ಮಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ: ಪೊಲೀಸರಿಂದ ಗಾಳಿಯಲ್ಲಿ ಗುಂಡು

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಸ್ಟೇಟ್ ಬ್ಯಾಂಕ್ ಸಮೀಪ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಹತೋಟಿಗೆ ಬಂದಿದ್ದು, ಸೆಂಟ್ರಲ್ ಮಾರ್ಕೆಟ್ ಮತ್ತು ಬಂದರ್ ಸಮೀಪ ಪ್ರತಿಭಟನೆ ಆರಂಭವಾಗಿದೆ. ಸ್ಟೇಟ್ ಬ್ಯಾಂಕ್ ಸಮೀಪ ಕಟ್ಟಡಗಳೊಳಗೆ ಹಲವು ಪ್ರತಿಭಟನಕಾರರು ಅಡಗಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Next Story





