ವದಂತಿಗೆ ಕಿವಿಗೊಡಬೇಡಿ: ಜಾಮಿಯಾ ಕುಲಪತಿ
ಹೊಸದಿಲ್ಲಿ, ಡಿ. 20: ಯಾವುದೇ ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿ.ವಿ. ವಿದ್ಯಾರ್ಥಿಗಳಲ್ಲಿ ಅಲ್ಲಿನ ಕುಲಪತಿ ನಝ್ಮಾ ಅಖ್ತರ್ ಶುಕ್ರವಾರ ಮನವಿ ಮಾಡಿದ್ದಾರೆ.
ವಿಶ್ವವಿದ್ಯಾನಿಲಯ ನಿಮ್ಮೊಂದಿಗೆ ಇದೆ. ನಿಮಗೆ ಆರ್ಥಿಕ ಹಾಗೂ ಭಾವನಾತ್ಮಕ ಬೆಂಬಲವನ್ನು ವಿಶ್ವವಿದ್ಯಾನಿಲಯ ನೀಡಲಿದೆ ಎಂದು ಪತ್ರದಲ್ಲಿ ಕುಲಪತಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಜಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮುಂಚೂಣಿಯಲ್ಲಿ ಇದ್ದರು. ಡಿಸೆಂಬರ್ 15ರಂದು ಪೊಲೀಸರು ಕ್ಯಾಂಪಸ್ ಪ್ರವೇಶಿಸಿರುವುದು ಖಂಡನಾರ್ಹ ಹಾಗೂ ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅಖ್ತರ್ ಹೇಳಿದ್ದಾರೆ.
Next Story





