ಡಿ.21ರಂದು ಸಿಎಂ ಯಡಿಯೂರಪ್ಪ ಮಂಗಳೂರಿಗೆ
ಮಂಗಳೂರು, ಡಿ.18: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಡಿ.21ರಂದು ಮಧ್ಯಾಹ್ನ 2:40ಕ್ಕೆ ಮಂಗಳೂರು ವಿಮಾನದ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
ಸಂಜೆ 5 ಗಂಟೆಗೆ ಮೂಡುಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ 17ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8:40ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
Next Story





