ಉಡುಪಿಗೆ ಭೇಟಿ ನೀಡಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ

ಉಡುಪಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾ. ಶರದ್ ಅರವಿಂದ್ ಬೋಬ್ಡೆ ಅವರು ಗುರುವಾರ ಉಡುಪಿಗೆ ಭೇಟಿ ನೀಡಿದ ಸಂದರ್ಭ ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾದ ಸಿ.ಎಮ್. ಜೋಷಿ, ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಮ್ ಶೆಟ್ಟಿ, ಪ್ರಧಾನಕಾರ್ಯದರ್ಶಿ ರೆನಾಲ್ಡ್ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಬಿ. ನಾಗರಾಜ್, ಹಿರಿಯ ವಕೀಲರುಗಳಾದ ಮಟ್ಟಾರು ರತ್ನಾಕರ ಹೆಗ್ಡೆ, ಕೆ.ಸಿ.ಎಂ. ಭಕ್ತ, ಪ್ರದೀಪ್‌ಕುಮಾರ್, ಯುವ ವಕೀಲ ಅಸದುಲ್ಲಾ ಕಟಪಾಡಿ ಉಪಸ್ಥಿತರಿದ್ದರು.
Next Story





