Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಸ್‌ವೈಗೆ ಕೆಟ್ಟ ಹೆಸರು ತರುವ ಬಿಜೆಪಿಯ...

ಬಿಎಸ್‌ವೈಗೆ ಕೆಟ್ಟ ಹೆಸರು ತರುವ ಬಿಜೆಪಿಯ ಒಳಸಂಚಿನಿಂದ ಮಂಗಳೂರಿನಲ್ಲಿ ಹಿಂಸಾಚಾರ: ಯು.ಟಿ.ಖಾದರ್

ನ್ಯಾಯಾಂಗ ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Dec 2019 7:23 PM IST
share
ಬಿಎಸ್‌ವೈಗೆ ಕೆಟ್ಟ ಹೆಸರು ತರುವ ಬಿಜೆಪಿಯ ಒಳಸಂಚಿನಿಂದ ಮಂಗಳೂರಿನಲ್ಲಿ ಹಿಂಸಾಚಾರ: ಯು.ಟಿ.ಖಾದರ್

ಬೆಂಗಳೂರು, ಡಿ.24: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೆಟ್ಟ ಹೆಸರು ತರುವ ಉದ್ದೇಶದಿಂದಾಗಿ ರಾಜ್ಯದಲ್ಲಿ ಗಲಭೆ-ಹಿಂಸಾಚಾರ ಸೃಷ್ಟಿಸಲಾಗಿದೆ. ಬಿಜೆಪಿಯ ಒಳಸಂಚೆ ಇದಕ್ಕೆಲ್ಲಾ ಕಾರಣ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದರು.

ಮಂಗಳವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ನಿಷೇಧಾಜ್ಞೆಯನ್ನು ಯಾರು, ಯಾಕೆ ಜಾರಿ ಮಾಡಿದರು ಎನ್ನುವ ಮಾಹಿತಿಯೂ ಮುಖ್ಯಮಂತ್ರಿಗಿಲ್ಲ. ಯಾರೂ, ಯಾರ ಹಿಡಿತದಲ್ಲೂ ಇಲ್ಲ ಎಂದರು.

ಮಂಗಳೂರಿನಲ್ಲಿ ಪೊಲೀಸ್ ದೌರ್ಜನ್ಯ, ಗೋಲಿಬಾರ್‌ಗೆ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರಕಾರಗಳ ವೈಫಲ್ಯವೇ ಇದಕ್ಕೆ ಕಾರಣ. ಬಿಜೆಪಿ ಸರಕಾರ ದೇಶದ ಜನರ ವಿರುದ್ಧದ ದೌರ್ಜನ್ಯವನ್ನ ಕೈಬಿಡಲಿ. ಕೂಡಲೇ ಗೋಲಿಬಾರ್ ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸಲಿ ಎಂದು ಖಾದರ್ ಒತ್ತಾಯಿಸಿದರು.

ಎನ್‌ಆರ್‌ಸಿ ಹಾಗೂ ಸಿಎಎ ವಿರುದ್ಧ ಜನರ ಆಕ್ರೋಶ ಹೆಚ್ಚಾಗುತ್ತಿದೆ, ದೇಶದ ಮೂಲ ನಿವಾಸಿಗಳು ತಮ್ಮ ಪ್ರತಿರೋಧವನ್ನು ಹೊರಹಾಕುತ್ತಿದ್ದಾರೆ ಎನ್ನುವಂತಹ ವಿಚಾರವನ್ನ ಜನರ ಪ್ರತಿನಿಧಿಯಾಗಿ ನಾನು ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ. ಜನಪ್ರತಿನಿಧಿಯಾಗಿ ಜನರ ಮನಸ್ಥಿತಿಯ ಬಗ್ಗೆ ಆಳುವ ಸರಕಾರಕ್ಕೆ ತಿಳಿಸುವುದು ತಪ್ಪೇ? ಎಂದು ಖಾದರ್ ಪ್ರಶ್ನಿಸಿದರು.

ಕಂಡಲ್ಲಿ ಗುಂಡಿಕ್ಕಿ ಎಂದು ಹೇಳಲು ಕೇಂದ್ರ ಸಚಿವ ಸುರೇಶ್ ಅಂಗಡಿ ರಾಜ್ಯದ ಗೃಹ ಸಚಿವರೇ? ಅಥವಾ ಮುಖ್ಯಮಂತ್ರಿಯೇ? ಗನ್ ಇದ್ದ ಮಾತ್ರಕ್ಕೆ ಹೊಡೆಯಬೇಕು ಎಂದು ಅರ್ಥವೇ? ಹೀಗೆ ಹೇಳಿದ್ದು ಸರಿಯೇ? ಗುಪ್ತಚರ ಇಲಾಖೆ ರಾಜ್ಯದಲ್ಲಿ ಇಲ್ಲವೇ? ಎಲ್ಲ ದುರ್ಘಟನೆಗಳು ಆದ ಬಳಿಕವೇ ಇವರು ಬರುತ್ತಾರೆಯೇ? ಎಂದು ಖಾದರ್ ಕೇಳಿದರು.

ಬಿಜೆಪಿ ದೇಶದ ಉದ್ದಗಲಕ್ಕೂ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಜಾರ್ಖಂಡ್ ಉತ್ತಮ ಉದಾಹರಣೆ. ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತವಾಗಲಿದೆ. ಈ ಭಯದಿಂದಲೇ ದೇಶದ ಜನರ ಯೋಚನೆಗಳ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಅಸ್ಸಾಂ, ತ್ರಿಪುರ, ಬಿಹಾರ್, ಆಂಧ್ರಪ್ರದೇಶ, ಒರಿಸ್ಸಾದಲ್ಲಿ ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿದೆಯೇ? ಬಿಜೆಪಿ ಅಂಗ ಪಕ್ಷಗಳೇ ಪ್ರತಿಭಟನೆ ಮಾಡುತ್ತಿಲ್ಲವೇ? ಹಾಗಿದ್ದರೆ ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಿಂದ ಹೊರಗೆ ಬರಲಿ ಎಂದು ಅವರು ಸವಾಲು ಹಾಕಿದರು.

70 ವರ್ಷಗಳಿಂದ ಕಾಂಗ್ರೆಸ್ ಸರಕಾರಗಳು ದೂರದೃಷ್ಟಿಯಿಂದ ಸಂಪಾದಿಸಿದ ದೇಶದ ಸರಕಾರಿ ಸಂಪತ್ತನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕೆಲವೇ ವ್ಯಕ್ತಿಗಳಿಗೆ ಮಾರಲು ಹೊರಟಿದೆ. ಇದಕ್ಕೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ನರೇಂದ್ರ ಮೋದಿ ಸರಕಾರದ ವೈಫಲ್ಯಗಳನ್ನು ಮರೆಮಾಚಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದು ಖಾದರ್ ಕಿಡಿಗಾರಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ, ಮಹಾತ್ಮ ಗಾಂಧೀಜಿ ತತ್ವ-ಆದರ್ಶಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವವರನ್ನು ಈ ದೇಶದ ಜನತೆ ಕ್ಷಮಿಸುವುದಿಲ್ಲ. ಬಾಬಾ ಸಾಹೇಬರ ಸಂವಿಧಾನ ಬದಲಾಯಿಸಿ, ತಮ್ಮದೇ ಸಂವಿಧಾನ ತರುವ ದುರುದ್ದೇಶದಿಂದ ಇಂತಹ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಭಾರತೀಯರು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ನನ್ನ ವಿರುದ್ಧ ಎಷ್ಟೇ ಆರೋಪಗಳನ್ನು ಮಾಡಿದರೂ ಏನು ಆಗುವುದಿಲ್ಲ. ನನ್ನ ಬಗ್ಗೆ ನನ್ನ ಕ್ಷೇತ್ರದ ಬಗ್ಗೆ ಗೊತ್ತಿದೆ. ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನ್ನ ವಿರುದ್ಧ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲಿ ಎಂದು ಅವಲು ಸವಾಲು ಹಾಕಿದರು.

ಎಲ್ಲವೂ ವಿಚಾರಣೆಯಲ್ಲಿ ಹೊರಗೆ ಬರಲಿ

ಯಡಿಯೂರಪ್ಪ ಲಾಠಿ ಚಾರ್ಜ್ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತಾರೆ. ಆದರೂ ಲಾಠಿ ಚಾರ್ಜ್ ಮಾಡಲಾಗುತ್ತದೆ, ಗೋಲಿಬಾರ್ ನಡೆಯುತ್ತದೆ. ಹಾಗಾದರೆ ಪೊಲೀಸ್ ಇಲಾಖೆ ಯಡಿಯೂರಪ್ಪ ಸರಕಾರದ ಹಿಡಿತದಲ್ಲಿ ಇಲ್ಲವೇ? ಎಲ್ಲವೂ ವಿಚಾರಣೆಯಲ್ಲಿ ಹೊರಗೆ ಬರಲಿ. ಅದಕ್ಕಾಗಿ ನ್ಯಾಯಾಂಗ ತನಿಖೆಯನ್ನೇ ನಡೆಸಬೇಕು.

-ಯು.ಟಿ.ಖಾದರ್, ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X