Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಕೆರೆಯಲ್ಲಿ 'ಮರೀನಾ' ಯೋಜನೆಗೆ ಅವಕಾಶ:...

ಪಡುಕೆರೆಯಲ್ಲಿ 'ಮರೀನಾ' ಯೋಜನೆಗೆ ಅವಕಾಶ: ಉಡುಪಿ ಜಿಲ್ಲಾಧಿಕಾರಿ ಜಗದೀಶ್

ವಾರ್ತಾಭಾರತಿವಾರ್ತಾಭಾರತಿ18 Dec 2019 10:52 PM IST
share

ಉಡುಪಿ, ಡಿ.18:ಉಡುಪಿ ಜಿಲ್ಲೆಯ ಪಡುಕೆರೆ ಬೀಚ್ ಪ್ರದೇಶವು ಮರೀನಾಗೆ ಹೇಳಿ ಮಾಡಿಸಿದಂತಿದ್ದು, ಇಲ್ಲೇನಾದರೂ ಮರೀನಾ ನಿರ್ಮಾಣವಾದಲ್ಲಿ ದೇಶದಲ್ಲಿ ಪ್ರಪ್ರಥಮ ಮರೀನಾ ಹೊಂದಿರುವ ಹೆಗ್ಗಳಿಕೆ ಉಡುಪಿ ಜಿಲ್ಲೆಯದ್ದಾಗಲಿದೆ. ಪ್ರವಾಸೋದ್ಯಮಕ್ಕೂ, ದೇಶದ ಆರ್ಥಿಕತೆಗೂ ಶಕ್ತಿ ತುಂಬುವ ಈ ಯೋಜನೆಯ ಸಂಪೂರ್ಣ ನೀಲ ನಕ್ಷೆ ತಯಾರಿಸಿ, ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾಪ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರೀನಾ ಯೋಜನೆ ಅನುಷ್ಠಾನ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಪ್ರಸ್ತುತ ಕೊಚ್ಚಿನ್ ಮಾತ್ರ ಮರೀನಾ ಹೊಂದಿದ್ದು, ಅದೂ ಕೂಡಾ ಅಂತಾರಾಷ್ಟ್ರೀಯ ಬೋಟ್ ಮತ್ತು ವಿಹಾರನೌಕೆಗಳನ್ನು ತಮ್ಮಲ್ಲಿ ಉಳಿಸಿಕೊಳ್ಳುವ ಸೌಲ್ಯಗಳನ್ನು ಹೊಂದಿಲ್ಲ. ಪಡುಕೆರೆ ಬೀಚಿನಲ್ಲಿ 3ಕಿ.ಮೀ ಹಿನ್ನೀರಿನ ಪ್ರದೇಶವಿದ್ದು, ಇಲ್ಲಿನ ನೈಸರ್ಗಿಕ ದ್ವೀಪಗಳಿರುವ ಪ್ರದೇಶದಲ್ಲಿ ವಿದೇಶೀ ನೌಕೆಗಳು ತಂಗುವಂತಹ ಮರೀನಾವನ್ನು ನಿರ್ಮಿಸಬಹುದು. ಅಂ.ರಾ. ನೌಕಾ ವಿಹಾರಿಗಳನ್ನು ಆಕರ್ಷಿಸಲು ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದರು.

ವಿವಿಧ ಕಾರಣಗಳಿಗಾಗಿ ಬೇರೆ ಬೇರೆ ದೇಶಗಳ ನೌಕೆಗಳು ಅರಬ್ಬೀ ಸಮುದ್ರ ಮಾರ್ಗವಾಗಿ ದಕ್ಷಿಣ ಏಷಿಯಾ ದೇಶಗಳಿಗೆ ಸಾಗಿ ಅಲ್ಲಿಯೇ ಲಂಗರು ಹಾಕುತ್ತವೆ. ಒಂದು ವರ್ಷದಲ್ಲಿ ಸರಿ ಸುಮಾರು 4000 ನೌಕೆಗಳು ಈ ಮಾರ್ಗದಲ್ಲಿ ಸಾಗುತ್ತಿದ್ದು, ನೌಕೆಗಳು ತಂಗಬಹುದಾದ ತೀರಗಳ ಕೊರತೆಯಿದೆ. ಪಡುಕೆರೆ ತೀರ ಪ್ರದೇಶದಲ್ಲಿ ಮರೀನಾ ನಿರ್ಮಿಸಿದಲ್ಲಿ ಈ ಮಾರ್ಗದಲ್ಲಿ ಸಾಗುವ ನೌಕೆಗಳಿಗೆ ತಂಗುದಾಣ ಸಿಗುವಂತಾಗುತ್ತದೆ. ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಾಣವಾಗುವ ಈ ಮರೀನಾದಿಂದ ಸರಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ಬರಲಿದೆ. ಜೊತೆಗೆ ಮಲ್ಪೆ-ಪಡುಕೆರೆ ಬೀಚ್ ಸುತ್ತಮುತ್ತಲಿನ ಪ್ರದೇಶದಲ್ಲಿ ಉದ್ಯೋಗಾವಕಾಶಗಳೂ ಹೆಚ್ಚಲಿವೆ ಎಂದವರು ವಿವರಿಸಿದರು.

ಮರೀನಾದೊಳಗಡೆ ತೇಲುವ ಸೇತುವೆ, ಹೋಟೇಲ್, ರೆಸ್ಟೋರೆಂಟ್ ಮತ್ತು ಮನೆಗಳನ್ನೂ ನಿರ್ಮಿಸುವ ಅವಕಾಶವಿದ್ದು, ಇದರಿಂದಲೂ ಆದಾಯ ಗಳಿಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ವಿವರವಾದ ಯೋಜನಾ ವರದಿಯನ್ನು ತಯಾರಿಸಿ ಯೋಜನೆಯಿಂದಾಗುವ ಪ್ರಯೋಜನಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯ್ಕಿ, ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಅಮಿತ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಒಳನಾಡು ಮತ್ತು ಜಲಸಾರಿಗೆ ಕಾರ್ಯನಿರ್ವಾಹಕ ಅಭಿಯಂತರ ಜಗದೀಶ್ ಭಟ್, ಪ್ರವಾಸ ಮತ್ತು ಪ್ರಯಾಣ ಸಂಘದ ಅಧ್ಯಕ್ಷ ನಾಗರಾಜ್ ಹೆಬ್ಬಾರ್, ಎಸಿಟಿ ಕಾರ್ಯದರ್ಶಿ ಗೌರವ್ ಶೆಣವ್, ಕಾಪು ಬೀಚ್ ನಿರ್ವಹಣಾ ಸಮಿತಿಯ ಯತೀಶ್ ಬೈಕಂಪಾಡಿ, ಮಲ್ಪೆ ಬೀಚ್ ನಿರ್ವಹಣಾ ಸಮಿತಿಯ ಸುದೇಶ್ ರೈ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X