ಜಾರ್ಖಂಡ್ ನಲ್ಲಿ ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ ಅಧಿಕಾರಕ್ಕೆ: ಬಿಜೆಪಿಗೆ ಮುಖಭಂಗ
ವಿಧಾನಸಭಾ ಚುನಾವಣೆ
ಹೊಸದಿಲ್ಲಿ: ಜಾರ್ಖಂಡ್ ಮುಕ್ತಿ ಮೋರ್ಛಾ, ಕಾಂಗ್ರೆಸ್ ಮತ್ತು ಆರ್ ಜೆಡಿ ಮೈತ್ರಿಯು ಜಾರ್ಖಂಡ್ ನಲ್ಲಿ ಬಿಜೆಪಿಯನ್ನು ಮಣಿಸುವಲ್ಲಿ ಸಫಲವಾಗಿದ್ದು, ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ.
ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 5 ವರ್ಷಗಳ ಕಾಲ ಆಡಳಿತದಲ್ಲಿದ್ದ ಬಿಜೆಪಿಯನ್ನು ಸೋಲಿಸಲು ಈ ಮೈತ್ರಿ ಯಶಸ್ವಿಯಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆ ಪ್ರಚಾರ ರ್ಯಾಲಿಗಳಲ್ಲಿ ಸ್ವತಃ ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸಿದ್ದರೂ ಬಿಜೆಪಿಗೆ ಯಾವುದೇ ಫಲ ನೀಡಿಲ್ಲ.
ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ 47 ಸ್ಥಾನಗಳಲ್ಲಿ ಜಯ ಗಳಿಸಿದ್ದರೆ, ಬಿಜೆಪಿ 24 ಸ್ಥಾನಗಳನ್ನಷ್ಟೇ ಗೆಲ್ಲಲು ಸಫಲವಾಗಿದೆ. ಕಳೆದ ಬಾರಿ ಬಿಜೆಪಿ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
Next Story