ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಮೊಕದ್ದಮೆ
ಬೆಂಗಳೂರು, ಡಿ.21: ನಿಷೇಧಾಜ್ಞೆ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ.20ರಂದು ಇಲ್ಲಿನ ನಗರದ ಸರಕಾರಿ ಕಲಾ ಕಾಲೇಜು ಮೈದಾನದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ ನಗರದ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಕೋಮುಭಾವನೆ ಕೆರಳಿಸುವಂತ(ಶಬ್ದಗಳು, ಸಂಕೇತಗಳ) ಬಳಕೆ(ಐಪಿಸಿ ಸೆಕ್ಷನ್ 153(ಎ) ಹಾಗೂ ಧರ್ಮಗಳ ಆಧಾರದ ಮೇಲಿನ ನಂಬಿಕೆಗಳನ್ನು ಅವಮಾನಿಸುವುದು(295(ಎ) ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್‌ಸಿಂಗ್ ರಾಥೋಡ್ ತಿಳಿಸಿದರು.
ಅದೇ ರೀತಿ, ಮೂರು ದಿನಗಳ 144 ಸೆಕ್ಷನ್ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೂ 244 ಜನರನ್ನು ವಶಕ್ಕೆ ಪಡೆಯಲಾಗಿದೆ. 10 ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದರು.
Next Story





