Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಗಳೂರಿನ ಘಟನೆಗೆ ಕಲ್ಲಡ್ಕ ಪ್ರಭಾಕರ್...

ಮಂಗಳೂರಿನ ಘಟನೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನೆಯೇ ಕಾರಣ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 Dec 2019 8:45 PM IST
share
ಮಂಗಳೂರಿನ ಘಟನೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನೆಯೇ ಕಾರಣ: ಸಿದ್ದರಾಮಯ್ಯ

ಬೆಂಗಳೂರು, ಡಿ.20: ಬಂಟ್ವಾಳದಲ್ಲಿ ಆರೆಸೆಸ್ಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಶಾಲೆಯಲ್ಲಿ ಕೆಲವು ದಿನಗಳ ಹಿಂದೆ ಬಾಬರಿ ಮಸೀದಿ ಧ್ವಂಸದ ನಾಟಕ ಪ್ರದರ್ಶಿಸಲಾಯಿತು. ಆ ಪ್ರದರ್ಶನಕ್ಕೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ಇಡೀ ಜಿಲ್ಲಾಡಳಿತ ಸಾಕ್ಷಿಯಾಗಿತ್ತು. ಅವರ ಪ್ರಚೋದನಾಕಾರಿ ಹೇಳಿಕೆಗಳೆ ನಿನ್ನೆಯ ಹಿಂಸಾಚಾರಕ್ಕೆ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. 

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 144 ಸೆಕ್ಷನ್ ಜಾರಿ ಮಾಡುವ ಅಗತ್ಯವಿರಲಿಲ್ಲ. ಎಲ್ಲೆಡೆ ಶಾಂತ ರೀತಿ ಪ್ರತಿಭಟನೆ ನಡೆಯುತ್ತಿತ್ತು, ಕರ್ಫ್ಯೂ ಮತ್ತು ಗೋಲಿಬಾರ್‌ಗೆ ಪೂರಕ ವಾತಾವರಣ ಇಲ್ಲದಿರುವಾಗ ಏಕಾಏಕಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಹೇಗೆ ಅನುಮತಿ ನೀಡಿದರು? ಮಂಗಳೂರಿನ ರಸ್ತೆಗಳಲ್ಲಿ ಘೋಷಣೆ ಕೂಗುತ್ತಿದ್ದವರ ಬಳಿ ಮಾರಕಾಸ್ತ್ರಗಳಿತ್ತೇ? ಎಂದು ಪ್ರಶ್ನಿಸಿದರು.

ಪ್ರತಿಭಟನೆಯನ್ನು ಕೈಬಿಡುವಂತೆ ಪ್ರತಿಭಟನಕಾರರಲ್ಲಿ ಮನವಿ ಮಾಡಬಹುದಿತ್ತು, ಅವರನ್ನು ಚದುರಿಸಲು ಲಾಠಿಚಾರ್ಜ್, ಅಶ್ರುವಾಯು, ಜಲಫಿರಂಗಿ, ರಬ್ಬರ್ ಬುಲೆಟ್ ಹೀಗೆ ಹಲವು ದಾರಿಗಳಿದ್ದರೂ ಏಕಾಏಕಿ ಗೋಲಿಬಾರ್ ಮಾಡಿರುವುದು ಅವರ ಬೇರೆಯೇ ಉದ್ದೇಶವನ್ನು ತೋರಿಸುತ್ತಿದೆ ಎಂದು ಅವರು ದೂರಿದರು. ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ವೈರಲ್ ಆಗಿದೆ. ಅದರಲ್ಲಿ ಪೊಲೀಸ್ ಒಬ್ಬ ಇಷ್ಟೆಲ್ಲ ಗುಂಡು ಹಾರಿಸಿದ್ರೂ ಯಾರೊಬ್ಬ ಸತ್ತಿಲ್ಲ ಅಂತ ಹೇಳುತ್ತಾನೆ. ಇದರ ಅರ್ಥ ಏನು? ಪ್ರತಿಭಟನಾಕಾರರನ್ನು ಕೊಲ್ಲುವುದು ಪೂರ್ವ ಯೋಜಿತವಾಗಿತ್ತು ಎಂದಲ್ಲವೇ? ಇದು ಸರಕಾರಿ ಪ್ರಾಯೋಜಿತ ಗಲಭೆ ಎಂಬ ವಿಚಾರ ಸ್ಪಷ್ಟವಾಗುತ್ತಿದೆ ಎಂದು ಅವರು ಆರೋಪಿಸಿದರು. ಐದು ವರ್ಷಗಳಲ್ಲಿ ನಮಗೆ ಬಂದೂಕುಗಳು ನೆನಪಿಗೆ ಬರಲೇ ಇಲ್ಲ. ಬಡವರಿಗೆ ಅಕ್ಕಿ, ಮಕ್ಕಳಿಗೆ ಹಾಲು, ಸೂರಿಲ್ಲದವರಿಗೆ ಸೂರು, ಅನ್ನದಾತರ ಸಾಲಮನ್ನಾ ಇವೇ ನಮ್ಮ ಉದ್ದೇಶಗಳಾಗಿದ್ದವು. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೇ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಸಾವು ನೋವುಗಳ ಹಿಂದಿರುವ ನಿಜವಾದ ಅಪರಾಧಿಗಳು ಎಂದು ಸಿದ್ದರಾಮಯ್ಯ ಕಿಡಿಗಾರಿದರು.
ಒಬ್ಬ ಮುಖ್ಯಮಂತ್ರಿ ಪತ್ರಿಕಾಗೋಷ್ಠಿ ಕರೆದು ಲಾಠಿ ಪ್ರಹಾರ ನಡೆಸದಂತೆ ಆದೇಶ ನೀಡುತ್ತಾರೆ ಆದರೂ ಪೊಲೀಸರು ಗುಂಡು ಹಾರಿಸಿ ಸಾಯಿಸುತ್ತಾರೆ. ಅಂದರೆ ಮುಖ್ಯಮಂತ್ರಿಗೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲವೇ? ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಭಟನೆ ಮಾಡುವುದಾದರೆ ಉತ್ತರ ಭಾರತಕ್ಕೆ ಹೋಗಿ ಎಂದು ಹೇಳುತ್ತಾರೆ. ಅಲ್ಲೇನು ಪ್ರತಿಭಟನೆಗೆ ವಿಶೇಷ ವ್ಯವಸ್ಥೆ ಇದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ. ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿ ಬಿಜೆಪಿಯ ದಿಲ್ಲಿ ನಾಯಕರು ಮತ್ತು ಆರೆಸೆಸ್ಸ್ ನಾಯಕರು ರಾಜ್ಯಭಾರ ನಡೆಸುತ್ತಿದ್ದಾರೆ. ಯಡಿಯೂರಪ್ಪ ಆರೆಸೆಸ್ಸ್ ಹೇಳಿದ ಹಾಗೆ ಕೇಳುವ ಒಬ್ಬ ಕೈಗೊಂಬೆ ಮುಖ್ಯಮಂತ್ರಿ. ಅವರಿಗೆ ಆತ್ಮಸಾಕ್ಷಿಯೇ ಇಲ್ಲ ಎಂದು ಅವರು ಟೀಕಿಸಿದರು. ಪ್ರತಿಭಟನೆಗೆ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಯಾವ ಪ್ರಮುಖ ರಾಜಕೀಯ ಪಕ್ಷವೂ ಕರೆ ನೀಡಿರಲಿಲ್ಲ. ಪ್ರಗತಿಪರ ಸಂಘಟನೆಗಳು ಮತ್ತು ಸಾರ್ವಜನಿಕರು ಸ್ವ ಇಚ್ಚೆಯಿಂದ ತಮ್ಮ ಪ್ರತಿಭಟನೆಯನ್ನು ದಾಖಲಿಸ ಬಯಸಿದ್ದಾರೆ. ಪೊಲೀಸರು ಪ್ರತಿಭಟನಕಾರರಿಗೆ ಮನವರಿಕೆ ಮಾಡಿಕೊಡುವ ಬದಲು ಅನಗತ್ಯವಾಗಿ ಪ್ರತಿಭಟನಕಾರರ ಮೇಲೆ ಬಲಪ್ರಯೋಗ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂಸಾಚಾರ ಮತ್ತು ಮಂಗಳೂರಿನ ಪೊಲೀಸರ ಗುಂಡೇಟಿನ ಪ್ರಕರಣ ರಾಜ್ಯ ಸರಕಾರಿ ಪ್ರಾಯೋಜಿತ ಹಿಂಸಾಚಾರ. ಇದರ ಮೂಲಕ ಶಾಂತಿ-ಸೌಹಾರ್ದತೆಯನ್ನು ಕದಡಿ ಹಿಂದೂ -ಮುಸ್ಲಿಮ್ ನಡುವೆ ಸಂಘರ್ಷ ಏರ್ಪಡಿಸಿ ಅದರ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದಲೇ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿಯನ್ನು ತರಲಾಗಿದೆ ಎಂದು ಸಿದ್ದರಾಮಯ್ಯ ದೂರಿದರು. ಆರೆಸೆಸ್ಸ್ ನಾಯಕರು ಪೊಲೀಸರನ್ನು ಕೈವಶ ಮಾಡಿಕೊಂಡು ಸಾಕಷ್ಟು ಪೂರ್ವ ತಯಾರಿಯೊಂದಿಗೆ ನಿನ್ನೆಯ ಹಿಂಸಾಚಾರ ನಡೆಸಿದ್ದಾರೆ. ಇದರ ಹಿಂದೆ ಬಿಜೆಪಿ ನಾಯಕರು, ಆರೆಸೆಸ್ಸ್ ನೇರ ಕೈವಾಡವಿದೆ. ಇಲ್ಲದಿದ್ದರೆ ಶಾಂತರೀತಿಯ ಪ್ರತಿಭಟನೆ ಗೋಲಿಬಾರ್‌ಗೆ ತಿರುಗಲು ಹೇಗೆ ಸಾಧ್ಯ? ಎಂದು ಅವರು ಅನುಮಾನ ವ್ಯಕ್ತಪಡಿಸಿದರು.

ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗಲೂ ಮಂಗಳೂರಿನಲ್ಲಿ ಚರ್ಚ್‌ಗಳ ಮೇಲೆ ದಾಳಿ ನಡೆಸಲಾಗಿತ್ತು. ಅಲ್ಪಸಂಖ್ಯಾತರ ಮೇಲೆ ಹಲ್ಲೆ-ದೌರ್ಜನ್ಯಗಳು ನಡೆದಿದ್ದವು. ಯಡಿಯೂರಪ್ಪ ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ ರೈತರನ್ನು ಸಾಯಿಸಿದರು, ಈಗ ಯುವಜನರನ್ನು ಹತ್ತಿಕ್ಕಲು ಹೊರಟಿದ್ದಾರೆ.
-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X