ನೆಲಮಂಗಲದ 'ಬಂಧನ ಕೇಂದ್ರ'ದ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯೆ

ಬೆಂಗಳೂರು, ಡಿ.24: ‘ಪೌರತ್ವ ತಿದ್ದುಪಡಿ ಕಾಯ್ದೆಗೂ ಬೆಂಗಳೂರು ಹೊರ ವಲಯದ ನೆಲಮಂಗಲದ ಬಳಿ ನಿರ್ಮಿಸಿರುವ ಬಂಧನ ಕೇಂದ್ರ(ಡಿಟೆನ್ಷನ್ ಸೆಂಟರ್)ಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಕಟ್ಟಡ ಮಾದಕ ದ್ರವ್ಯ ಕಳ್ಳ ಸಾಗಾಣೆ ಪ್ರಕರಣಗಳಲ್ಲಿ ಬಂಧನಕ್ಕೊಳಗಾದ ನೈಜೀರಿಯಾ ಪ್ರಜೆಗಳನ್ನು ಇರಿಸಲು ನಿರ್ಮಿಸಲಾಗಿದೆ. ಅವರ ವಿರುದ್ಧದ ಪ್ರಕರಣ ಇತ್ಯರ್ಥ ಆಗುವವರೆಗೂ ಅವರನ್ನು ಬಂಧನ ಕೇಂದ್ರದಲ್ಲಿ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
Next Story





