ಪೇಜಾವರ ಸ್ವಾಮೀಜಿಗಾಗಿ ವಿಶೇಷ ಪ್ರಾರ್ಥನೆ: ಪಲಿಮಾರು ಶ್ರೀ
ಉಡುಪಿ, ಡಿ.24: ಅನಾರೋಗ್ಯಪೀಡಿತರಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಶೀಘ್ರ ಗುಣಮುಖರಾಗಿ ಬರುವಂತೆ ಶ್ರೀಕೃಷ್ಣನಿಗೆ ವಿಶೇಷ ಪ್ರಾರ್ಥನೆ ಮಾಡಲಾಗು ವುದು ಎಂದು ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಹಿಂದಿಗಿಂತ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಅವರ ಆರೋಗ್ಯ ವೃದ್ಧಿಗಾಗಿ ಪ್ರತಿದಿನ ವಿಶೇಷ ಪ್ರಾರ್ಥನೆ ನಡೆಸಲಾಗುತ್ತದೆ. ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾ ಗುವುದು. ಸ್ವಾಮೀಜಿ ಶೀಘ್ರದಲ್ಲೇ ಗುಣಮುಖರಾಗಿ ಬರುವ ವಿಶ್ವಾಸವಿದೆ ಎಂದು ಅವರು ಹೇಳಿದರು.
Next Story





