Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನ್‌ನಲ್ಲಿನ ಯುದ್ಧಾಪರಾಧಗಳ...

ಫೆಲೆಸ್ತೀನ್‌ನಲ್ಲಿನ ಯುದ್ಧಾಪರಾಧಗಳ ಬಗ್ಗೆ ಪೂರ್ಣ ಪ್ರಮಾಣದ ವಿಚಾರಣೆ

ಅಂತರ್‌ರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ಮುಖ್ಯ ಪ್ರಾಸಿಕ್ಯೂಟರ್

ವಾರ್ತಾಭಾರತಿವಾರ್ತಾಭಾರತಿ21 Dec 2019 9:31 PM IST
share
ಫೆಲೆಸ್ತೀನ್‌ನಲ್ಲಿನ ಯುದ್ಧಾಪರಾಧಗಳ ಬಗ್ಗೆ ಪೂರ್ಣ ಪ್ರಮಾಣದ ವಿಚಾರಣೆ

ದ ಹೇಗ್ (ನೆದರ್‌ಲ್ಯಾಂಡ್ಸ್), ಡಿ. 21: ಫೆಲೆಸ್ತೀನ್ ಭೂಭಾಗಗಳಲ್ಲಿ ನಡೆಯುತ್ತಿದೆ ಎನ್ನಲಾದ ಯುದ್ಧಾಪರಾಧಗಳ ಬಗ್ಗೆ ನಾನು ಪೂರ್ಣ ಪ್ರಮಾಣದ ವಿಚಾರಣೆ ಮಾಡಲು ಬಯಸಿದ್ದೇನೆ ಎಂದು ಅಂತರ್‌ರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ)ದ ಮುಖ್ಯ ಪ್ರಾಸಿಕ್ಯೂಟರ್ ಫತೂ ಬೆನ್ಸೂಡ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಇಸ್ರೇಲ್ ಮತ್ತು ಅಮೆರಿಕಗಳು ತೀವ್ರವಾಗಿ ಪ್ರತಿಕ್ರಿಯಿಸಿವೆ.

ಅದೇ ವೇಳೆ, ಅಂತರ್‌ರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ತೀರ್ಮಾನವನ್ನು ಫೆಲೆಸ್ತೀನ್ ಸ್ವಾಗತಿಸಿದೆ. ಇದು ತುಂಬಾ ಹಿಂದೆಯೇ ಆಗಬೇಕಾಗಿತ್ತು ಎಂದು ಅದು ಹೇಳಿದೆ. 2014ರಲ್ಲಿ ಗಾಝಾದಲ್ಲಿ ಯುದ್ಧ ನಡೆದ ಬಳಿಕ, ಅಲ್ಲಿನ ಪರಿಸ್ಥಿತಿಯ ಬಗ್ಗೆ 5 ವರ್ಷಗಳ ಕಾಲ ಪ್ರಾಥಮಿಕ ತನಿಖೆ ಆಗಿತ್ತು.

ಈ ನಿರ್ಧಾರವು ಐಸಿಸಿಯನ್ನು ಇಸ್ರೇಲ್ ವಿರುದ್ಧದ ‘ರಾಜಕೀಯ ದಾಳ’ವನ್ನಾಗಿಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

2002ರಲ್ಲಿ ರಚನೆಯಾದಂದಿನಿಂದ ಅಂತರ್‌ರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ಒಡಂಬಡಿಕೆಗೆ ಸಹಿ ಹಾಕಲು ಇಸ್ರೇಲ್ ನಿರಾಕರಿಸಿದೆ.

‘‘ಫೆಲೆಸ್ತೀನ್‌ನಲ್ಲಿ ನೆಲೆಸಿರುವ ಪರಿಸ್ಥಿತಿಯ ಕುರಿತ ತನಿಖೆಯನ್ನು ಮುಂದುವರಿಸಲು ಗಟ್ಟಿ ಆಧಾರಗಳಿವೆ ಎನ್ನುವುದು ನನಗೆ ಮನವರಿಕೆಯಾಗಿದೆ’’ ಎಂದು ಐಸಿಸಿ ಮುಖ್ಯ ಪ್ರಾಸಿಕ್ಯೂಟರ್ ಬೆನ್ಸೂಡ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

‘‘ಪೂರ್ವ ಜೆರುಸಲೇಮ್ ಮತ್ತು ಗಾಝಾ ಪಟ್ಟಿ ಸೇರಿದಂತೆ ಪಶ್ಚಿಮ ದಂಡೆಯಲ್ಲಿ ಯುದ್ಧಾಪರಾಧಗಳು ನಡೆದಿವೆ ಅಥವಾ ನಡೆಯುತ್ತಿದೆ ಎನ್ನುವ ಬಗ್ಗೆ ನನತೆ ಮನವರಿಕೆಯಾಗಿದೆ’’ ಎಂದು ಅವರು ಹೇಳಿದರು. ಆದರೆ, ಯುದ್ಧಾಪರಾಧಗಳನ್ನು ಯಾರು ಮಾಡಿದ್ದಾರೆ ಎನ್ನುವುದನ್ನು ಅವರು ತಿಳಿಸಲಿಲ್ಲ.

ಈ ವಿಷಯದಲ್ಲಿ ವಿವಾದಕ್ಕೆ ಆಸ್ಪದ ಮಾಡಿಕೊಡಬಹುದಾದ ಕಾನೂನು ಮತ್ತು ವಾಸ್ತವತೆಯ ಸಂಗತಿಗಳು ಒಳಗೊಂಡಿರುವುದರಿಂದ, ಐಸಿಸಿ ಅಧಿಕಾರ ವ್ಯಾಪ್ತಿ ಹೊಂದಿರುವ ಭೂಭಾಗಗಳ ಬಗ್ಗೆ ತೀರ್ಪು ನೀಡುವಂತೆ ಮೊದಲು ತಾನು ನ್ಯಾಯಾಲಯವನ್ನು ಕೋರುತ್ತೇನೆ ಎಂದರು.

‘‘ಅದರಲ್ಲೂ ಮುಖ್ಯವಾಗಿ, ನ್ಯಾಯಾಲಯದ ವ್ಯಾಪ್ತಿ ಹೊಂದಿರುವ ಹಾಗೂ ನಾನು ತನಿಖೆ ನಡೆಸಬಹುದಾದ ಭೂಭಾಗವು ಪೂರ್ವ ಜೆರುಸಲೇಮ್ ಮತ್ತು ಗಾಝಾ ಸೇರಿದಂತೆ ಪಶ್ಚಿಮ ದಂಡೆಯನ್ನು ಒಳಗೊಂಡಿದೆಯೇ ಎನ್ನುವುದನ್ನು ನಾನು ಮೊದಲು ಖಚಿತಪಡಿಸಬೇಕಾಗಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X