Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡ...

'ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡ ಪೊಲೀಸರಿಂದ ಭಯದ ವಾತಾವರಣ ಸೃಷ್ಟಿ'

ಸುನ್ನಿ ಕೋ-ಆರ್ಡಿನೇಶನ್ ಕರ್ನಾಟಕ ಘಟಕ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Dec 2019 6:03 PM IST
share
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡ ಪೊಲೀಸರಿಂದ ಭಯದ ವಾತಾವರಣ ಸೃಷ್ಟಿ

ಮಂಗಳೂರು, ಡಿ. 26: ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸುವ ನೆಪದಲ್ಲಿ ಮಂಗಳೂರು ಪೊಲೀಸರು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗಿದ್ದಾರೆ ಎಂದು ಸುನ್ನಿ ಕೋ-ಆರ್ಡಿನೇಶನ್ ಕರ್ನಾಟಕ ಘಟಕ ಆರೋಪಿಸಿದೆ. ಅಲ್ಲದೆ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಗುಂಡೇಟಿಗೆ ಬಲಿಯಾದ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಘೋಷಿಸಿದ ಪರಿಹಾರ ಧನವನ್ನು ನೀಡಬೇಕು ಎಂದು ಆಗ್ರಹಿಸಿದೆ.

ನಗರದ ಖಾಸಗಿ ಹೊಟೇಲಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾಝಿ ಅಲ್‌ಹಾಜ್ ಪಿಎಂ ಇಬ್ರಾಹೀಂ ಮುಸ್ಲಿಯಾರ್ ಬೇಕಲ ಮುಸ್ಲಿಮರು ಶಾಂತಿಪ್ರಿಯರು. ಯಾವತ್ತೂ ಅಹಿತಕರ ಘಟನೆಗೆ ಆಸ್ಪದ ನೀಡುವವರಲ್ಲ. ಆದರೆ ಪೊಲೀಸರು ಮೊನ್ನೆ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ನಡೆಸಿದರು. ರಕ್ಷಣೆ ನೀಡಬೇಕಾದ ಪೊಲೀಸರೇ ಹಿಂಸೆಗೆ ಪ್ರಚೋದನೆ ನೀಡಿದರು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟಿಸುವ ಹಕ್ಕು ಇದೆ. ಅದನ್ನು ಮುಸ್ಲಿಮರು ಅತ್ಯಂತ ಸಂಯಮದಿಂದಲೇ ಮಾಡುತ್ತಾ ಬಂದಿದ್ದಾರೆ. ಆದರೆ ಮೊನ್ನೆ ಪೊಲೀಸರು ಲಾಠಿ, ಗುಂಡೇಟು ಮಾಡುವ ಆವಶ್ಯಕತೆ ಇರಲಿಲ್ಲ. ಅಮಾಯಕರ ಮೇಲೆ ಗುಂಡು ಹಾರಿಸಿ ಇಬ್ಬರನ್ನು ಕೊಂದು ಹಾಕಿದರು. ಹಲವರನ್ನು ಗಾಯಗೊಳಿಸಿದರು. ಇದು ಖಂಡನೀಯ. ಉದ್ದೇಶಪೂರ್ವಕವಾಗಿ ಪೊಲೀಸರ ಎಸಗಿದ ಕ್ರೌರ್ಯದ ವಿರುದ್ಧ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್ ಸಖಾಫಿ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗಳು ಸಹಜವಾಗಿದೆ. ಅದರಂತೆ ದೇಶಾದ್ಯಂತ ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಆದರೆ ದ.ಕ.ಜಿಲ್ಲೆಯಲ್ಲಿ ಮಾತ್ರ ಪ್ರತಿಭಟನಾ ಸಮಾವೇಶಕ್ಕೆ ಹಲವು ಬಾರಿ ಅನುಮತಿ ನಿರಾಕರಿಸುವ ಮೂಲಕ ಪೊಲೀಸ್ ಅಧಿಕಾರಿಗಳು ಪ್ರತಿಭಟನೆಯ ಧ್ವನಿಯನ್ನೇ ಹತ್ತಿಕ್ಕುವ ಪ್ರಯತ್ನ ಮಾಡಿರುವುದು ಖಂಡನೀಯ ಎಂದರು.

ಡಿ.19ರಂದು ಸೆ.144ನ್ನು ಅನಗತ್ಯವಾಗಿ ಜಾರಿಗೊಳಿಸಿ ಸಂವಿಧಾನ ಬದ್ಧ ಹಕ್ಕನ್ನು ಪೊಲೀಸರು ಕಸಿದಿರುವುದರಿಂದಲೇ ಜಿಲ್ಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡಿತು. ಜಿಲ್ಲಾಧಿಕಾರಿಗಳ ಕಚೇರಿ ಮುಂದೆ, ಬಸ್ ನಿಲ್ದಾಣ, ಮೀನು ಮಾರುಕಟ್ಟೆಯ ಸುತ್ತಮುತ್ತ ಮತ್ತು ಆಸ್ಪತ್ರೆಗೆ ನುಗ್ಗಿ ಲಾಠಿಪ್ರಹಾರ ಮಾಡಿ ಜನರಲ್ಲಿ ಅನಗತ್ಯ ಭಯ ಹುಟ್ಟುವಂತೆ ಮಾಡಿದ್ದಕ್ಕೆ ವೀಡಿಯೋಗಳೇ ಸಾಕ್ಷಿ. ಆದಾಗ್ಯೂ ಪೊಲೀಸರು ಕೆಲವು ಮಾಧ್ಯಮಗಳನ್ನು ಬಳಸಿಕೊಂಡು ಅದನ್ನೆಲ್ಲಾ ಮರೆಮಾಚುತ್ತಿರುವುದು ವಿಷಾದನೀಯ. ಪೊಲೀಸರು ವಿನಾಕಾರಣ ಸಾರ್ವಜನಿಕರ ಮೇಲೆ ಲಾಠಿ ಪ್ರಯೋಗಿಸಿ ತೀವ್ರವಾಗಿ ಹಿಂಸಿಸಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಝೈನಿ ಆರೋಪಿಸಿದ್ದಾರೆ.

ಸುನ್ನಿ ಕೋ ಆರ್ಡಿನೇಶನ್‌ನ ಅಧ್ಯಕ್ಷ ಎಸ್‌ಪಿ ಹಂಝ ಸಖಾಫಿ ಮಾತನಾಡಿ ಹಿಂಸಾಚಾರದ ವೇಳೆ ಒಂದು ಸಮುದಾಯವನ್ನು ಗುರಿಯಾಗಿಸಿ ಜಾತಿ ನಿಂದನೆ ಮಾಡಿರುವುದು ವಿಡಿಯೋ ತುಣುಕುಗಳು ದೃಢ ಪಡಿಸಿವೆ. ಜನರನ್ನು ಕೊಲ್ಲುವ ಉದ್ದೇಶದಿಂದಲೇ ಬಂದೂಕು ಹಿಡಿದಿರುವುದು ಕೂಡಾ ಪೊಲೀಸರ ಸಂಭಾಷಣೆಯ ವೀಡಿಯೋಗಳಿಂದ ಸ್ಪಷ್ಟವಾಗುತ್ತದೆ. ಜನರನ್ನು ಹಿಂಸೆಗೆ ಪ್ರಚೋದಿಸಿ ಅವರು ತಿರುಗಿಬಿದ್ದಾಗ ಅವರನ್ನು ನಿಯಂತ್ರಿಸಲು ಹಲವು ಮಾರ್ಗಗಳು ಇದ್ದರೂ ಕೂಡ ಅದ್ಯಾವುದನ್ನೂ ಮಾಡದೆ ನೇರವಾಗಿ ಅಮಾಯಕರ ಮೇಲೆ ಗುಂಡೇಟು ಹಾಕಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಲಕ್ಷಾಂತರ ಜನರು ಸೇರಿದ್ದಾರೆ. ಆವಾಗ ಪೊಲೀಸರು ಲಾಠಿ-ಬಂದೂಕು ಯಾವುದನ್ನೂ ಬಳಸದೆ ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಆದರೆ, ಮಂಗಳೂರಿನಲ್ಲಿ ಬೆರೆಳೆಣಿಕೆಯಷ್ಟು ಮಂದಿಯನ್ನು ನಿಯಂತ್ರಿಸಲಾಗದ್ದು ವಿಪರ್ಯಾಸ ಎಂದರು.

ಕರ್ನಾಟಕ ಮುಸ್ಲಿಂ ಜಮಾಅತ್‌ನ ದ.ಕ.ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿಎಂ ಮುಮ್ತಾಝ್ ಅಲಿ ಮಾತನಾಡಿ ಗಲಭೆಗೆ ಸಂಬಂಧಿಸಿ ಪೋಲಿಸರು ವೀಡಿಯೋ/ಫೋಟೋ ತುಣುಕುಗಳನ್ನು ಸಂಗ್ರಹಿಸಿ ಸಾರ್ವಜನಿಕರಿಗೆ/ಮಾಧ್ಯಮಗಳಿಗೆ ಬಿಡುಗಡೆ ಮಾಡುವ ಅಗತ್ಯ ಏನಿತ್ತು? ಇದು ಸಮಾಜದಲ್ಲಿ ನಿರ್ದಿಷ್ಟ ಕೋಮಿನ ವಿರುದ್ಧ ಇತರರನ್ನು ಎತ್ತಿಕಟ್ಟುವ ಪ್ರಯತ್ನ ಅಲ್ಲವೇ? ಪ್ರಚೋದನಕಾರಿ ವಿಡಿಯೋ/ಸಂದೇಶಗಳನ್ನು ಸಾಮಾಜಿಕ ಜಾಲತಾಣ ಮೂಲಕ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡುವ ಪೊಲೀಸ್ ಅಧಿಕಾರಿಗಳೇ ಏಕಪಕ್ಷೀಯ ವೀಡಿಯೋಗಳನ್ನು ವೈರಲ್ ಮಾಡುತ್ತಿರುವುದು ದುರಂತ. ಇಂತಹ ಪ್ರಚೋದನಕಾರಿ ಕೃತ್ಯವನ್ನು ಪೊಲೀಸರೇ ಮಾಡುತ್ತಾರೆಂದರೆ ಕಾನೂನು ಪಾಲನೆಗಾಗಿ ಜನರು ಯಾರನ್ನು ಆಶ್ರಯಿಸಬೇಕು?ಎಂದು ಪ್ರಶ್ನಿಸಿದರು.

ಗುಂಡೇಟಿಗೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಘೋಷಿಸಿದ ಮುಖ್ಯಮಂತ್ರಿ ಬಳಿಕ ತನ್ನ ಹೇಳಿಕೆಗೆ ಬದ್ಧರಾಗದಿರುವುದು ವಿಪರ್ಯಾಸ. ಇದು ಮೃತರು ಮಾತ್ರವಲ್ಲ, ಕುಟುಂಬದ ಸದಸ್ಯರನ್ನು ಅವಮಾನ ಮಾಡಿದ್ದಕ್ಕೆ ಸರಿಸಮವಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದು ಯಾರು ಎಂಬುದನ್ನು ಬಂದರ್ ಠಾಣೆ ಸಹಿತ ನಗರದ ವಿವಿಧ ಕಡೆಯಿರುವ ಸಿಸಿ ಕ್ಯಾಮರಾವನ್ನು ಪರಿಶೀಲಿಸಲಿ ಎಂದು ಬಿಎಂ ಮುಮ್ತಾಝ್ ಹೇಳಿದರು.

ಮಂಗಳೂರು ಶಾಂತವಾಗುತ್ತಾ ಬಂದರೂ ಸಮಾಜದಲ್ಲಿ ಶಾಂತಿ ಮರುಸ್ಥಾಪಿಸುವ ಉದ್ದೇಶ ಪೊಲೀಸರಿಗೆ ಇದ್ದಂತಿಲ್ಲ. ಅನಗತ್ಯ ಗೋಲಿಬಾರ್‌ನಿಂದ ರೊಚ್ಚಿಗೆದ್ದ ಆಕ್ರೋಶಿತ ಸಾರ್ವಜನಿಕರ ವೀಡಿಯೋ ತುಣುಕುಗಳನ್ನು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿ ಮುಸ್ಲಿಂ ಯುವಕರನ್ನು ಗಲಭೆಕೋರರು, ಗಲಭೆಗೆ ಷಡ್ಯಂತ್ರ ರೂಪಿಸಿದವರು ಎಂಬ ಹಣೆಪಟ್ಟಿ ನೀಡುವ ಹತಾಶ ಪ್ರಯತ್ನವನ್ನು ಮಂಗಳೂರು ಪೊಲೀಸರು ಮಾಡುತ್ತಿದ್ದಾರೆ. ಮಾಧ್ಯಮ ಮತ್ತು ಸರಕಾರವನ್ನು ದಾರಿ ತಪ್ಪಿಸಿ ಘಟನೆಯನ್ನು ತಿರುಚುವ ಪ್ರಯತ್ನವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಎಸ್‌ವೈಎಸ್ ಮುಖಂಡ ಅಶ್ರಫ್ ಕಿನಾರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಜೆಯು ದ.ಕ.ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ತೋಕೆ ಮುಹಿಯ್ಯುದ್ದೀನ್ ಕಾಮಿಲ್ ಸಖಾಫಿ, ಎಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು, ಎಸ್ಸೆಸ್ಸೆಫ್ ಮುಖಂಡರಾದ ಅಬ್ದುಲ್ ಹಮೀದ್ ಬಜ್ಪೆ, ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಉಪಸ್ಥಿತರಿದ್ದರು.

ಪ್ರಕರಣದ ಬಗ್ಗೆ ಪೊಲೀಸ್ ಠಾಣೆಗಳಿಗೆ ತೆರಳಿ ದೂರು ನೀಡಲು ಹೋದಾಗ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಲಾಗುವುದು ಎಂದು ಬಿಎಂ ಮುಮ್ತಾಝ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X