ಬಂಟ್ವಾಳ: ಡಿ. 25ರಂದು ಪಿಎಫ್‍ಐ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ
ಬಂಟ್ವಾಳ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ವತಿಯಿಂದ ಪ್ರತೀ ವರ್ಷ ವಿತರಿಸುತ್ತಿರುವ ರಾಷ್ಟ್ರೀಯ ವಿದ್ಯಾರ್ಥಿ ವೇತನ ಅಭಿಯಾನದ ಪ್ರಯುಕ್ತ ಉನ್ನತ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ 2.30ಕ್ಕೆ ಮಿತ್ತಬೈಲ್ ಮುಹಿಯುದ್ದೀನ್ ಸಮುದಾಯ ಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ 180 ವಿದ್ಯಾರ್ಥಿಗಳಿಗೆ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು. ಬಂಟ್ವಾಳ ತಾಲೂಕು ಅಧ್ಯಕ್ಷ ಅಬ್ದುಲ್ ಸಲೀಂ ಫರಂಗಿಪೇಟೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪಿಎಫ್‍ಐ ರಾಜ್ಯ ಸಮಿತಿ ಸದಸ್ಯ ಯಾಸಿರ್ ಹಸನ್, ಎಸ್‍ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





