ಮಂಗಳೂರಿನಲ್ಲಿ ಮುಂದುವರಿದ ಪ್ರತಿಭಟನೆ: ಪರಿಸ್ಥಿತಿ ನಿಯಂತ್ರಣಕ್ಕೆ ಅಶ್ರುವಾಯ ಪ್ರಯೋಗ

ಮಂಗಳೂರು, ಡಿ.19: ಪೌರತ್ವ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
ನಗರದ ಸ್ಟೇಟ್ ಬ್ಯಾಂಕ್ ಬಳಿ ಹಲವರು ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿದೆ. ಈ ನಡುವೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಜಾರ್ಜ್ ನಿಂದ ಹಲವರು ಗಾಯಗೊಂಡಿದ್ದಾರೆ.
ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಬಳಿ ಬಸ್ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಿಸರದ ಅಂಗಡಿಮುಂಗಟ್ಟುಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ.







.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)



