Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂಕನಾಡಿಯ ‘ತಾತ್ಕಾಲಿಕ ಮಾರುಕಟ್ಟೆ’ಗೆ...

ಕಂಕನಾಡಿಯ ‘ತಾತ್ಕಾಲಿಕ ಮಾರುಕಟ್ಟೆ’ಗೆ ಶೀಘ್ರ ‘ವ್ಯಾಪಾರ’ ಸ್ಥಳಾಂತರ

ಹಳೆಯ ಮಾರುಕಟ್ಟೆ ಕೆಡವಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ27 Dec 2019 8:19 PM IST
share
ಕಂಕನಾಡಿಯ ‘ತಾತ್ಕಾಲಿಕ ಮಾರುಕಟ್ಟೆ’ಗೆ ಶೀಘ್ರ ‘ವ್ಯಾಪಾರ’ ಸ್ಥಳಾಂತರ

ಮಂಗಳೂರು, ಡಿ.27: ನಗರದ ಕಂಕನಾಡಿಯ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಬಹುತೇಕ ಮುಗಿದಿದ್ದು, ಹೊಸ ವರ್ಷದ ಜನವರಿಯಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ. ಈ ಮಧ್ಯೆ ಹಳೆಯ ಮಾರುಕಟ್ಟೆಯನ್ನು ಕೆಡವಿ ಅಲ್ಲಿ ಹೊಸ ಮಾರುಕಟ್ಟೆ ನಿರ್ಮಿಸುವ ಸಿದ್ಧತೆಯೂ ನಡೆಯುತ್ತಿದೆ.

ಸುಮಾರು 25 ವರ್ಷ ಹಿಂದಿನ ಕಂಕನಾಡಿಯ ಮಾರುಕಟ್ಟೆಯನ್ನು ಕೆಡವಿ ಅಲ್ಲಿ ಸ್ಮಾರ್ಟ್ ಸಿಟಿಗೆ ಅನುಗುಣವಾಗಿ ಹೊಸ ಮಾರುಕಟ್ಟೆ ನಿರ್ಮಿಸಬೇಕು ಎಂದು ಕಂಕನಾಡಿ ಮಾರುಕಟ್ಟೆಯ ವರ್ತಕರ ಸಂಘವು ಆಗ್ರಹಿಸುತ್ತಾ ಬಂದಿತ್ತು. ಅದರಂತೆ ಸ್ಥಳೀಯ ಕಾರ್ಪೊರೇಟರ್ ನವೀನ್ ಡಿಸೋಜ ಮುತುವರ್ಜಿ ವಹಿಸಿ ಹೈಟೆಕ್ ಮಾರುಕಟ್ಟೆ ನಿರ್ಮಿಸಲು ಯೋಜನೆ ರೂಪಿಸಿದ್ದರು.

ಹೊಸ ಮಾರುಕಟ್ಟೆ ನಿರ್ಮಿಸುವ ಮುನ್ನ ಹಳೆಯ ಮಾರುಕಟ್ಟೆಯನ್ನು ಕೆಡವಬೇಕು. ಅದಕ್ಕಾಗಿ ಹಳೆಯ ಮಾರುಕಟ್ಟೆಯ ವ್ಯಾಪಾರಿ ಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಹಿನ್ನೆಲೆಯಲ್ಲಿ 1.60 ಕೋ.ರೂ. ವೆಚ್ಚದಲ್ಲಿ ಕೆಲವು ತಿಂಗಳ ಹಿಂದೆ ಕಂಕನಾಡಿ ಮೈದಾನ ದಲ್ಲೇ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು.

ತಾತ್ಕಾಲಿಕ ಮಾರುಕಟ್ಟೆಯಲ್ಲಿ 100ಕ್ಕೂ ಅಧಿಕ ಅಂಗಡಿ ಕೋಣೆಗಳನ್ನು ನಿರ್ಮಿಸಲಾಗಿದೆ. ಮೀನು, ಮಾಂಸ ಮಾರಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದೆ. 2020ರ ಜನವರಿಯಲ್ಲಿ ಹಳೆಯ ಮಾರುಕಟ್ಟೆ ಯಿಂದ ತಾತ್ಕಾಲಿಕ ಮಾರುಕಟ್ಟೆಗೆ ವ್ಯಾಪಾರ ಸ್ಥಳಾಂತರಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

''ಹೊಸ ಮಾರುಕಟ್ಟೆಯು ಮಾಲ್ ಮಾದರಿಯಲ್ಲಿ 41 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಹಣ್ಣು ಹಂಪಲು, ತರಕಾರಿ, ಜಿನಸಿ, ಆಟಿಕೆ, ಮೀನು, ಮಾಂಸ ಹೀಗೆ ಪ್ರತೀ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಅಲ್ಲದೆ ಸಂಪೂರ್ಣ ಗ್ರಾನೈಟ್ ಅಳವಡಿಕೆ, ಸ್ವಚ್ಚತೆಗೆ ಆದ್ಯತೆ ನೀಡಲಾಗುವುದು. ಆಕರ್ಷಕ ಹೊರಭಾಗ, ಪೂರ್ಣ ಮಟ್ಟದ ಶೌಚಾಲಯ, ಶುದ್ಧ ಕುಡಿಯುವ ನೀರು,ಮಾರುಕಟ್ಟೆಗೆ ಆಕರ್ಷಣೀಯ ಸ್ಪರ್ಶ ನೀಡಲಾಗುವುದು''.

ನವೀನ್ ಡಿಸೋಜ, ಸ್ಥಳೀಯ ಕಾರ್ಪೊರೇಟರ್

''ತಾತ್ಕಾಲಿಕ ಮಾರುಕಟ್ಟೆಯ ಕೆಲಸ ಬಹುತೇಕ ಮುಗಿದಿದೆ. ಇನ್ನು ಸ್ವಲ್ಪ ಕೆಲಸ ಬಾಕಿಯಿದ್ದು, ಜನವರಿಯಲ್ಲಿ ತಾತ್ಕಾಲಿಕ ಮಾರುಕಟ್ಟೆ ಪ್ರವೇಶಿಸಲು ಆಡಳಿತ ವರ್ಗ ಅವಕಾಶ ಮಾಡಿಕೊಡಬೇಕು. ಅಲ್ಲದೆ, ಹಳೆಯ ಮಾರುಕಟ್ಟೆಯನ್ನು ಶೀಘ್ರ ಕೆಡವಿ ಅಲ್ಲಿ ಹೈಟೆಕ್ ಮಾರುಕಟ್ಟೆಯನ್ನು ಕಾಲಮಿತಿಯೊಳಗೆ ನಿರ್ಮಿಸಬೇಕು. ಈವರೆಗೆ ಸ್ಥಳೀಯ ಕಾರ್ಪೊರೇಟರ್ ನವೀನ್ ಡಿಸೋಜ, ಮನಪಾ ಕಾರ್ಯನಿರ್ವಾಹಕ ಅಭಿಯಂತರ ಲಿಂಗೇಗೌಡ, ಗುತ್ತಿಗೆದಾರ ಲೋಕೇಶ್ ಅವರು ಕಂಕನಾಡಿ ಮಾರುಕಟ್ಟೆ ವರ್ತಕರ ಸಂಘದ ಸಲಹೆ ಪಡೆದುಕೊಂಡೇ ಕಾರ್ಯನಿರ್ವಹಿಸಿದ್ದಾರೆ. ಶುಕ್ರವಾರವೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾತ್ಕಾಲಿಕ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಮಾತ್ರವಲ್ಲ ಗ್ರಾಹಕರರಿಗೆ ತೊಂದರೆಯಾಗದಂತೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದಾರೆ''.

- ಅಲಿ ಹಸನ್, ಅಧ್ಯಕ್ಷರು
ಕಂಕನಾಡಿ ಮಾರುಕಟ್ಟೆ ವರ್ತಕರ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X