Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ : ಡಿ. 31ರಂದು ಮಕ್ಕಳ ಸಾಹಿತ್ಯ...

ವಿಟ್ಲ : ಡಿ. 31ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ24 Dec 2019 5:31 PM IST
share
ವಿಟ್ಲ : ಡಿ. 31ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

ಬಂಟ್ವಾಳ, ಡಿ. 24: ವಿಟ್ಲದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 31ರಂದು  ಬಂಟ್ವಾಳ ತಾಲೂಕು ಮಟ್ಟದ 15ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಾವಿರಕ್ಕೂ ಹೆಚ್ಚು ಸಾಹಿತ್ಯ ಪ್ರೇಮಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಮಕ್ಕಳ ಲೋಕ ಬಂಟ್ವಾಳ ಇದರ ಅಧ್ಯಕ್ಷ ಕೆ. ವಿಠಲ ಶೆಟ್ಟಿ ವಿಟ್ಲ ತಿಳಿಸಿದ್ದಾರೆ.

ಮಂಗಳವಾರ ವಿಟ್ಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಿಗ್ಗೆ ಭವ್ಯ ಮೆರವಣಿಗೆ ನಡೆಯಲಿದೆ. ವಿಟ್ಲ ಕನ್ನಡ ಸಂಘದ ಅಧ್ಯಕ್ಷ ಅನಂತಕೃಷ್ಣ ಹೆಬ್ಬಾರ್ ಕನ್ನಡ ಧ್ವಜವನ್ನೂ, ಕ.ಸಾ.ಪ. ಬಂಟ್ವಾಳ ಇದರ ಅಧ್ಯಕ್ಷ ಕೆ. ಮೋಹನ್ ರಾವ್ ಸಾಹಿತ್ಯ ಪರಿಷತ್ ಧ್ವಜವನ್ನೂ ಆರೋಹಣ ಮಾಡುವರು. ವಿದ್ಯಾರ್ಥಿನಿ ಧನ್ಯಶ್ರೀ ಬಿ. ಅಧ್ಯಕ್ಷತೆ ವಹಿಸಲಿದ್ದು, ನಿಕಟಪೂರ್ವ ಸಮ್ಮೇಳನದ ಅಧ್ಯಕ್ಷೆ ಪೆರುವಾಯಿ ಶಾಲಾ ವಿದ್ಯಾರ್ಥಿನಿ ವೀಕ್ಷಿತಾ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಬೇಕೂರಿನ ಸರಕಾರಿ ಸೆಕೆಂಡರಿ ಶಾಲೆಯ ಕಾವ್ಯ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಸಾಹಿತ್ಯ ಚಟುಟಿಕೆಗಳನ್ನು ಉತ್ತಮವಾಗಿ ನಡೆಸುವ ತಾಲೂಕಿನ ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ `ಸಾಹಿತ್ಯ ತಾರೆ' ಪ್ರಶಸ್ತಿ ಹಾಗೈ ಶಾಲೆಯಲ್ಲಿ ಮಕ್ಕಳ ಯೋಗ ಮತ್ತು ಮೌಲ್ಯಶಿಕ್ಷಣ ಚಟುವಟಿಕೆಗೆ ಉತ್ತಮ ಪ್ರೋತ್ಸಾಹ ನೀಡುತ್ತಿ ರುವ ಅಳಿಕೆಯ ಆನಂದ ಶೆಟ್ಟಿಯವರಿಗೆ ಬಾಲಬಂಧು ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಗುವುದು. ಪುತ್ತೂರು ಸುದಾನ ವಸತಿ ಶಾಲೆಯ ಸಹಶಿಕ್ಷಕಿ ಮತ್ತು ಅಂಕಣಕಾರಾದ ಕವಿತಾ ಅಡೂರು  ಸ್ಮರಣ ಸಂಚಿಕೆ ಮತ್ತು ಮಕ್ಕಳಿಂದ ರಚಿತ ಪುಸ್ತಕಗಳನ್ನು ಬಿಡುಗಡೆ ಮಾಡುವರು ಎಂದು ಅವರು ತಿಳಿಸಿದ್ದಾರೆ.

ಸುಬ್ರಾಯ ಪೈ ವಿಟ್ಲ ಇವರ ಗೌರವಾಧ್ಯಕ್ಷತೆ ಮತ್ತು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ ಇವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು, ವಿವಿಧ ಉಪಸಮಿತಿಗಳನ್ನು ಮಾಡಲಾಗಿದೆ. ಕಿರುನಾಟಕ, ಕವಿಗೋಷ್ಠಿ, ಚಿತ್ತ ಚಿತ್ತಾರ ಮತ್ತು ಕಥಾ ಬರವಣಿಗೆ ಕಾರ್ಯಕ್ರಮಗಳು ನಡೆಯಲಿದ್ದು ಇವು ವಿದ್ಯಾರ್ಥಿಗಳನ್ನು ಸಾಹಿತ್ಯರಚನೆಗೆ ಪ್ರೇರೇಪಿಸುವ ಸದಾಶಯವನ್ನು ಹೊಂದಿವೆ. ವಿವಿಧ ಗೋಷ್ಠಿಗಳಲ್ಲಿ ಭಾಗವಹಿಸುವ ಶಾಲೆಯವರು ಸಮ್ಮೇಳನಕ್ಕೆ ಒಂದು ದಿನ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ತಾಲೂಕಿನ ಶಾಲೆಗಳ ಪ್ರಸ್ತುತ, ಹಿಂದಿನ ವರ್ಷದ ವಾರ್ಷಿಕ ಮುದ್ರಿತ, ಹಸ್ತಪ್ರತಿಯಲ್ಲಿರುವ ಸಂಚಿಕೆಗಳನ್ನು ಸಮ್ಮೇಳನದಲ್ಲಿ ಪ್ರದರ್ಶಿಸಲು ಅವಕಾಶವಿದ್ದು, ಭಾಗವಹಿಸಿದ ಶಾಲೆಗೆ ಸ್ಮರಣಿಕೆ ಮತ್ತು ಪ್ರಮಾಣಪತ್ರ ನೀಡಲಾಗುವುದು. ಗ್ರಾಮಾಂತರದಲ್ಲಿ ಜರಗುವ ಕಾರ್ಯಕ್ರಮದ ನೆನಪಿನ ಬುತ್ತಿಯಾಗಿ ವಿಟ್ಲಶ್ರೀ ಎಂಬ ಸ್ಮರಣ ಸಂಚಿಕೆನ್ನು ರಮೇಶ ಎಂ ಬಾಯಾರು ಅವರ ಸಂಪಾದಕತ್ವದಲ್ಲಿ ಹೊರತರಲಾಗುತ್ತದೆ ಎಂದು ವಿಠಲ ಶೆಟ್ಟಿ ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಕ್ಕಳ ಲೋಕ ಬಂಟ್ವಾಳ ತಾಲೂಕು ಇದರ ಕೋಶಾಧಿಕಾರಿ ರಮೇಶ ಎಂ ಬಾಯಾರು, ಜೊತೆ ಕಾರ್ಯದರ್ಶಿ ಜಯಂತಿ ಉಕ್ಕುಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X