Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಂಗಳೂರು ಗೋಲಿಬಾರ್, ಸಿಎಎ, ಎನ್‌ಆರ್‌ಸಿ...

ಮಂಗಳೂರು ಗೋಲಿಬಾರ್, ಸಿಎಎ, ಎನ್‌ಆರ್‌ಸಿ ವಿರೋಧಿಸಿ ಬೆಂಗಳೂರಿನಲ್ಲಿ ಡಿ.23ರಂದು ಪ್ರತಿಭಟನೆಗೆ ಕರೆ

ವಾರ್ತಾಭಾರತಿವಾರ್ತಾಭಾರತಿ21 Dec 2019 7:43 PM IST
share
ಮಂಗಳೂರು ಗೋಲಿಬಾರ್, ಸಿಎಎ, ಎನ್‌ಆರ್‌ಸಿ ವಿರೋಧಿಸಿ ಬೆಂಗಳೂರಿನಲ್ಲಿ ಡಿ.23ರಂದು ಪ್ರತಿಭಟನೆಗೆ ಕರೆ

ಬೆಂಗಳೂರು, ಡಿ.21: ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಪ್ರಕ್ರಿಯೆ ಹಾಗೂ ಮಂಗಳೂರಿನಲ್ಲಿ ಯುವಕರಿಬ್ಬರ ಹತ್ಯೆ ಖಂಡಿಸಿ ಸೋಮವಾರ (ಡಿ.23) ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಸ್ಲಿಮ್ ಸಂಘಟನೆಗಳು ಕರೆ ನೀಡಿವೆ.

ಸೋಮವಾರ ಇಲ್ಲಿನ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೂ ಮೊದಲು ನಗರದ ವಿವಿಧ ಭಾಗಗಳಲ್ಲಿ ಮೆರವಣಿಗೆಗಳ ಮೂಲಕ, ಪ್ರತಿಭಟನಾ ಸ್ಥಳಕ್ಕೆ ಜಮಾಯಿಸಲು ಹಲವು ಸಂಘಗಳು ನಿರ್ಧರಿಸಿವೆ.
ಮುಸ್ಲಿಮ್ ಸಮುದಾಯದ ಸಂಘ ಸಂಸ್ಥೆಗಳು, ಜಮಾಅತ್‌ಗಳು, ಸಮಿತಿಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳುವಂತೆ ಅನ್ಯಧರ್ಮೀಯ ಸಂಘ ಸಂಸ್ಥೆಗಳ ಮುಖಂಡರಿಗೂ ಆಹ್ವಾನ ನೀಡಲಾಗಿದೆ. ಸೋಮವಾರ ರಾಜ್ಯದ ಇತರ ಜಿಲ್ಲಾ ಕೇಂದ್ರಗಳಲ್ಲೂ ಮುಸ್ಲಿಮರು ಎರಡು ಗಂಟೆಗಳ ಕಾಲ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಈ ಶಾಂತಿಯು ಪ್ರತಿಭಟನೆಗೆ ಬೆಂಬಲ ಸೂಚಿಸುವಂತೆ ಸಭೆಯಲ್ಲಿ ಮನವಿ ಮಾಡಲಾಗಿದೆ.

ಸ್ವಯಂಪ್ರೇರಿತ ಬಂದ್?
ಶಾಲಾ-ಕಾಲೇಜು, ಕಚೇರಿಗಳಿಗೆ ರಜೆ ಹಾಕಬೇಕು ಮತ್ತು ಅಂಗಡಿಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ, ಹೋರಾಟಗಳಿಗೆ ಪಾಲ್ಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಕಳುಹಿಸಲಾಗುತ್ತಿದೆ.

ನಗರದೆಲ್ಲೆಡೆ ಬಿಗಿ ಭದ್ರತೆ
ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಬೆಂಗಳೂರಿನ ಪ್ರತಿಭಟನಾ ಸ್ಥಳಗಳಾದ ಪುರಭವನ, ಮೈಸೂರು ಬ್ಯಾಂಕ್, ಶಿವಾಜಿನಗರದಲ್ಲಿ ಪೊಲೀಸ್ ಭದ್ರತೆ ಮುಂದುವರೆದಿದೆ.
ನಗರದ ಪುರಭವನ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕಳೆದೆರಡು ದಿನಗಳಿಂದ ಇಲ್ಲಿ ಭಾರಿ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿ ಸಿಎಎ ಕಾಯ್ದೆ ವಿರೋಧಿಸಿದ್ದರಿಂದ ಪೊಲೀಸ್ ಭದ್ರತೆ ಮುಂದುವರೆಸಿ ಮೂರು ಕೆಎಸ್‌ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ಮುಸ್ಲಿಮ್ ಮುಖಂಡರೊಂದಿಗೆ ಸಭೆ
ನಗರದ ಮಡಿವಾಳ, ಚಿನ್ನಯ್ಯನಪಾಳ್ಯ, ಮಂಗನಪಾಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮುಸ್ಲಿಮ್ ಮುಖಂಡರೊಂದಿಗೆ ಪೊಲೀಸರು ಸಭೆ ನಡೆಸಿ, ಪ್ರತಿಭಟನೆ ಸಂಬಂಧ ಮಾಹಿತಿ ಪಡೆದರು.

ಗಮನ ಸೆಳೆದ ಮೌನ ಪ್ರತಿಭಟನೆ
ಎನ್‌ಆರ್‌ಸಿ, ಸಿಎಎ ವಿರೋಧಿಸಿ ದೇಶದಲ್ಲೆಡೆ ನಡೆಯುತ್ತಿರುವ ಪ್ರತಿಭಟನೆ ಬೆಂಬಲಿಸಿ ಇಲ್ಲಿನ ಬನ್ನೇರುಘಟ್ಟ ಮುಖ್ಯ ರಸ್ತೆಯ ಐಐಎಂಬಿ ಕಾಲೇಜಿನ ವಿದ್ಯಾರ್ಥಿಗಳು ವೌನವಾಗಿ ಪ್ರತಿಭಟನೆ ನಡೆಸಿದರು.
ಕಾಲೇಜು ಆವರಣದಲ್ಲಿ ನಿಷೇಧಾಜ್ಞೆ ಜಾರಿಯಾದ ಕಾರಣ, ಒಬ್ಬೊಬ್ಬರಾಗಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಬಾಗಿಲಿನಿಂದ ಹೊರ ಬಂದು, ಪಾದರಕ್ಷೆಗಳನ್ನ ಆಚೆಗೆ ಜೋಡಿಸಿ ಖಾಲಿ ಹಾಳೆಯೊಂದನ್ನು ಇಟ್ಟು ಮೌನವಾಗಿಯೇ ಕಾಯ್ದೆಯನ್ನು ವಿರೋಧಿಸಿದರು.

ಇಂದು ಸತ್ಯಾಗ್ರಹ
‘ರಾಷ್ಟ್ರೀಯ ಏಕತೆಗಾಗಿ ಸತ್ಯಾಗ್ರಹ’ ಘೋಷಣೆಯೊಂದಿಗೆ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ಗಳನ್ನು ತಿರಸ್ಕರಿಸುವಂತೆ ಒತ್ತಾಯಿಸಿ ರವಿವಾರ(ಡಿ.22) ನಗರದ ಮಿಲ್ಲರ್ಸ್‌ ರಸ್ತೆಯ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X