಡರು

ಪ್ರತಿ ವರ್ಷವೂ ಶಾಲಾ ಕಾಲೇಜುಗಳಲ್ಲಿ ಇಲಾಖೆಯ ವತಿಯಿಂದ ಆಯೋಜಿಸುವ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮಗಳಲ್ಲಿ ನದಿ, ಕೆರೆ, ಕಟ್ಟೆ ಹಾಗೂ ಕೃಷಿ ಹೊಂಡಗಳ ಸಮೀಪಕ್ಕೆ ಹೋಗದಂತೆ ಎಚ್ಚರಿಕೆ ಹಾಗೂ ತಿಳುವಳಿಕೆ ಮೂಡಿಸಲಾಗುತ್ತಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿಯೂ ಸಾಮೂಹಿಕ ವಿಸರ್ಜನೆಗೆ ಆದ್ಯತೆ ನೀಡುವಂತೆ ಮನವರಿಕೆ ಮಾಡಲಾಗಿದೆ. ಈ ಬಗ್ಗೆ ಪಾಲಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಅರಿವು ಪಡೆದು ಪಾಲಿಸಬೇಕಾಗಿದೆ. ಯಾವುದೇ ಕೆರೆಯ ನೀರಿನಲ್ಲಿ ಮುಳುಗಿ ಸಾವಿಗೀಡಾದವರ ಪತ್ತೆಗೆ ತೆಪ್ಪವನ್ನು ಬೇರೆಡೆಯಿಂದ ತರುವವರೆಗೆ ಪತ್ತೆ ಕಾರ್ಯಾಚರಣೆಗೆ ವಿಳಂಬವಾಗುತ್ತಿದೆ. 

-ಚೆಲುವರಾಜು, ಅಗ್ನಿಶಾಮಕದಳದ ಅಧಿಕಾರಿ, ಗುಂಡ್ಲುಪೇಟೆ

share
ಅಶ್ವತ್ ಕುಮಾರ್
ಅಶ್ವತ್ ಕುಮಾರ್
Next Story
X