ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಉಡುಪಿ, ಡಿ.19: ತೋನ್ಸೆ - ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಇತ್ತೀಚೆಗೆ ಜರುಗಿತು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾಪು ತಾಲೂಕು ಘಟಕದ ಅಧ್ಯಕ್ಷ ಶಬಿ ಖಾಜಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳಲ್ಲಿ ಅತ್ಮಸ್ಥೈರ್ಯ ಬೆಳೆಸುತ್ತದೆ. ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಮರ್ಥ ರಾದರೆ ಅವರ ಶಿಕ್ಷಣ ಉತ್ತಮವಾಗಿ ಸಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಪರಿಷತ್ ನಡೆಸಿದ ವಿಜ್ಞಾನ ಮೇಳ ಹಾಗೂ ಸಾಲಿಹಾತ್ ಶಾಲೆಯಲ್ಲಿ ಜರಗಿದ ವಿಜ್ಞಾನ ಮೇಳದಲ್ಲಿ ಪ್ರಶಸ್ತಿ ಪಡೆದ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಲಿಖಿತ್ ಆರ್. ಅವರನ್ನು ಸನ್ಮಾನಿಸಲಾಯಿತು.
ಉಡುಪಿ ಸುಗಮ ಸಂಚಾರಿ ಸಂಘದ ಅಧ್ಯಕ್ಷ, ಯೋಗ ಶಿಕ್ಷಕ ಮುರಳಿಧರ್ ರಾವ್ ಮಾತನಾಡಿದರು. ಸಾಲಿಹಾತ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ. ಇಮ್ತಿಯಾಝ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಟ್ರಸ್ಟಿ ಹುಸೇನ್, ಸಲಹೆಗಾರರಾದ ಅನ್ವರ್ ಅಲಿ ಕಾಪು, ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಕೆಳಾರ್ಕಳಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಮುಖ್ಯ ಶಿಕ್ಷಕಿ ಸಬೀತಾ, ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕಿಯರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಲವೀನಾ ಕ್ಲಾರಾ ಸ್ವಾಗತಿಸಿದರು. ಶಿಕ್ಷಕಿ ಆಯಿಷಾ ರಫೀಕ್ ವಂದಿಸಿದರು. ಶಿಕ್ಷಕಿ ನಹೀದಾ ರಿಂಷಾ ಶೇಕ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗ ವಹಿಸಿದ ಶಾಲಾ ಹಳೆ ವಿದ್ಯಾರ್ಥಿನಿ ಡಾ.ಅಕ್ಸಾ ಅಕ್ಬರ್ ಅಲಿ, ಡಾ.ಫಯಿಮ್ ಹೂಡೆ ವಿಜೇತರಿಗೆ ಬಹುಮಾನ ವಿತರಿಸಿದರು. ಶಾಲಾ ದೈಹಿಕ ಶಿಕ್ಷಕಿ ಕ್ವೀನಿ ಮೇರಿ ವಂದಿಸಿದರು. ಶಿಕ್ಷಕಿ ಅನಿಸಾ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು.







