Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾರ್ಟಿ ವೇಳೆ ಬಾಲಿವುಡ್ ನಿರ್ಮಾಪಕಿ- ನಟಿ...

ಪಾರ್ಟಿ ವೇಳೆ ಬಾಲಿವುಡ್ ನಿರ್ಮಾಪಕಿ- ನಟಿ ಸಂಜನಾ ನಡುವೆ ಹೊಡೆದಾಟ ?

ಇಬ್ಬರಿಂದಲೂ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ27 Dec 2019 9:26 PM IST
share
ಪಾರ್ಟಿ ವೇಳೆ ಬಾಲಿವುಡ್ ನಿರ್ಮಾಪಕಿ- ನಟಿ ಸಂಜನಾ ನಡುವೆ ಹೊಡೆದಾಟ ?

ಬೆಂಗಳೂರು, ಡಿ.27: ಚಿತ್ರನಟಿ ಸಂಜನಾ ಗಲ್ರಾನಿ ಮತ್ತು ಚಿತ್ರ ನಿರ್ಮಾಪಕಿ ವಂದನಾ ಜೈನ್ ಗುಂಡು ಪಾರ್ಟಿ ಮತ್ತಿನಲ್ಲಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ವಂದನಾ ಮೇಲೆ ಸಂಜನಾ ಗ್ಲಾಸ್ ಎಸೆದು ರಾದ್ಧಾಂತ ಮಾಡಿದರೆ, ಸಂಜನಾ ಕೈಯನ್ನು ವಂದನಾ ತಿರುಚಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಗರದ ಹೊಟೇಲ್ ಒಂದರಲ್ಲಿ ಡಿ. 24ರಂದು ರಾತ್ರಿ ಒಂದೇ ಟೇಬಲ್‌ನಲ್ಲಿ ಸಂಜನಾ ಹಾಗೂ ವಂದನಾ ಕ್ರಿಸ್‌ಮಸ್ ಪಾರ್ಟಿ ಮಾಡಿದ್ದರು. ಈ ವೇಳೆ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ವಿಕೋಪಕ್ಕೆ ತಿರುಗಿದಾಗ ವಿಸ್ಕಿ ಗ್ಲಾಸ್‌ನಿಂದ ವಂದನಾ ಮೂಗಿಗೆ ಸಂಜನಾ ಹೊಡೆದಿದ್ದಾರೆ ಎನ್ನಲಾಗಿದೆ.

ಈ ಘಟನೆ ಬಳಿಕ ವಂದನಾ ಅವರು ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಸಂಜನಾ ಅವರು ಗಲಾಟೆ ಮಾಡಿದ್ದಾರೆ ಎಂದು ದೂರು ಬಂದಿದೆ. ವಂದನಾ ಜೈನ್ ಅವರು ದೂರು ನೀಡಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರು ಹೆಚ್ಚಿನ ತನಿಖೆಗೆ ನ್ಯಾಯಾಲಯದಲ್ಲಿ ಅನುಮತಿ ಪಡೆದರೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ತಾಯಿ-ತಂಗಿ ನಿಂದಿಸಿದರೂ ಸುಮ್ಮನಿರಬೇಕಾ: ಸಂಜನಾ
ವಂದನಾ ಜೈನ್ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಕೈಯನ್ನು ತಿರುಚಿ ಮೊಬೈಲ್ ಕೂಡ ಕಸಿದುಕೊಂಡಿದ್ದಾರೆ. ಅಲ್ಲದೇ ನನ್ನ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ತಾಯಿಯನ್ನು ನಿಂದಿಸಿದರೂ ನಾನು ಬಾಯಿಮುಚ್ಚಿಕೊಂಡು ಸುಮ್ಮನಿರಬೇಕಾ. ಅವರು ನನ್ನ ಬಳಿ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ದೂರು ದಾಖಲಿಸುತ್ತೇನೆ ಎಂದು ಸಂಜನಾ ಪ್ರತಿಕ್ರಿಯಿಸಿದ್ದಾರೆ.

ಅಂದು ನಡೆದ ಗಲಾಟೆಯನ್ನು ನನ್ನ ಅಣ್ಣ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಆ ಸಾಕ್ಷ್ಯ ನನ್ನಲ್ಲಿದೆ. ಆದರೆ, ಯಾವುದೇ ಕಾರಣಕ್ಕೂ ನಾನು ಅದನ್ನು ಬಹಿರಂಗಪಡಿಸುವುದಿಲ್ಲ, ಪ್ರಚಾರದ ಅಗತ್ಯವೂ ನನಗಿಲ್ಲ ಎಂದಿದ್ದಾರೆ.

ವಂದನಾ ಮಾಡಿರುವ ಹಲ್ಲೆಯಿಂದ ಗಾಯಗೊಂಡಿರುವುದಾಗಿ ಆಪಾದಿಸಿರುವ ಸಂಜನಾ, ಡಿ.25ರಂದು ಕೋಲ್ಸ್ ಪಾರ್ಕ್‌ನ ಸಂತೋಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅದಕ್ಕೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳನ್ನು ಶುಕ್ರವಾರ ಅವರು ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರನ್ನು ಭೇಟಿ ಮಾಡಿ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿ, ಈ ಮಹಿಳೆಯಿಂದ ನನಗೆ ರಕ್ಷಣೆ ಬೇಕಾಗಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X