ಕೃಷಿಕ ಸಂಘದ ಪ್ರತಿಭಟನೆ ಮುಂದೂಡಿಕೆ
ಉಡುಪಿ, ಡಿ.20: ಜಿಲ್ಲೆಯ ಕೃಷಿಕರ ಸಮಸ್ಯೆಗಳ ಬಗ್ಗೆ ಸರಕಾರ- ಜಿಲ್ಲಾಡಳಿತವನ್ನು ಎಚ್ಚರಿಸುವುದಕ್ಕಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘವು ಡಿ.21 ಶನಿವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸಲುದ್ದೇಶಿಸಿದ್ದ ಪ್ರತಿಭಟನಾ ಸಭೆಯನ್ನು ಜಿಲ್ಲೆಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಜಿಲ್ಲಾ ಕೃಷಿಕ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
Next Story





