Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ, ದ.ಕ.ಜಿಲ್ಲೆ ಪಂಚಾಯತ್‌ರಾಜ್...

ಉಡುಪಿ, ದ.ಕ.ಜಿಲ್ಲೆ ಪಂಚಾಯತ್‌ರಾಜ್ ಜನಪ್ರತಿನಿಧಿಗಳಿಗೆ ಹೊಳಪು ಕ್ರೀಡಾಕೂಟ: ಟ್ರೋಫಿ, ಟೀ ಶರ್ಟ್ ಅನಾವರಣ

ವಾರ್ತಾಭಾರತಿವಾರ್ತಾಭಾರತಿ26 Dec 2019 8:24 PM IST
share
ಉಡುಪಿ, ದ.ಕ.ಜಿಲ್ಲೆ ಪಂಚಾಯತ್‌ರಾಜ್ ಜನಪ್ರತಿನಿಧಿಗಳಿಗೆ ಹೊಳಪು ಕ್ರೀಡಾಕೂಟ: ಟ್ರೋಫಿ, ಟೀ ಶರ್ಟ್ ಅನಾವರಣ

ಉಡುಪಿ, ಡಿ.26: ಕೋಟತಟ್ಟು ಗ್ರಾಪಂ ಹಾಗೂ ಕಾರಂತ ಪ್ರತಿಷ್ಠಾನ ಕೋಟ ಇವರ ಆಶ್ರಯದಲ್ಲಿ ಡಿ.28ರಂದು ಕೋಟ ವಿವೇಕ ಸಂಸ್ಥೆಯ ಮೈದಾನದಲ್ಲಿ ನಡೆಯುವ ಉಡುಪಿ, ದ.ಕ ಜಿಲ್ಲೆಯ ಪಂಚಾಯತ್‌ರಾಜ್ ಜನಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆ ‘ಹೊಳಪು-2019’ ಕಾರ್ಯಕ್ರಮದ ಪ್ರಶಸ್ತಿ ವಿಜೇತರ ಟ್ರೋಫಿ ಹಾಗೂ ಕ್ರೀಡಾಪಟುಗಳಿಗೆ ನೀಡುವ ಟೀ ಶರ್ಟ್ ಮತ್ತು ಕ್ಯಾಪ್‌ಗಳ ಬಿಡುಗಡೆ ಕಾರ್ಯಕ್ರಮ ಗುರುವಾರ ಸಂಜೆ ಕೋಟ ವಿವೇಕ ಕಾಲೇಜಿನಲ್ಲಿ ನಡೆಯಿತು.

ರಾಜ್ಯದ ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಟ್ರೋಫಿಗಳ ಅನಾವರಣ ಮತ್ತು ಕ್ರೀಡೋತ್ಸವದ ಗೌರವ ಕಾರ್ಯದರ್ಶಿ ಆನಂದ್ ಸಿ.ಕುಂದರ್ ಟೀಶರ್ಟ್ ಮತ್ತು ಕ್ಯಾಪ್ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಎಲ್ಲಾ 388 ಗ್ರಾಪಂಗಳ ಸದಸ್ಯರು, 8 ತಾಪಂ, 2 ಜಿಪಂ ಹಾಗೂ 15 ನಗರ ಸ್ಥಳೀಯ ಸಂಸ್ಥೆಗಳ ಸುಮಾರು 6000ಕ್ಕೂ ಅಧಿಕ ಜನಪ್ರತಿ ನಿಧಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸಹ ಭಾಗವಹಿಸಲಿದ್ದಾರೆ. ಗ್ರಾಪಂ ಗಳು ಹಾಗೂ ಸದಸ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಆಗಮಿಸುವ ಜನಪ್ರತಿನಿಧಿಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕೈಗೊಂಡಿದ್ದು, ಪಾರ್ಕಿಂಗ್‌ಗೆ ಸ್ಥಳ ಗುರುತಿಸಲಾಗಿದೆ. ಎಲ್ಲಾ ಜನಪ್ರತಿನಿಧಿಗಳು ಪಕ್ಷಬೇಧ ಮರೆತು ಕ್ರೀಡಾಕೂಟದಲ್ಲಿ ಬಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕೋಟತಟ್ಟು ಗ್ರಾಪಂ ಅಧ್ಯಕ್ಷ ರಘು ತಿಂಗಳಾಯ, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್ ಹಾಗೂ ಕ್ರೀಡಾಕೂಟದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಚಿವರ ಆಪ್ತ ಸಹಾಯಕ ಹರೀಶ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕ ನರೇಂದ್ರ ಕುಮಾರ್ ಕೋಟ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X