ಸಿಎಎ ವಿರೋಧಿ ಹಿಂಸಾಚಾರದ ಆರೋಪ: ವಾರಣಾಸಿಯಲ್ಲಿ 69 ಮಂದಿ ಸಾಮಾಜಿಕ ಕಾರ್ಯಕರ್ತರ ಬಂಧನ
ವಾರಣಾಸಿ, ಡಿ.25: ಪೌರತ್ವ ಕಾಯ್ದೆ ವಿರುದ್ಧ ಡಿಸೆಂಬರ್ 19ರಂದು ವಾರಣಾಸಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ 69 ಮಂದಿ ಸಾಮಾಜಿಕ ಕಾರ್ಯಕರ್ತರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಅವರ ಪೈಕಿ 56 ಮಂದಿಯ ವಿರುದ್ಧ ಹಿಂಸಾಚಾರದಲ್ಲಿ ಭಾಗಿಯಾಗಿರುವುದು ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ.
ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿನ ಐಐಟಿಯ ಸಂಶೋಧನಾ ವಿಧ್ವಾಂಸ ದಿವಾಕರ್ ಸಿಂಗ್ ಅವರನ್ನೂ ಕೂಡಾ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಹೋರಾಟಗಾರರನ್ನು ಹಿಂಸೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧಿಸಿರುವುದು ವಾರಾಣಾಸಿಯಲ್ಲಿ ಭಾರೀ ಆತಂಕ ಸೃಷ್ಟಿಸಿದೆ.
Next Story