ಮಂಗಳೂರು: ವಿಕಾಸ ಕಾಲೇಜಿನಲ್ಲಿ ಸೂರ್ಯಗ್ರಹಣ ವೀಕ್ಷಣೆ

ಮಂಗಳೂರು: ವಿಕಾಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸುವ ಅವಕಾಶವನ್ನು ಕಲ್ಪಿಸಲಾಯಿತು. ವಿದ್ಯಾರ್ಥಿಗಳು ಸೂರ್ಯ ಗ್ರಹಣವನ್ನು ವೀಕ್ಷಿಸುವಾಗ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಲಾಯಿತು.
ವಿದ್ಯಾರ್ಥಿಗಳಿಗೆ ವೈಜ್ಞಾನಿಕ ವಿಶ್ಲೇಷಣೆಯ ಜೊತೆಗೆ ಸೂರ್ಯ ಗ್ರಹಣದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ದೂರೀಕರಿಸುವ ಬಗ್ಗೆ ಸಮಜಾಯಿಷಿ ನೀಡಲಾಯಿತು.
ಐ.ಎಸ್.ಓ. ಧೃಡೀಕೃತ ಬಾಹ್ಯಾಕಾಶ ವೀಕ್ಷಣಾ ದೂರದರ್ಶಕಗಳ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕ, ಶಿಕ್ಷಕೇತರ ವರ್ಗದವರು ಸಂಪೂರ್ಣವಾಗಿ ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.

Next Story





