Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರೇಕಿಂಗ್ ನ್ಯೂಸ್: ಮಂಗಳೂರಿನಲ್ಲಿ...

ಬ್ರೇಕಿಂಗ್ ನ್ಯೂಸ್: ಮಂಗಳೂರಿನಲ್ಲಿ ಪೊಲೀಸ್ ಗುಂಡಿಗೆ ಇಬ್ಬರು ಬಲಿ

ವಾರ್ತಾಭಾರತಿವಾರ್ತಾಭಾರತಿ19 Dec 2019 6:27 PM IST
share
ಬ್ರೇಕಿಂಗ್ ನ್ಯೂಸ್: ಮಂಗಳೂರಿನಲ್ಲಿ ಪೊಲೀಸ್ ಗುಂಡಿಗೆ ಇಬ್ಬರು ಬಲಿ

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸುತ್ತಿದ್ದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಸಂಘರ್ಷದಲ್ಲಿ ಇಬ್ಬರು ಸಾರ್ವಜನಿಕರು ಬಲಿಯಾದ ಘಟನೆ ನಗರದ ಬಂದರ್‌ನಲ್ಲಿ ಇಂದು ಸಂಜೆ ನಡೆದಿದೆ.

ಕಂದಕ್ ನಿವಾಸಿ ಅಬ್ದುಲ್ ಜಲೀಲ್ (42), ಕುದ್ರೋಳಿ ನಿವಾಸಿ ನೌಶಿನ್ (25) ಮೃತಪಟ್ಟವರು.

ಜಲೀಲ್ ನಗರದ ದಕ್ಕೆಯಲ್ಲಿ ಮೀನು ಮಾರುತ್ತಾ ಜೀವನ ಸಾಗಿಸುತ್ತಿದ್ದರು. ಅವರಿಗೆ ಇಬ್ಬರು ಮಕ್ಕಳು. ಪತ್ನಿ ಇದ್ದಾರೆ. ಜಲೀಲ್ ಮಕ್ಕಳಿಬ್ಬರನ್ನು ಶಾಲೆಯಿಂದ ಕಂದಕ್‌ನ ಮನೆಗೆ ಕರೆತಂದಿದ್ದಾರೆ. ಮನೆಯ ಹೊರಭಾಗದಲ್ಲಿ ಗದ್ದಲದಂತಹ ಶಬ್ದ ಕೇಳಿ, ಹೊರಬಂದಿದ್ದಾರೆ. ಸಂಜೆ 4:30ರ ಸುಮಾರಿಗೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಜಲೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಜಲೀಲ್ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಲೀಲ್ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಇನ್ನೋರ್ವ ಮೃತ ವ್ಯಕ್ತಿ ಕುದ್ರೋಳಿ ನಿವಾಸಿ ನೌಶಿನ್ ಬಂದರ್‌ನಲ್ಲಿ ಮೆಕ್ಯಾನಿಕ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಬಂದರ್‌ನ ಮಸೀದಿಗೆ ತೆರಳಿ ಪ್ರಾರ್ಥನೆ ಮುಗಿಸಿ ವಾಪಸಾಗುವಾಗ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇಬ್ಬರಿಗೆ ಗಾಯ

ಪೌರತ್ವ ಕಾಯ್ದೆ ವಿರೋಧಿಸುತ್ತಿದ್ದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಸಂಘರ್ಷದಲ್ಲಿ ಬಜಾಲ್ ಸಮೀಪದ ಫೈಸಲ್‌ನಗರ ನಿವಾಸಿ ಆಸಿಫ್ (23), ಕಣ್ಣೂರು ನಿವಾಸಿ ನಾಸಿರ್ (26)ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಆಸಿಫ್ ಅವರು ಫೈಸಲ್‌ನಗರದಲ್ಲಿ ಕಾರ್ ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸಿಫ್ ಕೆಲಸದ ನಿಮಿತ್ತ ಬಂದರ್‌ಗೆ ಬಂದಿದ್ದರು. ಪ್ರಾರ್ಥನೆ ಸಮಯವಾದ್ದರಿಂದ ಮಸೀದಿಗೆ ತೆರಳಿ ವಾಪಸಾಗುವ ಪೊಲೀಸರ ಗುಂಡೇಟು ತಗುಲಿದೆ ಎಂದು ಹೇಳಲಾಗುತ್ತಿದೆ. ಗಂಭೀರ ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಶಸ್ತ್ರಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೋರ್ವ ಗಾಯಾಳು ನಾಸಿರ್ ನಗರದಲ್ಲಿನ ಪ್ಲಾಸ್ಟಿಕ್ ಲ್ಯಾಂಡ್ ಮಳಿಗೆಯ ಸಿಬ್ಬಂದಿ. ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೆಸ್ಸೆಸ್ ಮನೋಭಾವದ ಪೊಲೀಸರ ಕೃತ್ಯ: ಕುಟುಂಬಸ್ಥರ ಆರೋಪ

ಬಂದರ್, ಕಂದಕ್ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಪೊಲೀಸರ ದಾಳಿ ನಡೆದಿದೆ. ಆ ಪ್ರದೇಶದಲ್ಲಿ ಅಂತಹ ದಾಳಿ ನಡೆಸುವ ಯಾವುದೇ ಪರಿಸ್ಥಿತಿ ಇರಲಿಲ್ಲ. ಸೌಹಾರ್ದದಿಂದ ಇದ್ದ ಪ್ರದೇಶದಲ್ಲಿ ವಿನಾಕಾರಣ ಸಾರ್ವಜನಿಕರ ಮೇಲೆ ಆರೆಸ್ಸೆಸ್ ಮನೋಭಾವದ ಪೊಲೀಸರು ಗುಂಡಿನ ದಾಳಿ ನಡೆಸಿ ಹಲವರ ಪ್ರಾಣಕ್ಕೆ ಕಾರಣರಾಗಿದ್ದಾರೆ ಎಂದು ಗುಂಡೇಟಿಗೆ ಬಲಿಯಾದ ಕಂದಕ್‌ನ ಅಬ್ದುಲ್ ಜಲೀಲ್ ಅವರ ಸಹೋದರ ಯಹ್ಯ ಆರೋಪಿಸಿದ್ದಾರೆ.

ಕಂದಕ್‌ನಲ್ಲಿ ಹಿಂಸಾಚಾರ ಇರಲೇ ಇಲ್ಲ. ದಕ್ಕೆಯಲ್ಲಿ ದುಡಿಮೆ ಮಾಡಿಕೊಂಡಿದ್ದ ಸಹೋದರನ ಸಾವಿನಿಂದಾಗಿ ಆತನ ಕುಟುಂಬ ಇಂದು ಅನಾಥವಾಗಿದೆ. ಪೊಲೀಸರ ಕೃತ್ಯವು ಅಮಾನವೀಯವಾದದ್ದು. ಪೊಲೀಸರು ಗುಂಡಿನ ದಾಳಿ ನಡೆಸುವ ಮೂಲಕ ಅಮಾಯಕರ ಪ್ರಾಣದ ಜತೆ ಆಟವಾಡುತ್ತಿದ್ದಾರೆ. ಮಂಗಳೂರು ಪೊಲೀಸರು ನಡೆಸಿರುವ ಕ್ರೌರ್ಯವನ್ನು ಸುಶಿಕ್ಷಿತ ಸಮಾಜ ಒಪ್ಪುವುದಿಲ್ಲ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X