Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡೆಬಿಟ್ ಕಾರ್ಡ್‌ಗಳ ಸಂಖ್ಯೆಯಲ್ಲಿ ಶೇ.15...

ಡೆಬಿಟ್ ಕಾರ್ಡ್‌ಗಳ ಸಂಖ್ಯೆಯಲ್ಲಿ ಶೇ.15 ರಷ್ಟು ಕುಸಿತ

ವಾರ್ತಾಭಾರತಿವಾರ್ತಾಭಾರತಿ23 Dec 2019 9:01 PM IST
share
ಡೆಬಿಟ್ ಕಾರ್ಡ್‌ಗಳ ಸಂಖ್ಯೆಯಲ್ಲಿ ಶೇ.15 ರಷ್ಟು ಕುಸಿತ

ಹೊಸದಿಲ್ಲಿ,ಡಿ.23: ಈ ವರ್ಷದ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಡೆಬಿಟ್ ಕಾರ್ಡ್‌ಗಳ ಸಂಖ್ಯೆಯಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ ಕುಸಿತವುಂಟಾಗಿದೆಯೆಂದು ಆಂಗ್ಲ ದಿನಪತ್ರಿಕೆಯೊಂದು ಸೋಮವಾರ ವರದಿ ಮಾಡಿದೆ.

ಈ ವರ್ಷದ ಅಕ್ಟೋಬರ್‌ನಲ್ಲಿ ದೇಶದಲ್ಲಿ ಒಟ್ಟು 84.3 ಕೋಟಿ ಎಟಿಎಂ ಕಾರ್ಡ್‌ಗಳು ಚಾಲ್ತಿಯಲ್ಲಿದ್ದವು. ಕಳೆದ ವರ್ಷ ಇದೇ ಅವಧಿಯಲ್ಲಿ 99.8 ಡೆಬಿಟ್ ಕಾರ್ಡ್‌ಗಳು ಚಲಾವಣೆಯಲ್ಲಿದ್ದವು. ಹೀಗಾಗಿ ಕಳೆದ ಎಡು ವರ್ಷಗಳಲ್ಲಿ ಡೆಬಿಟ್ ಕಾರ್ಡ್‌ಗಳ ಚಲಾವಣೆಯಲ್ಲಿ 15 ಶೇಕಡ ಇಳಿಕೆಯಾಗಿದೆ ಎಂದು ಅದು ವರದಿ ಮಾಡಿದೆ.

  ರೂಪೇ/ಮಾಸ್ಟರ್ ಕಾರ್ಡ್/ ವೀಸಾ ಅಥವಾ ಇಎಂವಿ ಮೈಗ್ರೇಶನ್‌ಗಳನ್ನು ಮ್ಯಾಗ್ನೆಟಿಕ್ ಸ್ಟ್ರಿಪ್‌ಗಳಿಂದ ಚೀಪ್ ಆಧಾರಿತವುಗಳನ್ನಾಗಿ ಪರಿವರ್ತಿಸಿದ ಸಂದರ್ಭ ಇಂತಹ 15.50 ಕೋಟಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಆದೇಶದ ಪ್ರಕಾರ ಎಲ್ಲಾ ಬ್ಯಾಂಕ್‌ಗಳು ಹೆಚ್ಟು ಸುರಕ್ಷಿತವಾದ ಇಎಂವಿ ಚಿಪ್ ಆಧಾರಿತ ಕಾರ್ಡ್ ವ್ಯವಸ್ಥೆಯನ್ನು ಆಳವಡಿಸಿಕೊಳ್ಳಬೇಕಿದೆ.

  2018ರಲ್ಲಿ ಬ್ಯಾಂಕುಗಳು ಡೆಬಿಟ್ ಕಾರ್ಡ್‌ಗಳನ್ನು ಪುನರ್‌ವಿತರಿಸುವ ಕೆಲಸದಲ್ಲಿ ತೊಡಗಿದವು. ಪ್ರಸಕ್ತ ವೇತನದ ಆಧಾರದಲ್ಲಿ ದುಡಿಯುವ ವೃತ್ತಿಪರರರು ತಮ್ಮ ಕೆಲಸಗಳನ್ನು ಬದಲಾಯಿಸುತ್ತಲೇ ಇರುವುದರಿಂದ ನಿಷ್ಕ್ರಿಯವಾದ ಖಾತೆಗಳಲ್ಲಿ ಹೆಚ್ಚಳವಾಗಿರುವುದಕ್ಕೆ ಕಾರಣವೆಂದು ವರದಿಯು ಹೇಳಿದೆ. ನಗರ ಪ್ರದೇಶದ ಯುವ ಭಾರತೀಯರು ಬ್ಯಾಂಕುಗಳನ್ನು ಬದಲಾಯಿಸುವುದರಿಂದ ಝಿರೋ ಬ್ಯಾಲೆನ್ಸ್ ಖಾತೆಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವೆನ್ನಲಾಗಿದೆ.

ನಿಷ್ಕ್ರಿಯವಾಗಿರುವ ಖಾತೆಗಳನ್ನು ಉಳಿಸಿಕೊಳ್ಳುವುದು ಬ್ಯಾಂಕ್‌ಗಳ ಹಿತದೃಷ್ಟಿಯಿಂದ ವಿವೇಕಯುತವಾದುದಲ್ಲವೆಂದು ಪಿಡೆಲಿಟಿ ನ್ಯಾಶನಲ್ ಇನ್‌ಫಾರ್ಮೆಶನ್ ಸರ್ವಿಸ್ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘‘ ಇಂತಹ ನಿಷ್ಕ್ರಿಯ ಖಾತೆಗಳನ್ನು ಉಳಿಸಿಕೊಳ್ಳುವುದರಿಂದ ಕಪ್ಪುಹಣ ಬಿಳುಪುಗೊಳಿಸುವಂತಹ ವಂಚನೆಗಳು ಹೆಚ್ಚುವ ಅಪಾಯವಿರುತ್ತದೆ. ಎರಡನೆಯದಾಗಿ ಇಂತಹ ಖಾತೆಗಳನ್ನು ಉಳಿಸಿಕೊಳ್ಳುವ ವೆಚ್ಚವೂ ತಗಲುತ್ತದೆ. ಹೀಗಾಗಿ ಗ್ರಾಹರು ಬೇಡಿಕೆಯನ್ನು ಸಲ್ಲಿಸಿದಯೇ, ಅವರಿಗೆ ಸ್ವಯಂಪ್ರೇರಿತವಾಗಿ ಡೆಬಿಟ್ ಕಾರ್ಡ್‌ಗಳನ್ನು ಒದಗಿಸುವುದನ್ನು ಬ್ಯಾಂಕ್‌ಗಳು ನಿಲ್ಲಿಸಿವೆ’’ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X