ಅನಧಿಕೃತ ಕಟ್ಟಡಗಳ ತೆರವಿಗೆ ಮಾ.21ರವರೆಗೆ ಸಮಯಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು, ಡಿ.18: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನಧಿಕೃತ ಕಟ್ಟಡಗಳನ್ನು ಗುರುತಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲು ಸಮಯಾವಕಾಶ ನೀಡಬೇಕೆಂದು ಬಿಬಿಎಂಪಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ 2020ರ ಮಾ.21ರವರೆಗೆ ಸಮಯಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಈ ಕುರಿತು ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸಾರ್ವಜನಿಕ ಪ್ರದೇಶಗಳನ್ನು ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡಗಳು, ನಕ್ಷೆ ಮಂಜೂರಾತಿ ಪಡೆಯದೆ, ಮಂಜೂರಾತಿ ಪಡೆದ ನಂತರ ನಕ್ಷೆ ಮತ್ತು ನಿಯಮಗಳನ್ನು ಉಲ್ಲಂಘಿಸಿದ ಕಟ್ಟಡಗಳನ್ನು ಗುರುತಿಸುವ ನಿಟ್ಟಿನಲ್ಲಿ ಪಾಲಿಕೆ ಹೊಸ ಸಮೀಕ್ಷೆ ನಡೆಸಬೇಕು. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಅನಧಿಕೃತ ಕಟ್ಟಡಗಳ ತೆರವುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ನ್ಯಾಯಪೀಠವು ಆದೇಶ ಹೊರಡಿಸಿತ್ತು.
Next Story





