Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಅಡಾಪ್ಟ್-ಎ ಸ್ಟ್ರೀಟ್’ ಯೋಜನೆಗೆ...

‘ಅಡಾಪ್ಟ್-ಎ ಸ್ಟ್ರೀಟ್’ ಯೋಜನೆಗೆ ಬಿಬಿಎಂಪಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Dec 2019 11:18 PM IST
share
‘ಅಡಾಪ್ಟ್-ಎ ಸ್ಟ್ರೀಟ್’ ಯೋಜನೆಗೆ ಬಿಬಿಎಂಪಿ ಚಾಲನೆ

ಬೆಂಗಳೂರು,ಡಿ.23: ನಗರದ ರಸ್ತೆಗಳನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಅಡಾಪ್ಟ್-ಎ ಸ್ಟ್ರೀಟ್ ಹೆಸರಿನಲ್ಲಿ ರಸ್ತೆ ದತ್ತು ಪಡೆಯುವ ಯೋಜನೆಗೆ ಪಾಲಿಕೆ ಚಾಲನೆ ನೀಡಿದೆ. ಈ ಸಂಬಂಧ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಶೇಷ ಆಯುಕ್ತ (ಘನತ್ಯಾಜ್ಯ) ರಂದೀಪ್ ಅವರ ನೇತೃತ್ವದಲ್ಲಿ ವಿವಿಧ 25 ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜತೆ 30ಕ್ಕೂ ಹೆಚ್ಚು ರಸ್ತೆಗಳನ್ನು ದತ್ತು ಪಡೆಯುವ ಕುರಿತು ಸಭೆ ನಡೆಯಿತು.

ಬೆಂಗಳೂರನ್ನು ಸುಂದರ ನಗರವನ್ನಾಗಿಸುವ ಉದ್ದೇಶದಿಂದ ರಸ್ತೆ ದತ್ತು ಪಡೆಯುವ ಯೋಜನೆಗೆ ಪಾಲಿಕೆ ಚಾಲನೆ ನೀಡಿದ್ದು, ಈಗಾಗಲೇ ಇಂಡಿಯಾ ರೈಸಿಂಗ್ ಟ್ರಸ್ಟ್ 10 ರಸ್ತೆಗಳನ್ನು ದತ್ತು ಪಡೆದು ಆ ರಸ್ತೆಗಳನ್ನು ಸ್ವಚ್ಛವಾಗಿಡುವ ಕಾರ್ಯ ನಡೆಯುತ್ತಿದೆ.

ಪಾಲಿಕೆ ವ್ಯಾಪ್ತಿಗೊಳಪಡುವ ಯಾವುದೇ ರಸ್ತೆಯನ್ನಾಗಲಿ ಅಡಾಪ್ಟ್ ಎ ಸ್ಟ್ರೀಟ್ ಹೆಸರಿನಲ್ಲಿ ದತ್ತು ಪಡೆಯಬಹುದಾಗಿದೆ. ದತ್ತು ಪಡೆದ ಸಂಸ್ಥೆ ಆ ರಸ್ತೆಯಲ್ಲಿ ಬ್ಲಾಕ್ ಸ್ಪಾಟ್(ಕಸ ಸುರಿಯುವ ಸ್ಥಳ) ತೆರವುಗೊಳಿಸುವುದು, ಪೌರಕಾರ್ಮಿಕರ ಸಹಯೋಗದಲ್ಲಿ ಬ್ಲಾಕ್ ಸ್ಪಾಟ್‌ ಸ್ಥಳದಲ್ಲಿ ರಂಗೋಲಿ ಬಿಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಗೋಡೆ ಅಥವಾ ಮರಕ್ಕೆ ಅಂಟಿಸಿರುವ ಬಿತ್ತಿಪತ್ರಗಳನ್ನು ತೆರವುಗೊಳಿಸುವುದು, ಗೋಡೆಗಳ ಮೇಲೆ ಬಣ್ಣ ಬಳಿಯುವುದು, ಪಾದಚಾರಿ ಮಾರ್ಗ ಸರಿಪಡಿಸುವುದು, ಒಣ ಮರ ಅಥವಾ ಮರಕ್ಕೆ ಅಳವಡಿಸಿರುವ ಗ್ರಿಲ್ ತೆರವುಗೊಳಿಸುವುದು, ಬೀದಿದೀಪ ನಿರ್ವಹಣೆಯ ಮೇಲೆ ಉಸ್ತುವಾರಿ ವಹಿಸಲಿದೆ.

ರಸ್ತೆ ಮಧ್ಯೆಯ ಮೀಡಿಯನ್ಸ್‌ನಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಡುವುದು, ಉದ್ಯಾನ ಸ್ವಚ್ಛಗೊಳಿಸುವುದು, ರಸ್ತೆಯಲ್ಲಿ ಬ್ಯಾನರ್, ಫ್ಲೆಕ್ಸ್, ಒಎಫ್‌ಸಿ ಕೇಬಲ್, ಬೀದಿ ದೀಪ, ರಸ್ತೆ ಗುಂಡಿ ಕಂಡು ಬಂದರೆ ಸಹಾಯ ಅಪ್ಲಿಕೇಷನ್ ಅಥವಾ ಪಿಕ್ಸ್ ಮೈ ಸ್ಟ್ರೀಟ್ ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸುವುದು ಸೇರಿದಂತೆ ಒಟ್ಟಾರೆ ರಸ್ತೆಯನ್ನು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕಾಗುತ್ತದೆ.

ಈ ಯೋಜನೆಯಡಿ ಪಾಲಿಕೆ ಯಾವುದೇ ರೀತಿ ಅನುದಾನ ನೀಡುವುದಿಲ್ಲ. ಒಮ್ಮೆ ರಸ್ತೆ ದತ್ತು ಪಡೆದರೆ ಅದರ ಸ್ವಚ್ಛತಾ ಜವಾಬ್ದಾರಿ ಆ ಸಂಸ್ಥೆಯದ್ದೇ ಆಗಿರುತ್ತದೆ. ಒಂದು ತಿಂಗಳಿಗೊಮ್ಮೆಯಾದರೂ ರಸ್ತೆಯನ್ನು ಸ್ವಚ್ಛ ಮಾಡುತ್ತಿರಬೇಕು. ದತ್ತು ಪಡೆದ ಸಂಘ-ಸಂಸ್ಥೆ ಹಾಗೂ ರಸ್ತೆಯ ಹೆಸರಿರುವ ನಾಮಫಲಕವನ್ನು ಪಾಲಿಕೆ ವತಿಯಿಂದ ಅಳವಡಿಸಲಾಗುವುದು. ಸಂಸ್ಥೆ ಈ ಕುರಿತ ಜಾಹೀರಾತು ಅಳವಡಿಸಲು ಅವಕಾಶವಿರುವುದಿಲ್ಲ. ಒಂದು ವೇಳೆ ರಸ್ತೆಯ ನಿರ್ವಹಣೆ ಮಾಡುವುದರಲ್ಲಿ ಸಂಸ್ಥೆ ವಿಫಲವಾದಲ್ಲಿ ದತ್ತು ನೀಡಿರುವ ರಸ್ತೆಯನ್ನು ಪಾಲಿಕೆ ಹಿಂಪಡೆಯಲಿದೆ.

ಈಗಾಗಲೇ ಕೆಲವು ಸಂಸ್ಥೆಗಳು ಪ್ರಾಯೋಗಿಕವಾಗಿ ಕೋರಮಂಗಲ, ಜೆ.ಪಿ.ನಗರ, ಸದಾಶಿವನಗರ ಸೇರಿದಂತೆ ಕೆಲವು ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇದೀಗ ಅಭ್ಯುದಯ, ಡೆಲ್, ಸಿಡಬ್ಲೂಎ, ಸಿ.ಜಿ.ಐ ಇಂಡಿಯಾ, ಎಸ್.ಡಬ್ಲೂ.ಎ.ಆರ್, ಸೇವ್‌ಗ್ರೀನ್, ಒನ್ ಡ್ರೀಮ್ ಫೌಂಡೇಷನ್, ವಿಪರ್ವ ಸೇರಿದಂತೆ 25 ಸಂಸ್ಥೆಗಳು 30ಕ್ಕೂ ಹೆಚ್ಚು ರಸ್ತೆಗಳನ್ನು ದತ್ತು ಪಡೆಯಲು ಆಸಕ್ತಿ ಹೊಂದಿದ್ದು, ಮುಂದಿನ ದಿನಗಳಲ್ಲಿ ಒಡಂಬಡಿಕೆ(ಎಂ.ಒ.ಯು) ಮಾಡಿಕೊಳ್ಳಲಾಗುತ್ತದೆ.

ಇಂಡಿಯಾ ರೈಸಿಂಗ್ ಟ್ರಸ್ಟ್ ದತ್ತು ಪಡೆದ ರಸ್ತೆಗಳು: ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಚರ್ಚ್ ಸ್ಟ್ರೀಟ್, ರಿಚ್ಮಂಡ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕ್ಯಾಮೆಸೆರಿಯೆಟ್(ಮೇಯೋಹಾಲ್ನಿಂದ ಗುರುಡಾಮಾಲ್ವರೆಗಿನ ರಸ್ತೆ, ಮದ್ರಾಸ್ ರಸ್ತೆ)ಯನ್ನು ದತ್ತು ಪಡೆದಿದೆ.

ಅರ್ಜಿ ಆಹ್ವಾನ: ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಅಡಾಪ್ಟ್ ಎ ಸ್ಟ್ರೀಟ್‌ಗೆ ಸಂಬಂಧಿಸಿದಂತೆ ಅರ್ಜಿ ಸಿದ್ಧಪಡಿಸಲಾಗಿದ್ದು, ಆಸಕ್ತರು ಅರ್ಜಿ ಭರ್ತಿ ಮಾಡಿ (adoptastreetbbmp@gmail.comಗೆ ಕಳುಹಿಸುವ ಅವಕಾಶ ಕಲ್ಪಿಸಿದೆ. ದತ್ತು ನೀಡುವ ಮುನ್ನ ಸಂಘ-ಸಂಸ್ಥೆಗೆ ಪ್ರಾಯೋಗಿಕವಾಗಿ ರಸ್ತೆ ಸ್ವಚ್ಛತೆ ಮಾಡುವಂತೆ ಸೂಚನೆ ನೀಡಲಾಗುತ್ತದೆ. ಆ ಬಳಿಕ ಪಾಲಿಕೆ ಜತೆ ಒಡಂಬಡಿಕೆ(ಎಂ.ಒ.ಯು) ಮಾಡಿಕೊಂಡು ದತ್ತು ನೀಡಲಾಗುತ್ತದೆ.

ನಗರದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ವಿನೂತನ ಯೋಜನೆಗೆ ಪಾಲಿಕೆ ಚಾಲನೆ ನೀಡಿದ್ದು, ಇದಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ. ರಸ್ತೆ ದತ್ತು ಪಡೆಯುವ ಸಂಸ್ಥೆಗೆ ಪಾಲಿಕೆ ವತಿಯಿಂದ ಸಹಕಾರ ನೀಡಲಾಗುವುದು. ಸ್ಥಳೀಯ ಪಾಲಿಕೆ ಆರೋಗ್ಯಾಧಿಕಾರಿಗಳು, ಮಾರ್ಷಲ್‌ಗಳು, ಪೌರಕಾರ್ಮಿಕರು ಅವರ ಜತೆ ಕೈಜೋಡಿಸಿ ಸ್ವಚ್ಛತೆಗೆ ಸಹಕರಿಸಲಿದ್ದಾರೆ.

-ರಂದೀಪ್, ಪಾಲಿಕೆ ವಿಶೇಷ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X