ಶಿವರಾಮ್
ಪುತ್ತೂರು: ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬರ್ ಆಗಿರುವ ಶಿವರಾಮ್ ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತ: ಮಂಡ್ಯ ನಿವಾಸಿಯಾಗಿರುವ ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆಯಲ್ಲಿ ವಾಸ್ತವ್ಯ ಹೊಂದಿರುವ ಶಿವರಾಮ್ ಅವರು ಕಳೆದ 2 ವರ್ಷಗಲಿಂದ ಪುತ್ತೂರು ನಗರ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶಿವರಾಮ್ ಅವರು ಪುತ್ತೂರು ನಗರ ಠಾಣೆ ಸೇರಿದಂತೆ ಕಡಬ, ಬಂಟ್ವಾಳ, ವೇಣೂರು, ಪೂಂಜಾಲ್ಕಟ್ಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
Next Story