ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಜನಾಡಿಯಲ್ಲಿ ಪ್ರತಿಭಟನೆ : ಇಬ್ಬರು ಸೆರೆ
ಮಂಜನಾಡಿ : ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಮಂಗಳೂರಿನಲ್ಲಿ ಗುರುವಾರ ನಡೆದ ಹಿಂಸಾಚಾರ ಘಟನೆಯನ್ನು ವಿರೋಧಿಸಿ ರಸ್ತೆಗೆ ಬೆಂಕಿ ಹಚ್ಚಿ ನಾಗರಿಕರು ಪ್ರತಿಭಟನೆ ನಡೆಸಿದ ಘಟನೆ ಮಂಜನಾಡಿಯಲ್ಲಿ ಶುಕ್ರವಾರ ನಡೆದಿದೆ.
ಈ ಸಂದರ್ಭ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಎಡೆಂಬಿಳ ನಿವಾಸಿ ಹಾರಿಸ್ (27) ಆರಂಗಡಿ ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ.
ಸುಮಾರು 10 ಮಂದಿ ಸೇರಿ ರಸ್ತೆಯಲ್ಲಿ ಬೆಂಕಿ ಹಚ್ಚಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ವೇಳೆ ಗ್ರಾಮಚವಡಿ, ಮದಕ ಎಂಬಲ್ಲಿ ರಸ್ತೆಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.
ಅಮಾಯಕರ ಬಂಧನ
ಮಂಜನಾಡಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ನೈಜ ಆರೋಪಿಗಳನ್ನು ಬಂಧಿಸುವ ಬದಲು ನಿರ್ಮಾಣ ಹಂತದ ಕಟ್ಟಡ ಕೆಲಸಕ್ಕೆ ಹೋಗುತ್ತಿದ್ದ ಆಮಾಯಕರನ್ನು ಬಂಧಿಸಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ.
Next Story





