ಮೊದಲ ಪಂದ್ಯವನ್ನು ಚೆನ್ನೈನಲ್ಲಿ ಆಯೋಜಿಸಲು ಬಿಎಐ ಆಸಕ್ತಿ
ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್
ಚೆನ್ನೈ, ಡಿ.24: ಮುಂದಿನ ಆವೃತ್ತಿಯ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯವನ್ನು ಚೆನ್ನೈನಲ್ಲಿ ಆಯೋಜಿಸಲು ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾ ಆಸಕ್ತಿ ವಹಿಸಿದೆ. ಉದ್ಘಾಟನಾ ಸಮಾರಂಭದ ಜೊತೆಗೆ ಲೀಗ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ಕೋರಿ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾ (ಬಿಎಐ ) ತಮಿಳುನಾಡಿನ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದಿದೆ.
ಇಲ್ಲಿನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ಮತ್ತು ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ 2020ರ ಮೊದಲ ಪಂದ್ಯಗಳನ್ನು ನಿಗದಿಪಡಿಸಲಾಗಿದೆ.
ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಂದ್ಯಗಳು 2020ರ ಜನವರಿ 20ರಿಂದ 25ರವರೆಗೆ ನಡೆಯಲಿದೆ .
Next Story