Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರ್ನಾಟಕ-ಉತ್ತರ ಪ್ರದೇಶ ಪಂದ್ಯ ಡ್ರಾ

ಕರ್ನಾಟಕ-ಉತ್ತರ ಪ್ರದೇಶ ಪಂದ್ಯ ಡ್ರಾ

ಅಭಿಮನ್ಯು ಮಿಥುನ್ ಪಂದ್ಯಶ್ರೇಷ್ಠ

ವಾರ್ತಾಭಾರತಿವಾರ್ತಾಭಾರತಿ21 Dec 2019 12:15 AM IST
share
ಕರ್ನಾಟಕ-ಉತ್ತರ ಪ್ರದೇಶ ಪಂದ್ಯ ಡ್ರಾ

ಹುಬ್ಬಳ್ಳಿ, ಡಿ.20: ಕರ್ನಾಟಕ ಹಾಗೂ ಉತ್ತರಪ್ರದೇಶ ಮಧ್ಯೆ ನಡೆದ ರಣಜಿ ಟ್ರೋಫಿಯ ‘ಬಿ’ ಗುಂಪಿನ ಪಂದ್ಯ ಡ್ರಾನಲ್ಲಿ ಕೊನೆಯಾಗಿದ್ದು, ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆದಿದ್ದ ಕರುಣ್ ನಾಯರ್ ನೇತೃತ್ವದ ಆತಿಥೇಯ ತಂಡ ಮೂರು ಅಂಕ ಪಡೆದಿದೆ. ನಾಲ್ಕನೇ ಹಾಗೂ ಕೊನೆಯ ದಿನವಾದ ಶುಕ್ರವಾರ 1 ವಿಕೆಟ್ ನಷ್ಟದಲ್ಲಿ 29 ರನ್‌ನಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಉತ್ತರಪ್ರದೇಶ ಪಂದ್ಯ ಡ್ರಾನಲ್ಲಿ ಕೊನೆಗೊಳ್ಳುವ ಮೊದಲು 69.1 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 204 ರನ್ ಗಳಿಸಿದೆ. ಆರಂಭಿಕ ಆಟಗಾರ ಅಲ್ಮಾಸ್ ಶೌಕತ್ ಆಕರ್ಷಕ ಶತಕ(ಔಟಾಗದೆ 103, 210 ಎಸೆತ, 14 ಬೌಂಡರಿ, 1 ಸಿಕ್ಸರ್)ಸಿಡಿಸಿದರು. ಎಂ.ಕೌಶಿಕ್(45, 83 ಎಸೆತ, 8 ಬೌಂಡರಿ)ಹಾಗೂ ಅಕ್ಷದೀಪ್‌ನಾಥ್(38)ಎರಡಂಕೆಯ ಸ್ಕೋರ್ ಗಳಿಸಿದರು.

ಉತ್ತರಪ್ರದೇಶ ತಂಡ ಆರಂಭಿಕ ಆಟಗಾರ ಆರ್ಯನ್(0) ವಿಕೆಟನ್ನು ಬೇಗನೆ ಕಳೆದುಕೊಂಡಿತು. ಆಗ 2ನೇ ವಿಕೆಟ್ ಜೊತೆಯಾಟದಲ್ಲಿ 82 ರನ್ ಗಳಿಸಿದ ಶೌಕತ್ ಹಾಗೂ ಕೌಶಿಕ್ ತಂಡವನ್ನು ಆಧರಿಸಿದರು. ಕೌಶಿಕ್ ಔಟಾದ ಬಳಿಕ ಶೌಕತ್ ಮೂರನೇ ವಿಕೆಟ್ ಜೊತೆಯಾಟದಲ್ಲಿ ಎಡಿ ನಾಥ್‌ರೊಂದಿಗೆ 77 ರನ್ ಸೇರಿಸಿದರು. ಕರ್ನಾಟಕದ ಪರವಾಗಿ ಮಥಾಯಸ್(1-27), ರೋನಿತ್ ಮೋರೆ(1-52) ಹಾಗೂ ಎಸ್.ಗೋಪಾಲ್(1-61)ತಲಾ ಒಂದು ವಿಕೆಟ್ ಪಡೆದಿದ್ದಾರೆ.

ಕರ್ನಾಟಕದ ಪರ ಮೊದಲ ಇನಿಂಗ್ಸ್ ನಲ್ಲಿ 60 ರನ್‌ಗೆ ಆರು ವಿಕೆಟ್‌ಗಳನ್ನು ಕಬಳಿಸಿದ ಅಭಿಮನ್ಯು ಮಿಥುನ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ವಿದರ್ಭ, ಒಡಿಶಾ, ಸೌರಾಷ್ಟ್ರಕ್ಕೆ ಇನಿಂಗ್ಸ್ ಜಯ: ಹಾಲಿ ಚಾಂಪಿಯನ್ ವಿದರ್ಭ, ಒಡಿಶಾ ಹಾಗೂ ಸೌರಾಷ್ಟ್ರ ತಂಡಗಳು ರಣಜಿ ಟ್ರೋಫಿಯ ಎರಡನೇ ಸುತ್ತಿನ ಪಂದ್ಯದ ಕೊನೆಯ ದಿನವಾದ ಶುಕ್ರವಾರ ಇನಿಂಗ್ಸ್ ಅಂತರದಿಂದ ಜಯ ಸಾಧಿಸಿವೆ. ವಿದರ್ಭ ತಂಡ ರಾಜಸ್ಥಾನವನ್ನು ಇನಿಂಗ್ಸ್ ಹಾಗೂ 60 ರನ್‌ಗಳ ಅಂತರದಿಂದ ಮಣಿಸಿತು. ರಾಜಸ್ಥಾನವನ್ನು ಎರಡನೇ ಇನಿಂಗ್ಸ್‌ನಲ್ಲಿ 190 ರನ್‌ಗೆ ನಿಯಂತ್ರಿಸಿದ ವಿದರ್ಭ ಇನಿಂಗ್ಸ್ ಗೆಲುವು ದಾಖಲಿಸಿ 7 ಬೋನಸ್ ಅಂಕ ಗಳಿಸಿತು.

ಒಡಿಶಾ ತಂಡ ಸರ್ವಿಸಸ್ ತಂಡವನ್ನು ಇನಿಂಗ್ಸ್ ಹಾಗೂ 31 ರನ್‌ಗಳಿಂದ ಸೋಲಿಸಿತು. ಸರ್ವಿಸಸ್ ತಂಡ ಎರಡನೇ ಇನಿಂಗ್ಸ್ ನಲ್ಲಿ 238 ರನ್‌ಗೆ ಆಲೌಟಾಗಿ ಸೋಲೊಪ್ಪಿಕೊಂಡಿತು. ಒಡಿಶಾದ ರಾಜೇಶ್ ಮೊಹಾಂತಿ (3-44)ಹಾಗೂ ಅಭಿಷೇಕ್ ರಾವತ್(3-47)ಆರು ವಿಕೆಟ್‌ಗಳನ್ನು ಹಂಚಿಕೊಂಡರು. ಸೌರಾಷ್ಟ್ರ ತಂಡ ರೈಲ್ವೇಸ್ ತಂಡವನ್ನು ಇನಿಂಗ್ಸ್ ಹಾಗೂ 90 ರನ್‌ಗಳ ಅಂತರದಿಂದ ಮಣಿಸಿತು. ರೈಲ್ವೇಸ್ ತಂಡ ಎರಡನೇ ಇನಿಂಗ್ಸ್‌ನಲ್ಲಿ 141 ರನ್‌ಗೆ ಸರ್ವಪತನಗೊಂಡಿತು. ಸೌರಾಷ್ಟ್ರದ ನಾಯಕ ಜಯದೇವ್ ಉನದ್ಕಟ್ 23 ರನ್‌ಗೆ ಆರು ವಿಕೆಟ್‌ಗಳನ್ನು ಪಡೆದು ಮಿಂಚಿದರು. ಛತ್ತೀಸ್‌ಗಢ ತಂಡ ಉತ್ತರಾಖಂಡ ತಂಡವನ್ನು ಇನಿಂಗ್ಸ್ ಹಾಗೂ 65 ರನ್‌ಗಳಿಂದ ಮಣಿಸಿ ಏಳಂಕವನ್ನು ಬಾಚಿಕೊಂಡಿತು. ಆಂಧ್ರ ತಂಡ ದಿಲ್ಲಿ ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಮಣಿಸಿತು. ಈ ಮೂಲಕ ಆರಂಕವನ್ನು ತನ್ನ ಖಾತೆಗೆ ಸೇರಿಸಿಕೊಂಡಿತು. ಅರುಣಾಚಲ ಪ್ರದೇಶ-ಮಿರೆರಾಂ ಪಂದ್ಯ ಹಾಗೂ ಕರ್ನಾಟಕ-ಉತ್ತರಪ್ರದೇಶ ನಡುವಿನ ಪಂದ್ಯವು ಡ್ರಾನಲ್ಲಿ ಕೊನೆಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X