ದ್ವಿತೀಯ ಪಿಯು ಪರೀಕ್ಷೆ: ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರ ಪ್ರಕಟ
ಬೆಂಗಳೂರು, ಡಿ.27: ದ್ವಿತೀಯ ಪಿಯು ಪರೀಕ್ಷೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ಕರಡು ಪ್ರವೇಶಪತ್ರಗಳನ್ನು ಪಿಯುಸಿ ಆನ್‌ಲೈನ್‌ನಲ್ಲಿ ಪ್ರಕಟಿಸಿದ್ದು, ಇದರಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಿಕೊಳ್ಳಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಎಲ್ಲ ಕಾಲೇಜಿನ ಪ್ರಾಂಶುಪಾಲರು ಡೌನ್‌ಲೋಡ್ ಮಾಡಿಕೊಂಡು ಸಂಬಂಧಿಸಿದ ವಿದ್ಯಾರ್ಥಿಗಳಿಗೆ ವಿತರಿಸಿ, ಕರಡು ಪ್ರವೇಶ ಪತ್ರ ಎಲ್ಲ ರೀತಿಯಲ್ಲೂ ಸರಿಯಾಗಿದೆಯೇ ಎಂಬುದರ ಕುರಿತು ವಿದ್ಯಾರ್ಥಿಗಳಿಂದ ಸಹಿ ಪಡೆದು ಸರಿಯಿರುವ ಅಡ್ಮಿಷನ್ ಟಿಕೆಟ್‌ಗಳನ್ನು ಕಾಲೇಜಿನಲ್ಲಿ ಸುರಕ್ಷಿತವಾಗಿ ಇಡಬೇಕು.
ಕರಡು ಪ್ರವೇಶ ಪತ್ರಗಳಲ್ಲಿ ಯಾವುದೇ ವ್ಯತ್ಯಾಸ ಅಥವಾ ನ್ಯೂನತೆಗಳಿದ್ದಲ್ಲಿ ಜ.6ರೊಳಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರು ಅಥವಾ ಸಿಬ್ಬಂದಿಗಳು ನೇರವಾಗಿ ಕೇಂದ್ರ ಕಚೇರಿಯ ಗಣಕ ವಿಭಾಗಕ್ಕೆ ಬಂದು ಸರಿಪಡಿಸಿಕೊಳ್ಳಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





