Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಂಗಳೂರು ಗೋಲಿಬಾರ್: ಪೊಲೀಸರ ವಜಾ ಹಾಗೂ...

ಮಂಗಳೂರು ಗೋಲಿಬಾರ್: ಪೊಲೀಸರ ವಜಾ ಹಾಗೂ ಘಟನೆಯ ನ್ಯಾಯಾಂಗ ತನಿಖೆಗೆ ಕೆಸಿಎಫ್ ಯುಎಇ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 Dec 2019 7:55 AM IST
share
ಮಂಗಳೂರು ಗೋಲಿಬಾರ್: ಪೊಲೀಸರ ವಜಾ ಹಾಗೂ ಘಟನೆಯ ನ್ಯಾಯಾಂಗ ತನಿಖೆಗೆ ಕೆಸಿಎಫ್ ಯುಎಇ ಒತ್ತಾಯ

ಯುಎಇ, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೇ ಏಕಾಏಕಿ ಸೆಕ್ಷನ್ 144 ಹಾಕಿದಲ್ಲದದೇ, ಮುಖ್ಯಮಂತ್ರಿ ಆದೇಶವನ್ನು ಮೀರಿ ಅಮಾಯಕ ಎರಡು ಜೀವಗಳು ಬಲಿಯಾಗಲು ನೇರ ಕಾರಣರಾದ ಮಂಗಳೂರು ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ನಡೆದ ಪೌರ ಸಮ್ಮಿಲನ ಒಕ್ಕೊರಲಿನಿಂದ ಒತ್ತಾಯಿಸಿತು.

ಪ್ರತಿಭಟನೆ ವೇಳೆ ಸೇರಿದ್ದ ಕೆಲವೇ ಕೆಲವು ಯುವಕರ ಮನಸೆಳೆಯುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ಮನಬಂದಂತೆ ಲಾಠಿ ಚಾರ್ಜ್ ಮಾಡಿ ಯುವಕರ ಗುಂಪು ಆಕ್ರೋಶಗೊಳ್ಳುವಂತೆ ಮಾಡಿದರು. ಕಾನೂನಿನ ಯಾವುದೇ ಪರಿಧಿಯನ್ನು ಪಾಲಿಸದೆ ನೇರವಾಗಿ ಗುಂಡನ್ನು ಹಾರಿಸಿ ಇಬ್ಬರು ಅಮಾಯಕರ ಜೀವ ಹಾನಿಗೆ ಕಾರಣವಾದರು. ಈ ಎಲ್ಲಾ ಗಲಭೆಗೆ ಪೊಲೀಸ್ ಅಧಿಕಾರಿಗಳು ನೇರ ಕುಮ್ಮಕ್ಕು ನೀಡಿದ್ದಲ್ಲದೆ, ಕಾನೂನು ಸುವ್ಯವಸ್ಥೆ ಕಾಪಾಡ ಬೇಕಿದ್ದ ಪೊಲೀಸ್ ಇಲಾಖೆ ನೇರವಾಗಿ ಗಲಭೆಗೆ ನೇತೃತ್ವ ಕೊಟ್ಟು ಕರ್ತವ್ಯ ಲೋಪ ಎಸಗಿದೆ ಎಂದು ಪೌರ ಸಮ್ಮಿಲನವು ಆರೋಪಿಸಿತು. 

ಘಟನೆಯ ವರದಿಗಾಗಿ ಬಂದಿದ್ದ ಕೇರಳ ಮೂಲದ ಪತ್ರಕರ್ತರ ಜೊತೆ ಗೂಂಡಾ ವರ್ತನೆ ತೋರಿಸಿ ಅವರನ್ನು ಬಂಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ಕರ್ನಾಟಕ ಸರಕಾರಕ್ಕೆ ಚೀಮಾರಿ ಹಾಕಿಸಿದ್ದು ಎಲ್ಲಾ ಘಟನೆಗಳಿಗೆ ಪೊಲೀಸ್ ನೇರ ಹೊಣೆ. ಅವರನ್ನು ತಕ್ಷಣ ಕೆಲಸದಿಂದ ವಜಾಗೊಳಿಸಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಸಿಎಫ್ ಯುಎಇ ಒತ್ತಾಯಿಸಿದೆ.

ಕೆಸಿಎಫ್ ಯುಎಇ ಸಮಿತಿ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು ರವರ ಅಧ್ಯಕ್ಷತೆಯಲ್ಲಿ 'ಜಾತ್ಯತೀತ ರಾಷ್ಟ್ರ ಧಾರ್ಮಿಕ ಪೌರತ್ವ' ಎಂಬ ಶೀರ್ಷಿಕೆಯಲ್ಲಿ ಶಾರ್ಜಾ ದಲ್ಲಿ ನಡೆದ ಪೌರ ಸಮ್ಮಿಲನವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಉಪಾಧ್ಯಕ್ಷ ಮುಹಮ್ಮದ್ ಕುಕ್ಕುವಳ್ಳಿ ಉದ್ಘಾಟಿಸಿಸಿದರು. ಕೆಸಿಎಫ್ ಯುಎಇ ಸಂಘಟನಾ ಅಧ್ಯಕ್ಷರಾದ ಇಕ್ಬಾಲ್ ಕಾಜೂರು ದಿಕ್ಸೂಚಿ ಭಾಷಣ ಮಾಡಿದರು. ಮುಸ್ತಫಾ ಮಾಸ್ಟರ್ ಉಳ್ಳಾಲ, ನಿಝಾಮ್ ಮದನಿ ಉರುವಾಲಪದವು, ಅಝ್ಮಾನ್ ಚಾರ್ಮಾಡಿ, ಇಬ್ರಾಹಿಂ ಪೈಝಿ ಕುಪ್ಪೆಟ್ಟಿ, ಕಬೀರ್ ಬಾಯಂಬಾಡಿ ಅಬುಧಾಬಿ ವಿಚಾರ ಮಂಡಿಸಿದರು.

ಖ್ಯಾತ ಚಿಂತಕ ಸಯ್ಯದ್ ಹುಸೈನ್ ತಂಙ್ಙಳ್ ವಾಡಾನಪಳ್ಲಿ ರವರು NRC ಮತ್ತು CAA ಕುರಿತು ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಲಂದರ್ ಕಬಕ ಸ್ವಾಗತಿಸಿ, ರಫೀಕ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ಘಟನೆಯಲ್ಲಿ ಮೃತಪಟ್ಟವರ ಹೆಸರಿನಲ್ಲಿ ಪ್ರಾರ್ಥನೆ ಮತ್ತು ತಹ್ಲೀಲ್ ಸಮರ್ಪಣೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X