ಶೋಭಾ ಕರಂದ್ಲಾಜೆ ಕರಾವಳಿ ಜಿಲ್ಲೆಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದರೆ ಶಾಂತಿ ಸ್ಥಾಪನೆ: ಸಿದ್ದರಾಮಯ್ಯ

ಬೆಂಗಳೂರು, ಡಿ.21: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಕರಾವಳಿ ಜಿಲ್ಲೆಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದರೆ ಅಲ್ಲಿ ಶಾಂತಿ ಸ್ಥಾಪನೆಯಾಗುತ್ತದೆ. ಸುಳ್ಳು ಹೇಳಿಕೆಯಿಂದ ಕೋಮುದ್ವೇಷ ಪ್ರಚೋದಿಸಿದ ಪ್ರಕರಣಗಳ ಇತಿಹಾಸವೇ ಇವರಿಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋಮುಗಲಭೆಗೆ ಪ್ರಚೋದನೆ ನೀಡುತ್ತಾ ಬಂದಿರುವ ಶೋಭಾ ಕರಂದ್ಲಾಜೆ ಅವರನ್ನು ಜೊತೆಯಲ್ಲಿ ಕಟ್ಟಿಕೊಂಡು ಮಂಗಳೂರಿಗೆ ಹೋಗುತ್ತಾರೆ, ನಮ್ಮನ್ನು ಅಲ್ಲಿಗೆ ಹೋಗದಂತೆ ನಿರ್ಬಂಧಿಸುತ್ತಾರೆ. ಮುಖ್ಯಮಂತ್ರಿಗಳ ಉದ್ದೇಶ ಏನು? ಶಾಂತಿ ಸ್ಥಾಪನೆಯೇ? ಶಾಂತಿ ಕದಡುವುದೇ? ಎಂದು ಅವರು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ @BSYBJP ಅವರೇ,
— Siddaramaiah (@siddaramaiah) December 21, 2019
ಸಂಸದೆ @ShobhaBJP ಅವರನ್ನು ಕರಾವಳಿ ಜಿಲ್ಲೆಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದರೆ ಅಲ್ಲಿ ಶಾಂತಿ ಸ್ಥಾಪನೆಯಾಗುತ್ತದೆ.
ಸುಳ್ಳು ಹೇಳಿಕೆಯಿಂದ ಕೋಮುದ್ವೇಷ ಪ್ರಚೋದಿಸಿದ ಪ್ರಕರಣಗಳ ಇತಿಹಾಸವೇ ಇವರಿಗಿದೆ.
1/2 pic.twitter.com/UgtaSlZk1L
ಮುಖ್ಯಮಂತ್ರಿ @BSYBJP
— Siddaramaiah (@siddaramaiah) December 21, 2019
ಅವರು,
ಕೋಮುಗಲಭೆಗೆ ಪ್ರಚೋದನೆ ನೀಡುತ್ತಾ ಬಂದಿರುವ @ShobhaBJP
ಅವರನ್ನು ಜೊತೆಯಲ್ಲಿ ಕಟ್ಟಿಕೊಂಡು ಮಂಗಳೂರಿಗೆ ಹೋಗುತ್ತಾರೆ,
ನಮ್ಮನ್ನು ಅಲ್ಲಿಗೆ ಹೋಗದಂತೆ ನಿರ್ಬಂಧಿಸುತ್ತಾರೆ.
ಮುಖ್ಯಮಂತ್ರಿಗಳ ಉದ್ದೇಶ ಏನು?
ಶಾಂತಿ ಸ್ಥಾಪನೆಯೇ?
ಶಾಂತಿ ಕದಡುವುದೇ?
2/2







