ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ : ಓರ್ವನ ಬಂಧನ

ಉಡುಪಿ : ಉಡುಪಿ ಕಲ್ಪನಾ ಲಾಡ್ಜ್ ಬಿಲ್ಡಿಂಗ್ ಬಳಿ ಡಿ.21ರಂದು ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ಥಾಣೆ ಅಝಾದ್ ನಗರದ ವಿನೋದ್ ರಾಮ್ ಸೇವಕ್ ಯಾದವ್( 26) ಬಂಧಿತ ಆರೋಪಿ. ಈತನಿಂದ 10 ಕೆ.ಜಿ 600 ಗ್ರಾಂ ಗಾಂಜಾ, 2 ಮೊಬೈಲ್ ಫೋನ್, ಬ್ಯಾಗ್, ಬಟ್ಟೆ, ನಗದು ಹಣ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 3,23,300 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಸೆನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಆರ್.ಜೈಶಂಕರ್ ಮಾರ್ಗದರ್ಶನದಲ್ಲಿ, ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್ ಪೆಕ್ಟರ್ ಸಿ.ಕಿರಣ್ ನೇತೃತ್ವದಲ್ಲಿ ಈ ಕಾರ್ಯಾಚರಣೆಯಲ್ಲಿ ನಡೆಸಲಾಗಿದೆ.
ಆರೋಪಿಯನ್ನು ಬಂಧಿಸಿದ ತಂಡಕ್ಕೆ ಪೊಲೀಸ್ ಅಧೀಕ್ಷಕರು 20,000 ರೂ. ನಗದು ಬಹುಮಾನ ಘೋಷಿಸಿದ್ದಾರೆ.





