Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಂಧನ ಕೇಂದ್ರಕ್ಕೆ ಹೋಗುತ್ತೇನೆ ಹೊರತು...

ಬಂಧನ ಕೇಂದ್ರಕ್ಕೆ ಹೋಗುತ್ತೇನೆ ಹೊರತು ಯಾವುದೇ ದಾಖಲೆ ನೀಡಲ್ಲ: ಸಸಿಕಾಂತ್ ಸೆಂಥಿಲ್

ಬೆಂಗಳೂರಿನಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿಸಿ ಬೃಹತ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ23 Dec 2019 7:44 PM IST
share
ಬಂಧನ ಕೇಂದ್ರಕ್ಕೆ ಹೋಗುತ್ತೇನೆ ಹೊರತು ಯಾವುದೇ ದಾಖಲೆ ನೀಡಲ್ಲ: ಸಸಿಕಾಂತ್ ಸೆಂಥಿಲ್

ಬೆಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ಎನ್‌ಆರ್‌ಸಿಗೆ ದೇಶಾದ್ಯಂತ ವ್ಯಕ್ತವಾಗಿರುವ ವಿರೋಧ ಕಂಡು ಪ್ರಧಾನಿ ನರೇಂದ್ರ ಮೋದಿ ವಿಚಲಿತಗೊಂಡಿದ್ದಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ಸೋಮವಾರ ನಗರದ ಮಿಲ್ಲರ್ಸ್ ರಸ್ತೆಯ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಸಿಎಎ-ಎನ್‌ಆರ್‌ಸಿ ವಿರೋಧಿಸಿ ನಡೆದ ಬೃಹತ್ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ದೇಶದ ಜನರು ಇಷ್ಟೊಂದು ಏಕತೆಯನ್ನು ಪ್ರದರ್ಶಿಸುತ್ತಾರೆ ಎಂದು ಪ್ರಧಾನಿ ಮೋದಿ ನಿರೀಕ್ಷಿಸಿರಲಿಲ್ಲ. ಕೇಂದ್ರ ಸರಕಾರ ಗೊತ್ತು ಗುರಿಯಿಲ್ಲದ ಸರಕಾರವಾಗಿದ್ದು, ಅಸ್ಸಾಂನ ಸಮಸ್ಯೆಯನ್ನು ತೆಗೆದುಕೊಂಡು, ಇಡೀ ದೇಶದ ಮೇಲೆ ಎನ್‌ಆರ್‌ಸಿ ಎಂದು ಜಾರಿ ಮಾಡಲು ಹೊರಟಿದ್ದಾರೆ ಎಂದು ದೂರಿದರು.

ಪತ್ರ ಬರೆದಿದ್ದೇನೆ: ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ಸಂಬಂಧಿಸಿದಂತೆ ನನ್ನನ್ನು ಯಾವುದೇ ದಾಖಲೆ ಕೇಳಿದರೂ ನೀಡುವುದಿಲ್ಲ. ಬದಲಿಗೆ, ಬಂಧನ ಕೇಂದ್ರಕ್ಕೆ ಹೋಗುತ್ತೇನೆ ಎಂದು ಈಗಾಗಲೇ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದರು.

ಎನ್‌ಆರ್‌ಸಿ ಜಾರಿಯಿಂದಾಗಿ ಅಸ್ಸಾಂನಲ್ಲಿ ಒಟ್ಟು 18 ಲಕ್ಷ ಮಂದಿಯನ್ನು ವಲಸಿಗರು ಎಂದು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 11 ಲಕ್ಷ ಮಂದಿ ಹಿಂದೂಗಳಾಗಿದ್ದಾರೆ. ಹಾಗಾದರೆ, ಕೇಂದ್ರ ಸರಕಾರ ಯಾರಿಗೆ ಪೌರತ್ವ ಕಲ್ಪಿಸಲು ಹೊರಟಿದೆ ಎಂಬುದು ಹಾಸ್ಯಾಸ್ಪದ ಸಂಗತಿಯಾಗಿದೆ. ಎನ್‌ಆರ್‌ಸಿ ವಿಷಯದಲ್ಲಿ ಹಿಂದೂ, ಮುಸ್ಲಿಂರ ಒಗ್ಗಟ್ಟು ಒಡೆದು ಹೋಗುತ್ತದೆ ಎಂದು ಕೇಂದ್ರ ಸರಕಾರ ಪರಿಗಣಿಸಿತ್ತು. ಬದಲಿಗೆ, ಇಡೀ ದೇಶ ಒಂದಾಗಿದೆ. ಕೇಂದ್ರಕ್ಕೆ ಎನ್‌ಆರ್‌ಸಿ ಬದಲಿಗೆ ಘರ್ಷಣೆ ನಡೆಯಬೇಕು ಎಂಬ ಹಂಬಲವಿದೆ. ಘರ್ಷಣೆಗೆ ನಾವು ಅವಕಾಶ ನೀಡಿದರೆ, ಅವರಿಗೆ ವಿಜಯ ದೊರೆತಂತಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಘರ್ಷಣೆಗಿಳಿಯದೆ ಅಹಿಂಸಾತ್ಮಕ ಹೋರಾಟದ ಮೂಲಕ ವಿಜಯ ಸಾಧಿಸೋಣ ಎಂದು ನುಡಿದರು.

ಈ ಪ್ರತಿಭಟನೆಗೆ ಚಾಲನೆ ನೀಡಿದ ದೇಶದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ನಮ್ಮ ವಿದ್ಯಾರ್ಥಿಗಳಿಗೆ ನಾವು ಧನ್ಯವಾದ ಹೇಳಬೇಕು. ದೇಶದ ಜನರು ರೊಚ್ಚಿಗೆದ್ದಿದ್ದಾರೆ. ಇದನ್ನು ಕೇಂದ್ರ ಸರಕಾರ ಅರ್ಥ ಮಾಡಿಕೊಳ್ಳದೇ ಹೋದರೆ ಭವಿಷ್ಯದಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ. ನಮ್ಮ ಅಜ್ಜಿ, ತಾತ, ತಂದೆ, ತಾಯಿಗಳು ಈ ನೆಲೆದಲ್ಲಿ ಹುಟ್ಟಿ ನೂರಾರು ವರ್ಷಗಳಿಂದ ಬಾಳುತ್ತಿದ್ದಾರೆ. ಅವರ ಬಳಿಯೂ ದೇಶದ ಪೌರತ್ವಕ್ಕಾಗಿ ಜನನ ಪ್ರಮಾಣ ಪತ್ರ ಕೇಳುತ್ತೀರಾ? ಎಂದು ಪ್ರಶ್ನಿಸಿದ ಅವರು, ಕರ್ನಾಟಕ ಸೇರಿದಂತೆ ದೇಶದಲ್ಲಿ ಯಾವುದೇ ಕಾರಣಕ್ಕೂ ಎನ್‌ಆರ್‌ಸಿ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X