ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ, ಡಿ.24: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯು ದೇಶಕ್ಕೆ ಸಂಕಷ್ಟವನ್ನು ತರುವ ತೀರ್ಮಾನವಾಗಿದೆ. ಭಾರತದಲ್ಲಿ ಹಿಂದೂ-ಮುಸ್ಲಿಮರು ಅಣ್ಣ ತಮ್ಮಂದಿರಂತೆ ಜೀವಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಕೋಮುವಾದ ಸೃಷ್ಟಿಸಿ ದೇಶವನ್ನು ಹಾಳು ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 'ಹಿಂದೂ ಮುಸ್ಲಿಂ ಬಾಯಿ ಬಾಯಿ, ವಂದೇ ಮಾತರಂ, ಹಮ್ ಸಬ್ ಏಕ್ ಹೈ, ಮೋದಿ, ಅಮಿತ್ ಸರ್ವಾಧಿಕಾರಿ ಧೋರಣೆ ನಡೆಯಲ್ಲ, ಮೋದಿ ಹಠಾವೋ ದೇಶ ಬಚಾವೊ' ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
'ಹೌದು ಹುಲಿಯಾ, ಎನ್‌ಆರ್‌ಸಿ ಬೇಡ, ಸಿಎಎ ಬೇಡ' ನಾಮಫಲಕ ಗಮನ ಸೆಳೆಯಿತು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ದೇಶದ ಏಕತೆಯನ್ನು ಕಾಪಾಡಬೇಕು ಎಂದು ಘೋಷಣೆ ಕೂಗಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿಯನ್ನು ಹಿಂಪಡೆದು ದೇಶದಲ್ಲಿರುವ ಹಿಂದೂ ಮುಸ್ಲಿಂ ಅಣ್ಣ ತಮ್ಮಂದಿರ ಭಾವೈಕ್ಯತೆಗೆ ಸಾಕ್ಷಿಯಾಗಬೇಕು ಎಂದು ಆಗ್ರಹಿಸಿದರು.





