ಗೋಲಿಬಾರ್ ಗೆ ಬಲಿಯಾದ ಮೃತರ ಮನೆಗಳಿಗೆ ಶಾಸಕ ಎನ್ ಎ ಹಾರಿಸ್ ಭೇಟಿ

ಮಂಗಳೂರು, ಡಿ.26: ನಗರದಲ್ಲಿ ಡಿ.19ರಂದು ನಡೆದ ಗೋಲಿಬಾರ್‌ಗೆ ಬಲಿಯಾದ ಕುದ್ರೋಳಿಯ ಯುವಕ ನೌಶೀನ್ (23) ಮತ್ತು ಬಂದರ್ ಕಂದುಕ ನಿವಾಸಿ ಅಬ್ದುಲ್ ಜಲೀಲ್ (42) ಅವರ ನಿವಾಸಕ್ಕೆ ಬೆಂಗಳೂರಿನ ಶಾಂತಿನಗರ ಶಾಸಕ ಎನ್.ಎ. ಹಾರಿಸ್ ಗುರುವಾರ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಹಿಂಸಾಚಾರದಲ್ಲಿ ಗಾಯಗೊಂಡ ಮಾಜಿ ಮೇಯರ್ ಅಶ್ರಫ್‌ರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ ಅವರು, ದ.ಕ. ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್‌ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಘಟನೆಯ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕಾರ್ಪೊರೇಟರ್ ಗಳಾದ ಸಂಶುದ್ದೀನ್, ಅಬ್ದುಲ್ ಲತೀಫ್ ಹಾಗು ಮತ್ತಿತರರು ಉಪಸ್ಥಿತರಿದ್ದರು.






.gif)
.gif)
.gif)
.gif)
.gif)


